Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಯಾಕೋಬನು ಪ್ರಯಾಣ ಮಾಡಿ ಪೂರ್ವ ದಿಕ್ಕಿನ ಜನರ ಸೀಮೆಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬಳಿಕ ಯಕೋಬನು ಪ್ರಯಾಣವನ್ನು ಮುಂದುವರಿಸುತ್ತಾ ಮೂಡಣದವರ ನಾಡಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಮೇಲೆ ಯಾಕೋಬನು ದಾರಿ ಹಿಡಿದು ಮೂಡಲ ದೇಶದವರ ಸೀಮೆಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಳಿಕ ಯಾಕೋಬನು ತನ್ನ ಪ್ರಯಾಣವನ್ನು ಮುಂದುವರಿಸಿದನು. ಅವನು ಪೂರ್ವ ದಿಕ್ಕಿನಲ್ಲಿದ್ದ ನಾಡಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಯಾಕೋಬನು ಪ್ರಯಾಣವನ್ನು ಮುಂದುವರಿಸುತ್ತಾ ಪೂರ್ವದಿಕ್ಕಿನ ಜನರ ದೇಶಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:1
17 ತಿಳಿವುಗಳ ಹೋಲಿಕೆ  

ಇವರು ಬಿತ್ತನೆಮಾಡಿದಾಗಲೆಲ್ಲಾ ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ಇವರಿಗೆ ವಿರೋಧವಾಗಿ ದಂಡೆತ್ತಿ ಬಂದು ಇಳಿದುಕೊಳ್ಳುತ್ತಿದ್ದರು.


ಇಷ್ಟರಲ್ಲಿ ಮಿದ್ಯಾನ್ಯರೂ, ಅಮಾಲೇಕ್ಯರೂ, ಮೂಡಣದೇಶದವರೂ ಸೇರಿ ಹೊಳೆದಾಟಿ ಬಂದು ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.


ಯಾಕೋಬನು ಪದ್ದನ್ ಅರಾಮಿಗೆ ಓಡಿಹೋದನು; ಇಸ್ರಾಯೇಲನು ಮದುವೆಗಾಗಿ ಜೀತಮಾಡಿದನು, ಹೆಣ್ಣಿಗೋಸ್ಕರ ಕುರಿಗಳನ್ನು ಕಾದನು.


ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು. ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ. ದೇವರು ನಿನ್ನ ಕೆಲಸಗಳನ್ನು ಈಗ ಒಪ್ಪಿಕೊಳ್ಳುತ್ತಾನೆ.


ನಿನ್ನ ಆಜ್ಞೆಗಳನ್ನು ಅನುಸರಿಸುವುದರಲ್ಲಿ ಆಸಕ್ತನಾದೆನು, ಆಲಸ್ಯಮಾಡಲಿಲ್ಲ.


ನೀನು ನನ್ನ ಅಂತರಾತ್ಮವನ್ನು ವಿಮೋಚಿಸು, ಆಗ ಆಸಕ್ತಿಯಿಂದ ನಿನ್ನ ಆಜ್ಞಾಮಾರ್ಗವನ್ನು ಅನುಸರಿಸುವೆನು. ಹೇ.


ಆಗ ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ, “ಬಾಲಾಕನು ನನ್ನನ್ನು ಆರಾಮಿನಿಂದ ಕರೆಯಿಸಿದನು, ಮೋವಾಬ್ಯರ ಅರಸನು ಪೂರ್ವ ಪರ್ವತಗಳಿಂದ ನನ್ನನ್ನು ಬರಮಾಡಿದನು, ‘ನೀನು ಬಂದು ಯಾಕೋಬ ವಂಶದವರನ್ನು ನನಗಾಗಿ ಶಪಿಸಬೇಕು.’ ‘ಇಸ್ರಾಯೇಲರನ್ನು ಎದುರಿಸುವುದಕ್ಕೆ ಬಾ.’


ಅವನ ಜ್ಞಾನವು ಮೂಡಣದೇಶದವರೆಲ್ಲರ ಜ್ಞಾನಕ್ಕಿಂತಲೂ ಐಗುಪ್ತ್ಯರ ಜ್ಞಾನಕ್ಕಿಂತಲೂ ಮಿಗಿಲಾದುದಾಗಿತ್ತು.


ಜೆಬಹ, ಚಲ್ಮುನ್ನರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳಿದುಕೊಂಡಿದ್ದರು. ಮೂಡಣದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಭಟರು ಹತರಾಗಿ ಉಳಿದವರು ಇಷ್ಟೇ ಮಂದಿ.


ಮಿದ್ಯಾನ್ಯರೂ, ಅಮಾಲೇಕ್ಯರೂ, ಮೂಡಣ ದೇಶದವರೂ ಮಿಡತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳಿದುಕೊಂಡಿದ್ದರು. ಅವರ ಒಂಟೆಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು.


ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನು ನಲವತ್ತು ವರ್ಷದವನಾದಾಗ ಅರಾಮ್ಯನಾದ ಬೆತೂವೇಲನ ಮಗಳೂ ಅರಾಮ್ಯನಾದ ಲಾಬಾನನ ತಂಗಿಯೂ ಆಗಿದ್ದ ರೆಬೆಕ್ಕಳನ್ನು ಪದ್ದನ್ ಅರಾಮಿನಿಂದ ಕರೆದುತಂದು ಹೆಂಡತಿಯನ್ನಾಗಿ ಮಾಡಿಕೊಂಡನು.


ತರುವಾಯ ಆ ಸೇವಕನು ತನ್ನ ದಣಿಯ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ಸಿದ್ಧಮಾಡಿ, ದಣಿಯ ಬಳಿಯಿದ್ದ ಶ್ರೇಷ್ಠವಾದ ಒಡವೆಗಳನ್ನು ತನ್ನ ವಶಕ್ಕೆ ತೆಗೆದುಕೊಂಡು ಹೊರಟು, ಅರಾಮ್ ನಾಹಾರಾಯಿಮ್ ಸೀಮೆಗೆ ಸೇರಿದ ನಾಹೋರನು ವಾಸಿಸಿದ ಊರನ್ನು ಮುಟ್ಟಿದನು.


ಅಬ್ರಹಾಮನು ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವ ದಿಕ್ಕಿನಲ್ಲಿರುವ ಕೆದೆಮ್ ದೇಶಕ್ಕೆ ಕಳುಹಿಸಿ ಬಿಟ್ಟನು.


ದೇವರು ಯಾಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಗಟ್ಟಾ ಹತ್ತಿ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿ ಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ, ಆತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು.


ಅವನು ತನ್ನ ಅಣ್ಣನ ಬಳಿಯಿಂದ ಓಡಿಹೋದಾಗ ದೇವರು ಅವನಿಗೆ ಪ್ರತ್ಯಕ್ಷನಾದನು. ಅದುದರಿಂದ ಅವನು ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು