Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಬಿಲ್ಹಾ ಎಂಬ ದಾಸಿಯನ್ನು ಕೂಡ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 (ಆಕೆಗೆ ಬಿಲ್ಹಾ ಎಂಬ ಒಬ್ಬ ದಾಸಿಯನ್ನು ಕೊಟ್ಟನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯಾಕೋಬನಿಗೆ ಹೆಂಡತಿಯಾಗಿ ಕೊಟ್ಟು ಆಕೆಗೆ ಬಿಲ್ಹಾ ಎಂಬ ಒಬ್ಬ ದಾಸಿಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 (ಲಾಬಾನನು ತನ್ನ ಸೇವಕಿಯಾದ ಬಿಲ್ಹಾಳನ್ನು ತನ್ನ ಮಗಳಾದ ರಾಹೇಲಳಿಗೆ ಸೇವಕಿಯನ್ನಾಗಿ ಕೊಟ್ಟನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಲಾಬಾನನು ತನ್ನ ಮಗಳಾದ ರಾಹೇಲಳಿಗೆ, ತನ್ನ ದಾಸಿಯಾದ ಬಿಲ್ಹಳನ್ನು ದಾಸಿಯಾಗಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:29
8 ತಿಳಿವುಗಳ ಹೋಲಿಕೆ  

ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳನ್ನು ಸಂಗಮಿಸಿದನು. ಈ ಸಂಗತಿಯು ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಗಂಡು ಮಕ್ಕಳಿದ್ದರು.


ಲಾಬಾನನು ತನ್ನ ಮಗಳಾದ ಲೇಯಳಿಗೆ ಜಿಲ್ಪಾ ಎಂಬ ಒಬ್ಬ ದಾಸಿಯನ್ನು ಕೊಟ್ಟನು.


ಇದು ಯಾಕೋಬನ ವಂಶದವರ ಚರಿತ್ರೆ: ಯೋಸೇಫನು ಹದಿನೇಳು ವರ್ಷದವನಾಗಿದ್ದಾಗ ತನ್ನ ಅಣ್ಣಂದಿರ ಜೊತೆಯಲ್ಲಿ ಅಂದರೆ, ತನ್ನ ತಂದೆಯ ಹೆಂಡತಿಯರಾದ ಬಿಲ್ಹಾ ಮತ್ತು ಜಿಲ್ಪಾರ ಮಕ್ಕಳ ಜೊತೆಯಲ್ಲಿ ಆಡು ಕುರಿಗಳನ್ನು ಮೇಯಿಸುತ್ತಿದ್ದನು. ಅವರು ಏನಾದರೂ ಕೆಟ್ಟ ಕೆಲಸ ಮಾಡುವಾಗ ಅವನು ತಂದೆಗೆ ತಿಳಿಸುತ್ತಿದ್ದನು.


ರಾಹೇಲಳ ದಾಸಿಯಾದ ಬಿಲ್ಹಳಲ್ಲಿ ಹುಟ್ಟಿದವರು: ದಾನ್, ನಫ್ತಾಲಿ.


ಯಾಕೋಬನು ಅದಕ್ಕೆ ಒಪ್ಪಿ ಹಿರಿಯವಳ ಮದುವೆಯ ವಾರವನ್ನು ತೀರಿಸಿದನು. ಆಗ ಲಾಬಾನನು ತನ್ನ ಮಗಳಾದ ರಾಹೇಲಳನ್ನು ಯಾಕೋಬನಿಗೆ ಮದುವೆ ಮಾಡಿ ಕೊಟ್ಟನು.


ಯಾಕೋಬನು ರಾಹೇಲಳನ್ನೂ ಸಂಗಮಿಸಿ ಆಕೆಯನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿದನು. ಆಕೆಗೋಸ್ಕರ ಲಾಬಾನನ ಬಳಿಯಲ್ಲಿ ಇನ್ನೂ ಏಳು ವರ್ಷ ಸೇವೆಮಾಡಿದನು.


ಇವರು ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟ ಬಿಲ್ಹಳ ಸಂತತಿಯವರು. ಈಕೆಯಿಂದ ಯಾಕೋಬನಿಗಾದ ಮಕ್ಕಳೂ ಮೊಮ್ಮಕ್ಕಳೂ ಏಳು ಮಂದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು