Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 28:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣ ಉತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನಿಂದಲೂ, ನಿನ್ನ ಸಂತತಿಯಿಂದಲೂ, ಭೂಮಿಯ ಎಲ್ಲಾ ಕುಲದವರು ಆಶೀರ್ವಾದ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿನ್ನ ಸಂತತಿ ಭೂಮಿಯ ಧೂಳಿನಂತೆ ಅಸಂಖ್ಯ ಆಗುವುದು; ನೀನು ಪೂರ್ವಪಶ್ಚಿಮ - ದಕ್ಷಿಣೋತ್ತರ ದಿಕ್ಕುಗಳಿಗೆ ಹರಡಿಕೊಳ್ಳುವೆ. ನಿನ್ನ ಮುಖಾಂತರ ಹಾಗೂ ನಿನ್ನ ಸಂತತಿಯ ಮುಖಾಂತರ ಜಗದ ಎಲ್ಲ ರಾಷ್ಟ್ರಗಳೂ ಆಶೀರ್ವಾದ ಪಡೆಯುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿನ್ನ ಸಂತತಿಯು ಭೂವಿುಯ ಧೂಳಿನಂತೆ ಅಸಂಖ್ಯವಾಗುವದು; ನೀನು ಪೂರ್ವಪಶ್ಚಿಮದಕ್ಷಿಣೋತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನ ಮೂಲಕವೂ ನಿನ್ನ ಸಂತತಿಯ ಮೂಲಕವೂ ಭೂವಿುಯ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಭೂಮಿಯ ಮೇಲೆ ಧೂಳಿನ ಕಣಗಳಿರುವಂತೆ ನಿನಗೆ ಅನೇಕಾನೇಕ ಸಂತತಿಗಳಿರುವರು. ಅವರು ಪೂರ್ವಪಶ್ಚಿಮಗಳಿಗೂ ಉತ್ತರದಕ್ಷಿಣಗಳಿಗೂ ಹರಡಿಕೊಳ್ಳುವರು. ನಿನ್ನ ಮೂಲಕವೂ ನಿನ್ನ ಸಂತತಿಯವರ ಮೂಲಕವೂ ಭೂಮಿಯ ಮೇಲಿರುವ ಎಲ್ಲಾ ಕುಲಗಳವರು ಆಶೀರ್ವಾದ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿನ್ನ ಸಂತತಿಯು ಭೂಮಿಯ ಧೂಳಿನಂತೆ ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣೋತ್ತರಗಳಿಗೆ ಹರಡಿಕೊಳ್ಳುವೆ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಜನರು ಆಶೀರ್ವಾದ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 28:14
26 ತಿಳಿವುಗಳ ಹೋಲಿಕೆ  

ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು” ಎಂದು ಹೇಳಿದನು.


ನಿನ್ನ ಸಂತತಿಯವರನ್ನು ಆಕಾಶದಲ್ಲಿರುವ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವುಂಟಾಗುವುದು.


ನೀವು ಆ ಪ್ರವಾದಿಗಳ ಶಿಷ್ಯರು, ದೇವರು ನಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಗೆ ಬಾಧ್ಯರೂ ಆಗಿದ್ದೀರಿ. ಆತನು ಅಬ್ರಹಾಮನಿಗೆ ‘ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವುದು’ ಎಂದು ಹೇಳಿ ಆ ಒಡಂಬಡಿಕೆಯನ್ನು ಮಾಡಿಕೊಂಡನಲ್ಲಾ.


ನೀನು ನನ್ನ ಮಾತಿಗೆ ವಿಧೇಯನಾಗಿ ಭೂಮಿಯ ಎಲ್ಲಾ ಜನಾಂಗಗಳಿಗೆ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ.” ಎಂದನು.


ಅವನಿಂದ ಬಲಿಷ್ಠವಾದ ಮಹಾ ಜನಾಂಗವು ಹುಟ್ಟಬೇಕಲ್ಲಾ; ಅವನ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದಲ್ಲಾ;


ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂಮಿಯಲ್ಲಿರುವ ಧೂಳನ್ನು ಲೆಕ್ಕಮಾಡುವುದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಬಹುದು.


ಲೋಟನು ಅಬ್ರಾಮನನ್ನು ಬಿಟ್ಟು ಬೇರೆಯಾದ ನಂತರ ಯೆಹೋವನು ಅಬ್ರಾಮನಿಗೆ, “ನೀನಿರುವ ಸ್ಥಳದಿಂದ ದಕ್ಷಿಣಕ್ಕೂ, ಉತ್ತರಕ್ಕೂ, ಪೂರ್ವಕ್ಕೂ, ಪಶ್ಚಿಮಕ್ಕೂ, ಕಣ್ಣೆತ್ತಿ ನೋಡು.


ಹಾಗೆಯೇ, ದೇವರು ಅಬ್ರಹಾಮನಿಗೆ ಮತ್ತು ಅವನಿಂದ ಬರುವ ಪೀಳಿಗೆಗೆ ವಾಗ್ದಾನ ಮಾಡಿದನು. ಆದರೆ “ಪೀಳಿಗೆ” ಎಂದು ಹೇಳಿದಾಗ, ಅದು ವಂಶದಲ್ಲಿ ಇರುವ ಎಲ್ಲರಿಗೂ ಅನ್ವಯಿಸದೇ, ಅಬ್ರಹಾಮನ ವಂಶಕ್ಕೆ ಸೇರಿದ ಒಬ್ಬ ವ್ಯಕ್ತಿಯನ್ನೇ ಸೂಚಿಸುತ್ತದೆ. ಆ ಒಬ್ಬನು ಕ್ರಿಸ್ತನೇ.


ದೇವರು ಅನ್ಯಜನರನ್ನು ನಂಬಿಕೆಯ ನಿಮಿತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬುದಾಗಿರುವ ವೇದವಾಕ್ಯವನ್ನು ಮೊದಲೇ ಕಂಡು ಅಬ್ರಹಾಮನಿಗೆ, “ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವುದೆಂಬ” ಸುವಾರ್ತೆಯನ್ನು ಮುಂಚಿತವಾಗಿಯೇ ತಿಳಿಸಿತು.


ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.


ನಮ್ಮ ಕರ್ತನಾದ ಯೇಸುಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ, ಆತನು ಪರಲೋಕದಲ್ಲಿನ ಸಕಲ ಆತ್ಮೀಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.


ಇದಲ್ಲದೆ ನಿಮಗೆ ಹೇಳುವುದೇನಂದರೆ ಪೂರ್ವ ಪಶ್ಚಿಮ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಎಂಬುವವರ ಸಂಗಡ ಊಟಕ್ಕೆ ಕುಳಿತುಕೊಳ್ಳುವರು;


ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.


ನಿಮ್ಮ ದೇವರಾದ ಯೆಹೋವನು ನಿಮಗೆ ವಾಗ್ದಾನ ಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿದಾಗ ನೀವು, “ನಾವು ಮಾಂಸಾಹಾರವನ್ನು ಊಟಮಾಡಬೇಕು” ಎಂದು ನೀವು ಇಷ್ಟಪಟ್ಟರೆ ಮಾಂಸಾಹಾರವನ್ನು ಮಾಡಬಹುದು.


ಯಾಕೋಬನ ಧೂಳನ್ನು ಲೆಕ್ಕಿಸುವುದಕ್ಕೆ ಯಾರಿಂದಾದಿತು? ಇಸ್ರಾಯೇಲಿನ ನಾಲ್ಕನೆಯ ಒಂದು ಭಾಗವನ್ನಾದರೂ ಲೆಕ್ಕಿಸುವುದಕ್ಕೆ ಯಾರಿಂದಾದಿತು? ನೀತಿವಂತನು ಸಾಯುವಂತೆ ನಾನು ಸಾಯಬೇಕು. ಅವರಿಗುಂಟಾಗುವ ಅವಸಾನವು ನನಗೂ ಆಗಬೇಕು!” ಎಂದನು.


‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡಿ, ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲಾ?’” ಎಂದನು.


ಮುದ್ರೆ ಒತ್ತಿಸಿಕೊಂಡವರ ಸಂಖ್ಯೆಯು ಪ್ರಸಿದ್ಧವಾದಾಗ ಅದನ್ನು ನಾನು ಕೇಳಿಸಿಕೊಂಡೆನು. ಇಸ್ರಾಯೇಲ್ಯರ ಪ್ರತಿಯೊಂದು ಕುಲಕ್ಕೆ ಸೇರಿದವರು ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ.


ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.


ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು.


ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ. ಇವರು ನನ್ನ ಹೆಸರನ್ನು, ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರ ಹೆಸರಿನಿಂದ ಇವರ ಹೆಸರುಗಳು ನೆಲೆಗೊಳ್ಳಲಿ, ಇವರು ಭೂಮಿಯ ಮೇಲೆ ಹೆಚ್ಚಿ ಬಹು ಸಂತಾನವನ್ನು ಪಡೆಯಲಿ” ಎಂದನು.


ಆದರೆ ಅವನ ತಂದೆ ಒಪ್ಪದೆ, “ಮಗನೇ ನಾನು ಬಲ್ಲೆ. ನನಗೆ ಗೊತ್ತು. ಇವನಿಂದಲೂ ಜನಾಂಗವುಂಟಾಗುವುದು. ಇವನು ಬಲಿಷ್ಠನಾಗುವನು. ಆದರೂ ಇವನಿಗಿಂತಲೂ ಇವನ ತಮ್ಮನು ಬಲಿಷ್ಠನಾಗುವನು. ತಮ್ಮನ ಸಂತತಿಯಲ್ಲಿಯೇ ಜನರು ಹೇರಳವಾಗಿ ಹುಟ್ಟುವರು” ಎಂದು ಹೇಳಿದನು.


“ಕೇವಲ ಯೆಹೋವನಿಗೇ ಆಗಲಿ” ಎಂದು ನೀವು ಗೊತ್ತು ಮಾಡಿದ್ದರಲ್ಲಿ ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ನಾನು ಈಗ ನಿಮಗೆ ಬೋಧಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಗೆ ಸರಿಯಾದದ್ದನ್ನು ಮಾಡಬೇಕು.


ಈಗ ಯೆಹೋವನಾದ ದೇವರೇ, ನೀನು ನನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವು ನೆರವೇರಲಿ. ಏಕೆಂದರೆ ಭೂಮಿಯ ಧೂಳಿನಷ್ಟು ಅಸಂಖ್ಯವಾದ ಜನಾಂಗದವರಿಗೆ ನನ್ನನ್ನು ಅರಸನನ್ನಾಗಿ ನೇಮಿಸಿದ್ದೀ.


ನೀನು ಎಲ್ಲಾ ಕಡೆಗಳಲ್ಲಿಯೂ ಹಬ್ಬಿಕೊಳ್ಳುವಿ; ನಿನ್ನ ಸಂತಾನದವರು ಜನಾಂಗಗಳನ್ನು ವಶಮಾಡಿಕೊಂಡು ಹಾಳು ಪಟ್ಟಣಗಳನ್ನು ಜನಭರಿತವಾಗುವಂತೆ ಮಾಡುವರು.


ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಹಾಗು ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಈ ಪ್ರದೇಶವನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಇಸ್ರಾಯೇಲರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನ ಮಾಡಿಕೊಳ್ಳುವರೆಂದೂ ಮಾತುಕೊಡಲಿಲ್ಲವೇ’” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು