Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಡಿನ ಹಿಂಡಿನೊಳಗೆ ಹೋಗಿ ಎರಡು ಒಳ್ಳೆ ಆಡಿನ ಮರಿಗಳನ್ನು ಬೇಗ ತೆಗೆದುಕೊಂಡು ಬಾ; ಅವುಗಳಿಂದ ನಿನ್ನ ತಂದೆಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನಾನೇ ಸಿದ್ಧಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮೇಕೆ ಮಂದೆಯ ಬಳಿಗೆ ಹೋಗಿ ಎರಡು ಒಳ್ಳೆಯ ಮೇಕೆಮರಿಗಳನ್ನು ಬೇಗನೆ ತೆಗೆದುಕೊಂಡು ಬಾ; ಅವುಗಳಿಂದ ನಿನ್ನ ತಂದೆಗೆ ಇಷ್ಟವಾಗಿರುವ ಸವಿಯೂಟವನ್ನು ನಾನೇ ಅಣಿಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಡಿನ ಹಿಂಡಿಗೆ ಹೋಗಿ ಎರಡು ಒಳ್ಳೇ ಆಡಿನ ಮರಿಗಳನ್ನು ಬೇಗ ತೆಗೆದುಕೊಂಡು ಬಾ; ಅವುಗಳಿಂದ ನಿನ್ನ ತಂದೆಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನಾನೇ ಸಿದ್ಧಮಾಡುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಮ್ಮ ಆಡುಗಳ ಬಳಿಗೆ ಹೋಗಿ ಎರಡು ಆಡುಮರಿಗಳನ್ನು ತೆಗೆದುಕೊಂಡು ಬಾ. ನಿಮ್ಮ ತಂದೆಗೆ ಇಷ್ಟವಾದ ಅಡಿಗೆಯನ್ನು ನಾನು ಅವುಗಳ ಮಾಂಸದಿಂದ ಸಿದ್ಧಪಡಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀನು ಮಂದೆಯ ಬಳಿಗೆ ಹೋಗಿ, ಅಲ್ಲಿಂದ ಎರಡು ಒಳ್ಳೆಯ ಮೇಕೆಯ ಮರಿಗಳನ್ನು ತೆಗೆದುಕೊಂಡು ಬಾ. ನಿನ್ನ ತಂದೆಗೋಸ್ಕರ ನಾನು ಅವುಗಳನ್ನೂ, ಅವನು ಇಷ್ಟಪಡುವ ರುಚಿಯಾದ ಅಡಿಗೆಯನ್ನೂ ಸಿದ್ಧಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:9
6 ತಿಳಿವುಗಳ ಹೋಲಿಕೆ  

ಮತ್ತು ಮಾನೋಹನು ಯೆಹೋವನ ದೂತನನ್ನು, “ನಾವು ನಿನಗೋಸ್ಕರ ಒಂದು ಹೋತಮರಿಯನ್ನು ಪಕ್ವಮಾಡಿ ತರುವವರೆಗೆ ದಯವಿಟ್ಟು ಇಲ್ಲೇ ನಿಲ್ಲಬೇಕು” ಎಂದು ಬೇಡಿಕೊಂಡನು.


ಇಷಯನು ರೊಟ್ಟಿಯನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ, ಒಂದು ಹೋತಮರಿಯನ್ನೂ, ಕತ್ತೆಯ ಮೇಲೆ ಹೇರಿಸಿ ತನ್ನ ಮಗನಾದ ದಾವೀದನ ಮುಖಾಂತರ ಸೌಲನಿಗೆ ಕಳುಹಿಸಿದನು.


ಕಾಡಿಗೆ ಹೋಗಿ ಬೇಟೆಯಾಡಿ ಬೇಟೆ ಮಾಂಸದಿಂದ ನನಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನನ್ನ ಊಟಕ್ಕೆ ಸಿದ್ಧಪಡಿಸು, ಸಾವು ಬರುವುದಕ್ಕಿಂತ ಮೊದಲು ನಾನು ಅದನ್ನು ತಿಂದು ನಿನ್ನನ್ನು ಆಶೀರ್ವದಿಸುತ್ತೇನೆ” ಎಂದು ಹೇಳಿದನು.


ಆದುದರಿಂದ ಮಗನೇ, ನೀನು ನನ್ನ ಮಾತಿಗೆ ಕಿವಿಗೊಟ್ಟು ನನ್ನ ಅಪ್ಪಣೆಯಂತೆ ಮಾಡು.


ನೀನು ಅದನ್ನು ಅವನ ಬಳಿಗೆ ತೆಗೆದುಕೊಂಡು ಹೋಗಿ ಬಡಿಸಬೇಕು; ಹೀಗೆ ಮಾಡಿದರೆ ಅವನು ಸಾಯುವುದಕ್ಕಿಂತ ಮೊದಲು ನಿನ್ನನ್ನೇ ಆಶೀರ್ವದಿಸುವನು” ಎಂದಳು.


ಅವನು ಹೋಗಿ ಅವುಗಳನ್ನು ತಂದು ತಾಯಿಗೆ ಕೊಟ್ಟನು. ರೆಬೆಕ್ಕಳು ಅವನ ತಂದೆಗೆ ಇಷ್ಟವಾಗಿದ್ದ ಸವಿಯೂಟವನ್ನು ಸಿದ್ಧಪಡಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು