Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 28:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದಲ್ಲದೆ ಯೆಹೋವನು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆಯಾದ ಅಬ್ರಹಾಮನ ದೇವರೂ, ಇಸಾಕನ ದೇವರೂ ಆಗಿರುವ ಯೆಹೋವನು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇದಲ್ಲದೆ, ಸರ್ವೇಶ್ವರಸ್ವಾಮಿ ಅವನ ಬಳಿಯಲ್ಲೇ ನಿಂತು, “ನಿನ್ನ ತಂದೆಯೂ ಅಬ್ರಹಾಮನ ದೇವರೂ ಇಸಾಕನ ದೇವರೂ ಆಗಿರುವ ಸರ್ವೇಶ್ವರ ನಾನೇ. ನೀನು ಮಲಗಿಕೊಂಡಿರುವ ಈ ನಾಡನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇದಲ್ಲದೆ ಯೆಹೋವನು ಅವನ ಬಳಿಯಲ್ಲಿ ನಿಂತು - ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರೂ ಇಸಾಕನ ದೇವರೂ ಆಗಿರುವ ಯೆಹೋವನು. ನೀನು ಮಲಗಿಕೊಂಡಿರುವ ಈ ದೇಶವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನು ಏಣಿಯ ತುದಿಯಲ್ಲಿ ನಿಂತಿರುವುದನ್ನು ಯಾಕೋಬನು ಕಂಡನು. ಯೆಹೋವನು ಅವನಿಗೆ, “ನಿನ್ನ ತಾತನಾದ ಅಬ್ರಹಾಮನ ದೇವರಾಗಿರುವ ಯೆಹೋವನೇ ನಾನು. ನಾನು ಇಸಾಕನ ದೇವರು. ಈಗ ನೀನು ಮಲಗಿಕೊಂಡಿರುವ ದೇಶವನ್ನು ನಾನು ನಿನಗೆ ಕೊಡುವೆನು. ನಾನು ಈ ದೇಶವನ್ನು ನಿನಗೂ ನಿನ್ನ ಮಕ್ಕಳಿಗೂ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ ಯೆಹೋವ ದೇವರು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆ ಅಬ್ರಹಾಮನ ದೇವರೂ, ಇಸಾಕನ ದೇವರೂ ಆದ ಯೆಹೋವ ದೇವರು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 28:13
40 ತಿಳಿವುಗಳ ಹೋಲಿಕೆ  

ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.


ಯಾಕೋಬನು, ಯೋಸೇಫನಿಗೆ, “ಸರ್ವಶಕ್ತನಾದ ದೇವರು ಕಾನಾನ್ ದೇಶದ ಲೂಜ್ ಎಂಬಲ್ಲಿ ನನಗೆ ದರ್ಶನ ಕೊಟ್ಟು ಆಶೀರ್ವದಿಸಿದನು.


ನಾನು ಅಬ್ರಹಾಮ ಮತ್ತು ಇಸಾಕರಿಗೆ ವಾಗ್ದಾನ ಮಾಡಿದ ದೇಶವನ್ನು ನಿನಗೂ ನಿನ್ನ ತರುವಾಯ ಬರುವ ನಿನ್ನ ಸಂತತಿಯವರಿಗೂ ಕೊಡುವೆನು” ಎಂದು ಹೇಳಿದನು.


ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿಮಿತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು” ಎಂದು ಹೇಳಿದನು.


ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.


ದೇವರು ಯಾಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಗಟ್ಟಾ ಹತ್ತಿ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿ ಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ, ಆತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು.


ಆದರೆ ಅವರು ಪರಲೋಕವೆಂಬ ಉತ್ತಮ ದೇಶವನ್ನು ಹಾರೈಸುವವರು. ಆದ್ದರಿಂದ ದೇವರು ಅವರ ದೇವರೇ ಎನ್ನಿಸಿಕೊಳ್ಳುವುದಕ್ಕೆ ನಾಚಿಕೆಗೊಳ್ಳದೇ, ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.


ಇದಲ್ಲದೆ ಆತನು ಅವನಿಗೆ, “ನಾನು ನಿನ್ನ ತಂದೆಯಾದ, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರೂ ಆಗಿದ್ದೇನೆ” ಎಂದು ಹೇಳಿದನು. ಮೋಶೆಯು ದೇವರನ್ನು ನೋಡುವುದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು’ ಎಂದು ದೇವರು ನಿಮಗೆ ನುಡಿದಿದ್ದನ್ನು ನೀವು ಓದಲಿಲ್ಲವೇ. ಆತನು ಸತ್ತವರಿಗೆ ದೇವರಲ್ಲ, ಆದರೆ ಜೀವಿಸುವವರಿಗೆ ದೇವರಾಗಿದ್ದಾನೆ” ಎಂದು ಹೇಳಿದನು.


ಆತನು ಅವನಿಗೆ, “ನಾನೇ ದೇವರು, ನಿನ್ನ ತಂದೆಯ ದೇವರು ನಾನೇ; ನೀನು ಗಟ್ಟಾ ಇಳಿದು ಹೆದರದೆ ಐಗುಪ್ತ ದೇಶಕ್ಕೆ ಹೋಗು; ಅಲ್ಲಿ ನಿನ್ನಿಂದ ಮಹಾ ಜನಾಂಗವುಂಟಾಗುವಂತೆ ಮಾಡುವೆನು.


ಆಕೆಯು ಹೆರಿಗೆಯ ನೋವಿನಿಂದ ಬಹು ಕಷ್ಟಪಡುತ್ತಿರುವಾಗ ಸೂಲಗಿತ್ತಿಯು ಆಕೆಗೆ, “ಅಂಜಬೇಡ ಇನ್ನೊಂದು ಗಂಡು ಮಗುವು ಹುಟ್ಟುವುದು” ಎಂದು ಹೇಳಿದಳು.


ಇದಲ್ಲದೆ ಯಾಕೋಬನು ದೇವರನ್ನು ಪ್ರಾರ್ಥಿಸಿ, “ಯೆಹೋವನೇ, ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ‘ನಿನ್ನ ಸ್ವದೇಶಕ್ಕೂ, ಬಂಧುಗಳ ಬಳಿಗೂ ತಿರುಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೆಯದನ್ನು ಮಾಡುವೆನೆಂದು’ ನನಗೆ ವಾಗ್ದಾನ ಮಾಡಿದ ಯೆಹೋವನೇ,


ನನ್ನ ತಂದೆಯ ದೇವರೂ, ಅಬ್ರಹಾಮನ ದೇವರೂ, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸಿಬಿಡುತ್ತಿದ್ದೆ, ದೇವರು ನನ್ನ ಕಷ್ಟವನ್ನೂ ನಾನು ಪಟ್ಟ ಪ್ರಯಾಸ ಗೊತ್ತಿದ್ದರಿಂದಲೇ ನಿನ್ನೆಯ ರಾತ್ರಿ ನಿನ್ನನ್ನು ಗದರಿಸಿದನು” ಎಂದನು.


ದೇವರು ಅಬ್ರಹಾಮನಿಗೆ ಕೊಟ್ಟಿರುವ ಆಶೀರ್ವಾದವನ್ನು ನಿನಗೂ, ನಿನ್ನ ಸಂತತಿಗೂ ಕೊಡಲಿ, ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ ಹಾಗೆ, ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಸ್ವತ್ತಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ” ಎಂದನು.


ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ, ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಹೀಗೆ ನಿನ್ನ ತಂದೆಯಾದ ಅಬ್ರಹಾಮನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”


ಈ ದೇಶದಲ್ಲಿ ಅವನಿಗೆ ಕಾಲಿಡುವಷ್ಷ್ಟು ಭೂಮಿಯನ್ನು ಸ್ವತ್ತಾಗಿ ಕೊಡದೆ ಅವನಿಗೆ ಮಕ್ಕಳೇ ಇಲ್ಲದಿರುವಾಗ ನೀನಿರುವ ದೇಶವನ್ನು ನಿನಗೂ, ನಿನ್ನ ನಂತರ ಬರುವ ನಿನ್ನ ಸಂತತಿಗೂ ಸ್ವತ್ತಾಗಿ ಕೊಡುವೆನೆಂದು ಅವನಿಗೆ ವಾಗ್ದಾನಮಾಡಿದನು.


ಅವರಲ್ಲಿ ಸ್ವಲ್ಪ ಜನರು ಕಾನಾನ್ ದೇಶದಲ್ಲಿ ಪ್ರವಾಸಿಗಳಾಗಿ ಇರುವಾಗಲೇ,


ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ ಸ್ಥಳಕ್ಕೆ “ಬೇತೇಲ್” ಎಂದು ಹೆಸರಿಟ್ಟನು.


ನೀನೆದ್ದು, ಈ ದೇಶದ ಎಲ್ಲಾ ಕಡೆಯಲ್ಲಿಯೂ ತಿರುಗಾಡು; ಇದನ್ನು ನಿನಗೆ ಕೊಡುವೆನು” ಎಂದು ಹೇಳಿದನು.


ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.


ಅವರಿಗೆ ಹೇಳಿದ್ದೇನಂದರೆ, “ನಿಮ್ಮ ತಂದೆಯ ಮುಖಭಾವವು ನನ್ನ ವಿಷಯದಲ್ಲಿ ಮೊದಲಿದ್ದಂತೆ ಇಲ್ಲವೆಂದು ತೋರಿಬಂತು. ಆದರೂ ನನ್ನ ತಂದೆಯ ದೇವರು ನನ್ನೊಂದಿಗೆ ಇದ್ದಾನೆ.


ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ನೀನೆದ್ದು ಈ ದೇಶವನ್ನು ಬಿಟ್ಟು ನೀನು ಹುಟ್ಟಿದ ದೇಶಕ್ಕೂ ಬಂಧುಗಳ ಬಳಿಗೂ ಹಿಂತಿರುಗಿ ಹೋಗು’” ಎಂದು ಹೇಳಿದನು.


ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಿನಗೂ ನನಗೂ ನ್ಯಾಯತೀರಿಸಲಿ” ಎಂದನು. ಅದೇ ಪ್ರಕಾರ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಿದನು.


ದೇವರು ಅವರ ನರಳಾಟವನ್ನು ಕೇಳಿ, ತಾನು ಅಬ್ರಹಾಮ, ಇಸಾಕ, ಯಾಕೋಬನ ಸಂಗಡ ಮಾಡಿದ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡನು.


ಆಗ ಯೆಹೋವನು ಅವನಿಗೆ, “ಇದರಿಂದ ಅವರು ತಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು, ನಿನಗೆ ಕಾಣಿಸಿಕೊಂಡಿರುವುದು ನಿಜ ಎಂದು ನಂಬುವರು” ಎಂದು ಹೇಳಿದನು.


ನಾನು ಅವರಿಗೆ ಕಾನಾನ್ ದೇಶವನ್ನು ಅಂದರೆ, ಅವರು ಪರದೇಶದವರಾಗಿ ವಾಸವಾಗಿದ್ದ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬಡಿಕೆಯನ್ನು ಮಾಡಿಕೊಂಡಿರುವೆನು.


ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ. ಯೆಹೋವನೆಂಬ ನಾನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರಿಗೂ ಮತ್ತು ಅವರ ಸಂತತಿಯವರಿಗೂ ಆ ದೇಶವನ್ನು ಕೊಡುತ್ತೇನೆಂದು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ’” ಎಂದು ಅಜ್ಞಾಪಿಸಿದನು.


ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನಿಮ್ಮ ಸದಾಚಾರವಾಗಲಿ, ನಿಮ್ಮ ಒಳ್ಳೆಯ ಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.


“ನಾನು ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನಮಾಡಿದ ದೇಶವು ಇದೇ; ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿ ದಾಟಿ ಅಲ್ಲಿಗೆ ಹೋಗಕೂಡದು” ಎಂದು ಹೇಳಿದನು.


ಕರ್ತನು ಮತ್ತೊಂದು ದರ್ಶನವನ್ನು ನನಗೆ ತೋರಿಸಿದನು. ಇಗೋ, ಯೆಹೋವನು ನೂಲುಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದನು. ಆತನ ಕೈಯಲ್ಲಿ ನೂಲುಗುಂಡಿತ್ತು.


ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ನಂಬಿಕೆಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಯೋಗ್ಯನು. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನ್ನ ಬಳಿಯಲ್ಲಿ ಒಂದು ಕೋಲು ಮಾತ್ರವೇ ಇತ್ತು. ಈಗ ಎರಡು ಗುಂಪುಗಳಿಗೆ ಒಡೆಯನಾಗಿದ್ದೇನೆ.


ನಾನು ನಿಮ್ಮನ್ನು ನನ್ನ ಪ್ರಜೆಗಳನ್ನಾಗಿ ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆ ಎಂಬುದು ನಿಮಗೆ ತಿಳಿಯುವುದು.


ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು ಮತ್ತು ಇಸಾಕನಿಗಾಗಿ ವಾಗ್ದಾನ ಮಾಡಿ ಭರವಸೆ ನೀಡಿದನು.


ನೀವು ಇನ್ನೂ ಬಹು ಜನರು ಕಾನಾನ್ ದೇಶದಲ್ಲಿ ಪ್ರವಾಸಿಗಳು ಆಗಿರುವಾಗಲೇ


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “‘ಜನಾಂಗಗಳಲ್ಲಿ ಚದುರಿ ಹೋಗಿರುವ ಇಸ್ರಾಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲಾ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ಆ ಇಸ್ರಾಯೇಲ್ ವಂಶದವರು ನನ್ನ ಸೇವಕನಾದ ಯಾಕೋಬನಿಗೆ ನಾನು ಅನುಗ್ರಹಿಸಿದ ತಮ್ಮ ಸ್ವದೇಶದಲ್ಲಿ ವಾಸಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು