Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 28:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯಾಕೋಬನು ಅಲ್ಲಿ ಪ್ರಮಾಣ ಮಾಡಿ, “ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ಉಣ್ಣುವುದಕ್ಕೆ ಆಹಾರವನ್ನೂ, ಉಡುವುದಕ್ಕೆ ವಸ್ತ್ರವನ್ನೂ, ನನಗೆ ಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅದೂ ಅಲ್ಲದೆ ಅವನು ಹೀಗೆಂದು ಹರಕೆ ಮಾಡಿಕೊಂಡನು; “ದೇವರು ನನ್ನ ಸಂಗಡವಿದ್ದು ನಾನು ಕೈಗೊಂಡ ಪ್ರಯಾಣದಲ್ಲಿ ನನ್ನನ್ನು ಕಾಪಾಡಿ, ಹೊಟ್ಟೆಗೆ ಊಟವನ್ನೂ ಮೈಗೆ ಬಟ್ಟೆಯನ್ನೂ ಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯಾಕೋಬನು ಅಲ್ಲಿ - ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ತಿನ್ನುವದಕ್ಕೆ ಆಹಾರವನ್ನೂ ಉಡುವದಕ್ಕೆ ವಸ್ತ್ರವನ್ನೂ ಕೊಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಂತರ ಯಾಕೋಬನು ಈ ಪ್ರಮಾಣವನ್ನು ಮಾಡಿದನು: “ದೇವರು ನನ್ನ ಸಂಗಡವಿದ್ದು ನಾನು ಹೋದಲ್ಲೆಲ್ಲ ನನ್ನನ್ನು ಕಾಪಾಡಿ ಊಟಕ್ಕೆ ಆಹಾರವನ್ನೂ, ಉಡಲು ಬಟ್ಟೆಗಳನ್ನೂ ಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಯಾಕೋಬನು ಪ್ರಮಾಣಮಾಡಿ, “ದೇವರು ನನ್ನ ಸಂಗಡ ಇದ್ದು, ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ, ಉಣ್ಣುವುದಕ್ಕೆ ಆಹಾರವನ್ನೂ, ಉಡುವುದಕ್ಕೆ ವಸ್ತ್ರವನ್ನೂ ನನಗೆ ಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 28:20
29 ತಿಳಿವುಗಳ ಹೋಲಿಕೆ  

ನಮಗೆ ಅನ್ನ ವಸ್ತ್ರಗಳಿದ್ದರೆ ಸಾಕು, ನಾವು ಸಂತುಷ್ಟರಾಗುತ್ತವೆ.


ಅಪ್ಪಣೆಯಾಗಲಿ, ನಿನ್ನ ಸೇವಕನಾದ ನಾನು ಅರಾಮ್ ದೇಶದ ಗೆಷೂರಿನಲ್ಲಿದ್ದಾಗ ಯೆಹೋವನು ನನ್ನನ್ನು ತಿರುಗಿ ಯೆರೂಸಲೇಮಿಗೆ ಬರಮಾಡುವುದಾದರೆ ಆತನಿಗೆ ಒಂದು ವಿಶೇಷವಾದ ಆರಾಧನೆ ಮಾಡಿಸುವೆನೆಂದು ಹರಕೆಮಾಡಿದ್ದೇನೆ” ಎಂದು ವಿಜ್ಞಾಪಿಸಿದನು.


ಯೇಸು ಕ್ರಿಸ್ತನ ಪರಿಪೂರ್ಣತೆಯಿಂದ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.


ನಾನು ನಿನ್ನ ಆಲಯಕ್ಕೆ ಬಂದು ಸರ್ವಾಂಗಹೋಮಗಳನ್ನು ಸಮರ್ಪಿಸುವೆನು.


ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ನೀನೆದ್ದು ಈ ದೇಶವನ್ನು ಬಿಟ್ಟು ನೀನು ಹುಟ್ಟಿದ ದೇಶಕ್ಕೂ ಬಂಧುಗಳ ಬಳಿಗೂ ಹಿಂತಿರುಗಿ ಹೋಗು’” ಎಂದು ಹೇಳಿದನು.


ಪೌಲನು ಇನ್ನು ಅನೇಕ ದಿನಗಳ ಕಾಲ ಅಲ್ಲಿದ್ದ ಅನಂತರ ಸಹೋದರರಿಂದ ಅಪ್ಪಣೆತೆಗೆದುಕೊಂಡು ತನಗೆ ದೀಕ್ಷೆ ಇದ್ದುದರಿಂದ ಕೆಂಖ್ರೆಯ ಪಟ್ಟಣದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಅವನ ಸಂಗಡ ಹೊರಟರು.


ಯಾಕೋಬನ ಶೂರನಾದ ಯೆಹೋವನಿಗಾಗಿ ಒಂದು ವಾಸಸ್ಥಾನವನ್ನು ಏರ್ಪಡಿಸುವ ತನಕ,


ನಿನ್ನ ನೀತಿವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣಮಾಡಿದ್ದೇನೆ, ಅದನ್ನು ನೆರವೇರಿಸುವೆನು.


ಯೆರೂಸಲೇಮೇ, ನಿನ್ನ ಮಧ್ಯದಲ್ಲಿ, ಯೆಹೋವನ ಮಂದಿರದ ಅಂಗಳಗಳಲ್ಲಿ,


ಯೆಹೋವನಿಗೆ ಹೊತ್ತ ಹರಕೆಗಳನ್ನು, ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು.


ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ; ಅವನ ಸುತ್ತಲಿರುವ ಜನರು ಮಹಾಮಹಿಮನಿಗೆ ಕಾಣಿಕೆಗಳನ್ನು ಸಮರ್ಪಿಸಲಿ.


ಹೀಗಾದರೆ ನಾನು ಪ್ರತಿದಿನವೂ ನನ್ನ ಹರಕೆಗಳನ್ನು ಸಲ್ಲಿಸುವವನಾಗಿ, ನಿನ್ನ ನಾಮವನ್ನು ಸದಾ ಸ್ಮರಿಸಿ ಕೀರ್ತಿಸುತ್ತಿರುವೆನು.


ದೇವರೇ, ನೀನು ನನ್ನ ಹರಕೆಗಳಿಗೆ ಲಕ್ಷ್ಯಕೊಟ್ಟಿದ್ದೀ; ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಸಿಕ್ಕತಕ್ಕ ಬಾಧ್ಯತೆಯನ್ನು ನನಗೂ ದಯಪಾಲಿಸಿದ್ದೀ.


ದೇವರೇ, ನಿನಗೆ ಹೊತ್ತ ಹರಕೆಗಳನ್ನು ನಾನು ಸಲ್ಲಿಸುವೆನು; ಕೃತಜ್ಞತಾ ಯಜ್ಞಗಳನ್ನು ನಿನಗೆ ಸಮರ್ಪಿಸುವೆನು.


ಯೆಹೋವನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು, ಅವರು ಆ ದಿನದಲ್ಲಿ ಯೆಹೋವನನ್ನು ತಿಳಿದುಕೊಳ್ಳುವರು ಮತ್ತು ಯಜ್ಞನೈವೇದ್ಯಗಳಿಂದ ಸೇವೆ ಮಾಡುವರು. ಹೌದು, ಯೆಹೋವನಿಗೆ ಪ್ರಮಾಣ ಮಾಡಿಕೊಂಡು ಅದನ್ನು ನೆರವೇರಿಸುವರು.


ನಾನು ಮಹಾಸಭೆಯಲ್ಲಿ ಮಾಡುವ ಸ್ತೋತ್ರಕ್ಕೆ ನೀನೇ ಆಧಾರನು; ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.


ಆ ದಿನ ಸೌಲನು ಇಸ್ರಾಯೇಲರನ್ನು ಕುರಿತು, “ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕೋಸ್ಕರ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತನಾಗಲಿ” ಎಂದು ಆಣೆಯಿಟ್ಟಿದ್ದರಿಂದ ಅಂದು ಅವರೆಲ್ಲರೂ ಬಹುವಾಗಿ ಬಳಲಿಹೋಗಿದ್ದರೂ ಒಬ್ಬನಾದರೂ ಆಹಾರ ಪಧಾರ್ಥವನ್ನು ರುಚಿಸಿ ನೋಡಿರಲಿಲ್ಲ.


ನಾನು ಇವನನ್ನು ಯೆಹೋವನಿಗೇ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು” ಎಂದು ಹೇಳಿದಳು. ಆ ಮೇಲೆ ಅವರು ಶಿಲೋವಿನಲ್ಲಿ ಯೆಹೋವನನ್ನು ಆರಾಧಿಸಿದರು.


“ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನಿನ್ನ ದಾಸಿಯನ್ನು ಮರೆಯದೆ ನನ್ನನ್ನು ನೆನಪಿಸಿಕೊಂಡು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ಅವನನ್ನು ನಿನಗೆ ಪ್ರತಿಷ್ಠಿಸುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಮುಟ್ಟಗೊಡುವುದಿಲ್ಲ” ಎಂದು ಪ್ರಾರ್ಥಿಸಿ ಹರಕೆಮಾಡಿದಳು.


ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಪುನಃ ಈ ದೇಶಕ್ಕೆ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸದ ಹೊರತು ಬಿಡುವುದಿಲ್ಲ” ಎಂದನು.


ನಾವು ಇಲ್ಲಿಂದ ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಲಾಲಿಸಿ ನಾನು ಹೋದ ಮಾರ್ಗದಲ್ಲೆಲ್ಲಾ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟಿಸುತ್ತೇನೆ” ಎಂದು ಹೇಳಿದನು.


ಯಾಬೇಚನು ಇಸ್ರಾಯೇಲಿನ ದೇವರಿಗೆ, “ನೀನು ನನ್ನನ್ನು ವಿಶೇಷವಾಗಿ ಆಶೀರ್ವದಿಸಿ, ನನ್ನ ಪ್ರಾಂತ್ಯವನ್ನು ವಿಸ್ತರಿಸಿ, ನಿನ್ನ ಕೃಪಾಹಸ್ತದಲ್ಲಿ ನನ್ನನ್ನು ಇರಿಸಿ ಯಾವ ವೇದನೆಯೂ ಉಂಟಾಗದಂತೆ ನನ್ನನ್ನು ಕೇಡಿನಿಂದ ರಕ್ಷಿಸಬಾರದೇ?” ಎಂದು ಮೊರೆಯಿಡಲು ದೇವರು ಅವನ ಮೊರೆಯನ್ನು ಲಾಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು