ಆದಿಕಾಂಡ 29:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ, ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ ‘ರೂಬೇನ್ ಎಂದು’ ಹೆಸರಿಟ್ಟಳು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. “ಸರ್ವೇಶ್ವರ ನನ್ನ ದೀನ ಸ್ಥಿತಿಯನ್ನು ನೋಡಿದ್ದಾರೆ, ಇನ್ನು ಮುಂದೆ ಗಂಡ ನನ್ನನ್ನು ಪ್ರೀತಿಸುತ್ತಾನೆ,” ಎಂದುಕೊಂಡು ಆ ಮಗುವಿಗೆ ‘ರೂಬೇನ್’ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು - ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ; ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ ರೂಬೇನೆಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಲೇಯಳು ಒಬ್ಬ ಮಗನನ್ನು ಹೆತ್ತಳು. ಆಕೆಯು ತನ್ನೊಳಗೆ, “ಯೆಹೋವನು ನನ್ನ ದುಃಖವನ್ನು ನೋಡಿದ್ದಾನೆ. ನನ್ನ ಗಂಡನು ನನ್ನನ್ನು ಪ್ರೀತಿಸುವುದಿಲ್ಲ. ಈಗಲಾದರೊ ಅವನು ನನ್ನನ್ನು ಪ್ರೀತಿಸಬಹುದು” ಎಂದು ಹೇಳಿ ಆ ಮಗುವಿಗೆ ರೂಬೇನ್ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಲೇಯಳು ಗರ್ಭಿಣಿಯಾಗಿ ಮಗನನ್ನು ಹೆತ್ತು, “ನಿಜವಾಗಿ ಯೆಹೋವ ದೇವರು ನನ್ನ ಬಾಧೆಯನ್ನು ನೋಡಿದ್ದಾರೆ. ಆದ್ದರಿಂದ ನನ್ನ ಗಂಡನು ನನ್ನನ್ನು ಪ್ರೀತಿ ಮಾಡುವನು,” ಎಂದು ಹೇಳಿ ಮಗುವಿಗೆ ರೂಬೇನ್ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿ |