Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದುದರಿಂದ ಮಗನೇ, ನೀನು ನನ್ನ ಮಾತಿಗೆ ಕಿವಿಗೊಟ್ಟು ನನ್ನ ಅಪ್ಪಣೆಯಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದುದರಿಂದ ಮಗನೇ, ನೀನು ನನ್ನ ಮಾತಿಗೆ ಕಿವಿಗೊಟ್ಟು ನಾನು ಹೇಳುವಂತೆ ಮಾಡು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದದರಿಂದ ಮಗನೇ, ನೀನು ನನ್ನ ಮಾತಿಗೆ ಕಿವಿಗೊಟ್ಟು ನನ್ನಪ್ಪಣೆಯಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದ್ದರಿಂದ ಮಗನೇ, ನನ್ನ ಮಾತನ್ನು ಕೇಳು ಮತ್ತು ನಾನು ಹೇಳಿದ್ದನ್ನು ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದ್ದರಿಂದ ಈಗ ನನ್ನ ಮಗನೇ, ನಾನು ನಿನಗೆ ಆಜ್ಞಾಪಿಸುವ ನನ್ನ ಮಾತಿಗೆ ವಿಧೇಯನಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:8
8 ತಿಳಿವುಗಳ ಹೋಲಿಕೆ  

ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ವಿಧೇಯರಾಗಿರಿ. ಇದು ನ್ಯಾಯವಾದದ್ದು.


ಅವನ ತಾಯಿಯು ಅವನಿಗೆ, “ಮಗನೇ, ಅವನು ನಿನಗೆ ಶಾಪಕೊಟ್ಟರೆ ಆ ಶಾಪ ನನಗಿರಲಿ; ನೀನು ನನ್ನ ಮಾತನ್ನು ಕೇಳಿ ಆಡಿನ ಮರಿಗಳನ್ನು ತೆಗೆದುಕೊಂಡು ಬಾ” ಎಂದು ಹೇಳಿದಳು.


ಪೇತ್ರನೂ ಉಳಿದ ಅಪೊಸ್ತಲರೂ ಅವರಿಗೆ, “ನಾವು ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ.


ಅದಕ್ಕೆ ಪೇತ್ರ ಮತ್ತು ಯೋಹಾನನ್ನು; ಅವರಿಗೆ “ದೇವರ ಮಾತನ್ನು ಕೇಳುವುದಕ್ಕಿಂತ ನಿಮ್ಮ ಮಾತನ್ನು ಕೇಳುವುದು ಸರಿಯೇ? ಅದು ದೇವರ ಮುಂದೆ ನ್ಯಾಯವೋ? ನೀವೇ ತೀರ್ಪು ಮಾಡಿಕೊಳ್ಳಿರಿ;


ಆದುದರಿಂದ ಮಗನೇ, ನನ್ನ ಮಾತಿಗೆ ವಿಧೇಯನಾಗು; ನೀನು ಎದ್ದು ಹಾರಾನಿನಲ್ಲಿರುವ ನನ್ನ ಅಣ್ಣನಾದ ಲಾಬಾನನ ಬಳಿಗೆ ಹೊರಟುಹೋಗು.


ಯೆಹೋವನು ಆಕೆಗೆ, “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳು ಇವೆ; ಆ ಎರಡು ಜನಾಂಗಗಳು ಹುಟ್ಟಿನಿಂದಲೇ ಭಿನ್ನವಾಗಿರುವವು; ಅವುಗಳಲ್ಲಿ ಒಂದು ಮತ್ತೊಂದಕ್ಕಿಂತ ಬಲಿಷ್ಠವಾಗುವುದು; ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು” ಎಂದು ಹೇಳಿದನು.


‘ನೀನು ಹೋಗಿ ಬೇಟೆಯಾಡಿ ಬೇಟೆಯ ಮಾಂಸದಿಂದ ನನ್ನ ಊಟಕ್ಕೆ ರುಚಿಪದಾರ್ಥವನ್ನು ಸಿದ್ಧಮಾಡು; ಸಾವು ಬರುವುದಕ್ಕಿಂತ ಮೊದಲು ನಾನು ನಿನ್ನನ್ನು ಯೆಹೋವನ ಸನ್ನಿಧಿಯಲ್ಲಿ ಆಶೀರ್ವದಿಸುತ್ತೇನೆ’ ಎಂದು ಹೇಳುವುದನ್ನು ಕೇಳಿದ್ದೇನೆ.


ಆಡಿನ ಹಿಂಡಿನೊಳಗೆ ಹೋಗಿ ಎರಡು ಒಳ್ಳೆ ಆಡಿನ ಮರಿಗಳನ್ನು ಬೇಗ ತೆಗೆದುಕೊಂಡು ಬಾ; ಅವುಗಳಿಂದ ನಿನ್ನ ತಂದೆಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನಾನೇ ಸಿದ್ಧಮಾಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು