ಆದಿಕಾಂಡ 28:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ದೇವರು ಅಬ್ರಹಾಮನಿಗೆ ಕೊಟ್ಟಿರುವ ಆಶೀರ್ವಾದವನ್ನು ನಿನಗೂ, ನಿನ್ನ ಸಂತತಿಗೂ ಕೊಡಲಿ, ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ ಹಾಗೆ, ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಸ್ವತ್ತಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ದೇವರು ಅಬ್ರಹಾಮನಿಗೆ ಕೊಟ್ಟ ಆಶೀರ್ವಾದವನ್ನು ನಿನಗೂ ನಿನ್ನ ಸಂತತಿಗೂ ಕೊಡಲಿ; ನೀನು ಪ್ರವಾಸಿಯಾಗಿರುವ ಈ ನಾಡನ್ನು, ಅಂದರೆ ಅಬ್ರಹಾಮನಿಗೆ ದೇವರು ವಾಗ್ದಾನಮಾಡಿದ್ದ ಈ ನಾಡನ್ನು, ನೀನು ಸ್ವಂತ ಸೊತ್ತಾಗಿಸಿಕೊಳ್ಳುವಂತಾಗಲಿ!” ಎಂದು ಹರಸಿ ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆತನು ಅಬ್ರಹಾಮನಿಗೆ ಕೊಟ್ಟ ಆಶೀರ್ವಾದವನ್ನು ನಿನಗೂ ನಿನ್ನ ಸಂತತಿಗೂ ಕೊಟ್ಟು ತಾನು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದೂ ನೀನು ಪ್ರವಾಸವಾಗಿರುವಂಥದೂ ಆಗಿರುವ ಈ ದೇಶವನ್ನು ನೀನು ಬಾಧ್ಯನಾಗಿ ಹೊಂದುವಂತೆ ಮಾಡಲಿ ಎಂದು ಹೇಳಿ ಆಶೀರ್ವದಿಸಿ ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ದೇವರು ಅಬ್ರಹಾಮನನ್ನು ಆಶೀರ್ವದಿಸಿದ ರೀತಿಯಲ್ಲಿ ನಿನ್ನನ್ನೂ ನಿನ್ನ ಮಕ್ಕಳನ್ನೂ ಆಶೀರ್ವದಿಸುವಂತೆಯೂ ನೀನು ವಾಸಿಸುವ ಸ್ಥಳದಲ್ಲಿ ಸ್ವಂತ ಭೂಮಿಯನ್ನು ಪಡೆದುಕೊಳ್ಳುವಂತೆಯೂ ನಾನು ಪ್ರಾರ್ಥಿಸುವೆನು. ದೇವರು ಅಬ್ರಹಾಮನಿಗೆ ಕೊಟ್ಟ ಭೂಮಿಯೇ ಅದು” ಎಂದು ಹೇಳಿ ಕಳುಹಿಸಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ದೇವರು ಅಬ್ರಹಾಮನಿಗೆ ಕೊಟ್ಟಿರುವ ಮತ್ತು ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ನೀನು ಬಾಧ್ಯವಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ, ನಿನಗೂ, ನಿನ್ನ ಸಂತತಿಗೂ ಕೊಡಲಿ,” ಎಂದನು. ಅಧ್ಯಾಯವನ್ನು ನೋಡಿ |