Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 28:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್ ಅರಾಮನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಅಣ್ಣನಾದ ಅರಾಮಿನವನಾದ ಬೆತೂವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯಕೋಬನು ಮೆಸಪೊಟೇಮಿಯಗೆ ಹೊರಟು, ಅರಾಮ್ಯನಾದ ಬೆತೂವೇಲನ ಮಗನೂ ಮತ್ತು ಯಕೋಬ ಹಾಗು ಏಸಾವನಿಗೆ ತಾಯಿಯಾದ ರೆಬೆಕ್ಕಳಿಗೆ ಅಣ್ಣನೂ ಆಗಿದ್ದ ಲಾಬಾನನ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯಾಕೋಬನು ಪದ್ದನ್ಅರಾವಿುಗೆ ಹೊರಟು ಅರಾಮ್ಯನಾದ ಬೆತೂವೇಲನ ಮಗನಾಗಿಯೂ ಯಾಕೋಬನಿಗೂ ಏಸಾವನಿಗೂ ತಾಯಿಯಾದ ರೆಬೆಕ್ಕಳ ಅಣ್ಣನಾಗಿಯೂ ಇದ್ದ ಲಾಬಾನನ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅಂತೆಯೇ ಯಾಕೋಬನು ಪದ್ದನ್‌ಅರಾಮಿಗೆ ಹೊರಟು ರೆಬೆಕ್ಕಳ ಅಣ್ಣನಾದ ಲಾಬಾನನ ಬಳಿಗೆ ಹೋದನು. ಬೆತೂವೇಲನು ಲಾಬಾನನ ಮತ್ತು ರೆಬೆಕ್ಕಳ ತಂದೆ. ರೆಬೆಕ್ಕಳು ಯಾಕೋಬನ ಮತ್ತು ಏಸಾವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇಸಾಕನು ಯಾಕೋಬನನ್ನು ಕಳುಹಿಸಿದಾಗ, ಅವನು ಪದ್ದನ್ ಅರಾಮಿನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿ ರೆಬೆಕ್ಕಳ ಸಹೋದರ ಅರಾಮಿನವನಾದ ಬೆತೂಯೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 28:5
12 ತಿಳಿವುಗಳ ಹೋಲಿಕೆ  

ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನು ನಲವತ್ತು ವರ್ಷದವನಾದಾಗ ಅರಾಮ್ಯನಾದ ಬೆತೂವೇಲನ ಮಗಳೂ ಅರಾಮ್ಯನಾದ ಲಾಬಾನನ ತಂಗಿಯೂ ಆಗಿದ್ದ ರೆಬೆಕ್ಕಳನ್ನು ಪದ್ದನ್ ಅರಾಮಿನಿಂದ ಕರೆದುತಂದು ಹೆಂಡತಿಯನ್ನಾಗಿ ಮಾಡಿಕೊಂಡನು.


ಆದುದರಿಂದ ಮಗನೇ, ನನ್ನ ಮಾತಿಗೆ ವಿಧೇಯನಾಗು; ನೀನು ಎದ್ದು ಹಾರಾನಿನಲ್ಲಿರುವ ನನ್ನ ಅಣ್ಣನಾದ ಲಾಬಾನನ ಬಳಿಗೆ ಹೊರಟುಹೋಗು.


“ನಾನು ನಿನ್ನ ತಂದೆಯ ಸೋದರಳಿಯನೂ ರೆಬೆಕ್ಕಳ ಮಗನಾದ ಯಾಕೋಬನೆಂದು ತಿಳಿಸಿದನು” ಆಗ ರಾಹೇಲಳು ಓಡಿಹೋಗಿ ಆ ಮಾತನ್ನು ತನ್ನ ತಂದೆಗೆ ತಿಳಿಸಿದಳು.


ಯಾಕೋಬನು ಪದ್ದನ್ ಅರಾಮಿಗೆ ಓಡಿಹೋದನು; ಇಸ್ರಾಯೇಲನು ಮದುವೆಗಾಗಿ ಜೀತಮಾಡಿದನು, ಹೆಣ್ಣಿಗೋಸ್ಕರ ಕುರಿಗಳನ್ನು ಕಾದನು.


ಬೆತೂವೇಲನು ರೆಬೆಕ್ಕಳನ್ನು ಪಡೆದನು. ಈ ಎಂಟು ಮಂದಿಯನ್ನು ಮಿಲ್ಕಳು ಅಬ್ರಹಾಮನ ತಮ್ಮನಾದ ನಾಹೋರನಿಂದ ಪಡೆದಳು.


ಬಳಿಕ ಅವನೂ ಅವನ ಸಂಗಡ ಬಂದ ಸೇವಕರೂ ಊಟ ಉಪಚಾರಗಳನ್ನು ಮುಗಿಸಿಕೊಂಡು ರಾತ್ರಿಯೆಲ್ಲಾ ಅಲ್ಲೇ ಇದ್ದರು. ಬೆಳಗ್ಗೆ ಎದ್ದಾಗ ಅವನು, “ನನ್ನ ದಣಿಯ ಬಳಿಗೆ ಹೊರಡುವುದಕ್ಕೆ ನನಗೆ ಅಪ್ಪಣೆಯಾಗಲಿ” ಎಂದು ಕೇಳಲು.


ಪದ್ದನ್ ಅರಾಮ್ ದೇಶದಲ್ಲಿರುವ ನಿನ್ನ ತಾಯಿಯ ತಂದೆಯಾದ ಬೆತೂವೇಲನ ಮನೆಗೆ ಹೊರಟು ಹೋಗು. ಅಲ್ಲಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಹೆಣ್ಣು ಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೋ.


ಆಗ ಯಾಕೋಬನು ಪ್ರಯಾಣ ಮಾಡಿ ಪೂರ್ವ ದಿಕ್ಕಿನ ಜನರ ಸೀಮೆಗೆ ಬಂದನು.


ಆದರೆ ರಾತ್ರಿಯಲ್ಲಿ ದೇವರು ಅರಾಮ್ಯನಾದ ಲಾಬಾನನ ಕನಸಿನಲ್ಲಿ ಬಂದು, “ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು” ಎಂದನು.


ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಗೆ ಮಮ್ರೆಗೆ ಬಂದನು. ಮಮ್ರೆಯು ಹೆಬ್ರೋನೆಂಬ ಕಿರ್ಯತರ್ಬಕ್ಕೆ ಸೇರಿರುವುದು. ಅದು ಅಬ್ರಹಾಮ ಇಸಾಕರು ಪರದೇಶಸ್ಥರಾಗಿ ವಾಸವಾಗಿದ್ದ ಸ್ಥಳ.


ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಐಗುಪ್ತದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಅವರು ಮಹಾಬಲಿಷ್ಠ ಜನಾಂಗವಾದರು.


“ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದುದರಿಂದ ಅರಾಮಿನವರೂ ನಿನ್ನವರಾಗಿ ವ್ಯಾಪಾರಮಾಡಿ, ಕೆಂಪರಲು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು