Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅದಕ್ಕೆ ಇಸಾಕನು ಬಹಳವಾಗಿ ಗಡಗಡನೆ ನಡುಗುತ್ತಾ, “ಯಾರೋ ಬೇರೊಬ್ಬನು ಬೇಟೆ ಮಾಂಸವನ್ನು ತಂದು ನನಗೆ ಕೊಟ್ಟುಹೋದನಲ್ಲಾ. ನೀನು ಬರುವುದಕ್ಕಿಂತ ಮೊದಲೇ ಅವನು ತಂದಿದ್ದರಲ್ಲಿ ನಾನು ಊಟಮಾಡಿ ಅವನನ್ನೇ ಆಶೀರ್ವದಿಸಿದೆನು; ಅವನಿಗೆ ಮಾಡಿದ ಆಶೀರ್ವಾದ ತಪ್ಪಲಾರದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಆಗ ಇಸಾಕನು ಗಡಗಡನೆ ನಡುಗುತ್ತಾ, “ಹಾಗಾದರೆ ಬೇಟೆಯಾಡಿ ನನಗೆ ಊಟ ತಂದುಕೊಟ್ಟವನಾರು? ನೀನು ಬರುವುದಕ್ಕೆ ಮುಂಚೆ ಅವನು ತಂದುದನ್ನು ಊಟಮಾಡಿ ಅವನನ್ನೇ ಅಂತಿಮವಾಗಿ ಆಶೀರ್ವದಿಸಿಬಿಟ್ಟೆನು; ಅವನಿಗೆ ಮಾಡಿದ ಆಶೀರ್ವಾದ ಇನ್ನು ತಪ್ಪಲಾರದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅದಕ್ಕೆ ಇಸಾಕನು ಬಹಳವಾಗಿ ಗಡಗಡನೆ ನಡುಗುತ್ತಾ - ಯಾರೋ ಬೇರೊಬ್ಬನು ಬೇಟೆ ಮಾಂಸವನ್ನು ತಂದು ನನಗೆ ಕೊಟ್ಟುಹೋದನಲ್ಲಾ. ನೀನು ಬರುವದಕ್ಕಿಂತ ಮುಂಚೆ ಅವನು ತಂದದ್ದರಲ್ಲಿ ನಾನು ಊಟ ಮಾಡಿ ಅವನನ್ನೇ ಆಶೀರ್ವದಿಸಿದೆನು; ಅವನಿಗೆ ಮಾಡಿದ ಆಶೀರ್ವಾದ ತಪ್ಪಲಾರದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆಗ ಇಸಾಕನು ತುಂಬ ವ್ಯಸನಗೊಂಡು ಗಡಗಡನೆ ನಡುಗುತ್ತಾ ಅವನಿಗೆ, “ನೀನು ಬರುವುದಕ್ಕಿಂತ ಮೊದಲೇ ಅಡಿಗೆಯನ್ನು ಸಿದ್ಧಪಡಿಸಿ ನನಗೆ ತಂದುಕೊಟ್ಟವನು ಯಾರು? ನಾನು ಅದನ್ನೆಲ್ಲ ತಿಂದು ಅವನನ್ನು ಆಶೀರ್ವದಿಸಿದೆನು. ಈಗ ನನ್ನ ಆಶೀರ್ವಾದವನ್ನು ಹಿಂತೆಗೆದುಕೊಳ್ಳಲಾಗದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆಗ ಇಸಾಕನು ಬಹಳವಾಗಿ ನಡುಗುತ್ತಾ, “ನೀನು ಬರುವುದಕ್ಕಿಂತ ಮೊದಲು ಬೇಟೆಯಾಡಿ ನನಗೆ ಊಟ ತಂದವನು ಯಾರು? ಅವನು ಎಲ್ಲಿದ್ದಾನೆ? ನೀನು ಬರುವುದರೊಳಗಾಗಿ ನಾನು ಎಲ್ಲವನ್ನೂ ಊಟಮಾಡಿ ಅವನನ್ನು ಆಶೀರ್ವದಿಸಿದೆನು. ಅವನು ಆಶೀರ್ವಾದ ಹೊಂದಿರುವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:33
14 ತಿಳಿವುಗಳ ಹೋಲಿಕೆ  

ದೇವರು ವರಗಳನ್ನು ಅನುಗ್ರಹಿಸುವುದಕ್ಕೆ ಜನರನ್ನು ಕರೆಯುವುದ್ದಕ್ಕೂ ಮನಸ್ಸು ಬದಲಾಯಿಸುವವನಲ್ಲ.


ನಂಬಿಕೆಯಿಂದಲೇ ಇಸಾಕನು ಯಾಕೋಬನನ್ನು ಮತ್ತು ಏಸಾವನನ್ನು ಆಶೀರ್ವದಿಸಿದಾಗ ಮುಂದೆ ಸಂಭವಿಸಬಹುದಾದ ವಿಷಯಗಳನ್ನು ಸೂಚಿಸಿದನು.


ನಮ್ಮ ಕರ್ತನಾದ ಯೇಸುಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ, ಆತನು ಪರಲೋಕದಲ್ಲಿನ ಸಕಲ ಆತ್ಮೀಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.


ಕಳ್ಳನಾದರೋ ಕದ್ದುಕೊಳ್ಳುವುದಕ್ಕೂ, ಕೊಯ್ಯುವುದಕ್ಕೂ ಮತ್ತು ನಾಶಮಾಡುವುದಕ್ಕೂ ಬರುತ್ತಾನೆಯೇ ಹೊರತು ಮತ್ತಾವುದಕ್ಕೂ ಬರುವುದಿಲ್ಲ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು.


ಅಂಜಿ ನಡುಗುತ್ತಿದ್ದೇನೆ; ದಿಗಿಲು ನನ್ನನ್ನು ಹಿಡಿದಿದೆ.


“ಇದಲ್ಲದೆ ನನ್ನ ಎದೆಯು ಅದಕ್ಕೆ ತತ್ತರಗೊಂಡು, ಮಿಡಿಯುತ್ತ ತನ್ನ ಸ್ಥಳದಿಂದ ಕದಲುವುದು.


ಈ ವಿಷಯವನ್ನು ನೆನಪಿಗೆ ತಂದುಕೊಂಡ ಹಾಗೆಲ್ಲಾ, ನಡುಕವು ನನ್ನ ಮಾಂಸವನ್ನು ಹಿಡಿಯುತ್ತದೆ.


ಯೆಹೋವನು ಆಕೆಗೆ, “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳು ಇವೆ; ಆ ಎರಡು ಜನಾಂಗಗಳು ಹುಟ್ಟಿನಿಂದಲೇ ಭಿನ್ನವಾಗಿರುವವು; ಅವುಗಳಲ್ಲಿ ಒಂದು ಮತ್ತೊಂದಕ್ಕಿಂತ ಬಲಿಷ್ಠವಾಗುವುದು; ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು” ಎಂದು ಹೇಳಿದನು.


“ನಿನ್ನ ತಮ್ಮನು ಮೋಸದಿಂದ ಬಂದು ನಿನಗಾಗಬೇಕಾಗಿದ್ದ ಆಶೀರ್ವಾದವನ್ನು ಪಡೆದುಕೊಂಡನು” ಎಂದನು.


ಆಗ ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಅವನಿಗೆ ಆಜ್ಞಾಪಿಸಿದ್ದೇನೆಂದರೆ, “ನೀನು ಕಾನಾನ್ಯರ ಹೆಣ್ಣನ್ನು ಮದುವೆಯಾಗಬಾರದು.


ಅವರನ್ನು ಆಶೀರ್ವದಿಸುವುದಕ್ಕೆ ನನಗೆ ಅಪ್ಪಣೆಯಾಯಿತು. ಆತನು ಆಶೀರ್ವದಿಸಿದ ನಂತರ ನಾನು ಬದಲಾಯಿಸಲಾರೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು