Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಹಿರಿಮಗನಾದ ಏಸಾವನು ಹೇಳಿದ ಮಾತು ರೆಬೆಕ್ಕಳಿಗೆ ತಿಳಿದುಬಂದಾಗ ಆಕೆಯು ತನ್ನ ಕಿರಿಯ ಮಗನಾದ ಯಾಕೋಬನನ್ನು ಕರೆದು ಅವನಿಗೆ, “ನೋಡು, ನಿನ್ನ ಅಣ್ಣನಾದ ಏಸಾವನು ನಿನ್ನನ್ನು ಕೊಂದು ಸಮಾಧಾನದಿಂದ ಇರಬೇಕೆಂದುಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ತನ್ನ ಹಿರಿಯ ಮಗ ಏಸಾವನ ಅನಿಸಿಕೆಯು ರೆಬೆಕ್ಕಳಿಗೆ ತಿಳಿದು ಬಂದಾಗ ಆಕೆ ತನ್ನ ಕಿರಿಯ ಮಗ ಯಕೋಬನನ್ನು ಕರೆದು ಹೀಗೆಂದಳು: “ನೋಡು, ನಿನ್ನ ಅಣ್ಣ ಏಸಾವನು ನಿನ್ನನ್ನು ಕೊಂದು ಸೇಡು ತೀರಿಸಿಕೊಳ್ಳಬೇಕೆಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಹಿರೀ ಮಗನಾದ ಏಸಾವನು ಹೇಳಿದ ಮಾತು ರೆಬೆಕ್ಕಳಿಗೆ ತಿಳಿದುಬಂದಾಗ ಆಕೆಯು ತನ್ನ ಕಿರೀ ಮಗನಾದ ಯಾಕೋಬನನ್ನು ಕರೆದು ಅವನಿಗೆ - ನೋಡು, ನಿನ್ನ ಅಣ್ಣನಾದ ಏಸಾವನು ನಿನ್ನನ್ನು ಕೊಲ್ಲಬೇಕೆಂದು ಯೋಚಿಸಿ ತನ್ನ ಹೊಟ್ಟೆಯ ಉರಿಯನ್ನು ಆರಿಸಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಏಸಾವನು ಯಾಕೋಬನನ್ನು ಕೊಲ್ಲಬೇಕೆಂದಿರುವುದು ರೆಬೆಕ್ಕಳಿಗೆ ತಿಳಿಯಿತು. ಆಕೆ ಯಾಕೋಬನನ್ನು ಕರೆಸಿ ಅವನಿಗೆ, “ಕೇಳು, ನಿನ್ನ ಅಣ್ಣನಾದ ಏಸಾವನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ರೆಬೆಕ್ಕಳಿಗೆ ತನ್ನ ಹಿರಿಯ ಮಗ ಏಸಾವನ ಬಗ್ಗೆ ಗ್ರಹಿಸಿದಾಗ, ಆಕೆಯು ತನ್ನ ಕಿರಿಯ ಮಗ ಯಾಕೋಬನನ್ನು ಕರೆದು ಅವನಿಗೆ, “ನಿನ್ನ ಸಹೋದರ ಏಸಾವನು ನಿನ್ನನ್ನು ಕೊಂದು, ತನ್ನನ್ನು ಸಂತೈಸಿಕೊಳ್ಳುವುದಕ್ಕಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:42
11 ತಿಳಿವುಗಳ ಹೋಲಿಕೆ  

ಅವರು ಕೆಟ್ಟದ್ದನ್ನು ಮಾಡುವುದರಲ್ಲಿ ಸಂತೋಷಿಸಿ, ಕೆಟ್ಟವರ ದುಷ್ಟತನದಲ್ಲಿ ಆನಂದಿಸುವರು.


ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು ತಮ್ಮೊಳಗೆ, “ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; ನಮ್ಮನ್ನು ನೋಡುವವರು ಯಾರು?” ಅಂದುಕೊಳ್ಳುತ್ತಾರೆ.


ದಾವೀದನ ಇಬ್ಬರು ಹೆಂಡತಿಯರಾದ ಇಜ್ರೇಲಿನವಳಾದ ಅಹೀನೋವಮಳೂ, ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸೆರೆಯಾಗಿ ಹೋಗಿದ್ದರು.


ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿಮಿತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ, “ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು. ತರುವಾಯ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು” ಎಂದುಕೊಂಡನು.


ಆದುದರಿಂದ ಮಗನೇ, ನನ್ನ ಮಾತಿಗೆ ವಿಧೇಯನಾಗು; ನೀನು ಎದ್ದು ಹಾರಾನಿನಲ್ಲಿರುವ ನನ್ನ ಅಣ್ಣನಾದ ಲಾಬಾನನ ಬಳಿಗೆ ಹೊರಟುಹೋಗು.


ಬಳಿಕ ಯಾಕೋಬನು ತನಗಿಂತ ಮೊದಲು ಎದೋಮ್ಯರ ಪ್ರದೇಶವಾಗಿರುವ ಸೇಯೀರ್ ಸೀಮೆಗೆ ತನ್ನ ಅಣ್ಣನಾದ ಏಸಾವನ ಬಳಿಗೆ ಸೇವಕರನ್ನು ಕಳುಹಿಸಿದನು.


ನನ್ನ ಅಣ್ಣನಾದ ಏಸಾವನು ಬಂದು ನನ್ನನ್ನೂ, ನನ್ನ ಮಕ್ಕಳನ್ನೂ, ಅವರ ತಾಯಿಯರನ್ನೂ ಕೊಂದುಹಾಕುವನೋ ಎಂದು ನನಗೆ ಭಯವಿದೆ. ಅವನ ಕೈಗೆ ಸಿಕ್ಕದಂತೆ ನಮ್ಮನ್ನು ಕಾಪಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು