ಆದಿಕಾಂಡ 29:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವನು ಕಣ್ಣೆತ್ತಿ ನೋಡಲಾಗಿ ಹೊಲದಲ್ಲಿ ಬಾವಿಯನ್ನು ಕಂಡನು. ಬಾವಿಯ ಹತ್ತಿರ ಮೂರು ಕುರಿಹಿಂಡುಗಳು ಮಲಗಿದ್ದವು. ಆ ಬಾವಿಯ ನೀರನ್ನು ಮಂದೆಗಳಿಗೆ ಕುಡಿಸುತ್ತಿದ್ದರು. ಆ ಬಾವಿಯ ಮೇಲೆ ಒಂದು ದೊಡ್ಡ ಕಲ್ಲನ್ನು ಇಡಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಕೂಡಲೆ ಅವನಿಗೆ ಆ ಅಡವಿಯಲ್ಲಿ ಬಾವಿಯೊಂದು ಕಾಣಿಸಿತು. ಅದರ ಬಳಿ ಮೂರು ಕುರಿಹಿಂಡು ಮಲಗಿದ್ದವು. ಕುರಿಗಳನ್ನು ನೀರು ಕುಡಿಸುವುದಕ್ಕಾಗಿ ಆ ಬಾವಿಗೆ ಹೊಡೆದುಕೊಂಡು ಬರುವುದು ವಾಡಿಕೆ. ಬಾವಿಯ ಮೇಲೆ ಮುಚ್ಚಿದ್ದ ಕಲ್ಲು ದೊಡ್ಡದಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅಲ್ಲಿಗೆ ಬಂದಾಗ ಅಡವಿಯೊಳಗೆ ಬಾವಿಯನ್ನು ಕಂಡನು. ಬಾವಿಯ ಹತ್ತರ ಮೂರು ಕುರಿಹಿಂಡುಗಳು ಮಲಗಿದ್ದವು. ಕುರಿಗಳನ್ನು ನೀರು ಕುಡಿಸುವದಕ್ಕಾಗಿ ಆ ಬಾವಿಗೆ ಹೊಡಕೊಂಡು ಹೋಗುವ ಪದ್ಧತಿಯಿತ್ತು. ಬಾವಿಯ ಮೇಲೆ ಮುಚ್ಚಿದ್ದ ಕಲ್ಲು ದೊಡ್ಡದಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯಾಕೋಬನು ದೃಷ್ಟಿಸಿ ನೋಡಿದಾಗ, ಹೊಲದಲ್ಲಿ ಅವನಿಗೆ ಒಂದು ಬಾವಿ ಕಾಣಿಸಿತು. ಬಾವಿಯ ಸಮೀಪದಲ್ಲಿ ಮೂರು ಕುರಿಮಂದೆಗಳು ಮಲಗಿಕೊಂಡಿದ್ದವು. ಕುರಿಗಳಿಗೆ ಆ ಬಾವಿಯ ನೀರನ್ನೇ ಕುಡಿಸುತ್ತಿದ್ದರು. ಬಾವಿಯ ಮೇಲೆ ಅಗಲವಾದ ದೊಡ್ಡ ಕಲ್ಲನ್ನು ಮುಚ್ಚಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವನು ಕಣ್ಣೆತ್ತಿ ನೋಡಲಾಗಿ, ಹೊಲದಲ್ಲಿ ಒಂದು ಬಾವಿ ಇತ್ತು. ಅದರ ಸಮೀಪದಲ್ಲಿ ಮೂರು ಕುರಿಮಂದೆಗಳು ಮಲಗಿದ್ದವು. ಏಕೆಂದರೆ ಆ ಬಾವಿಯ ನೀರನ್ನು ಮಂದೆಗಳಿಗೆ ಕುಡಿಸುತ್ತಿದ್ದರು. ಆ ಬಾವಿಯ ಮೇಲೆ ಒಂದು ದೊಡ್ಡ ಕಲ್ಲು ಇತ್ತು. ಅಧ್ಯಾಯವನ್ನು ನೋಡಿ |