ಆದಿಕಾಂಡ 3:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೆಹೋವನಾದ ದೇವರು ಆ ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು” ಎಂದು ಉತ್ತರ ಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸರ್ವೇಶ್ವರನಾದ ದೇವರು ಆ ಮಹಿಳೆಯನ್ನು, “ಇದೇನು ನೀನು ಮಾಡಿದ್ದು?” ಎಂದು ಕೇಳಲು ಆಕೆ, “ಸರ್ಪವು ನನ್ನನ್ನು ವಂಚಿಸಿ ತಿನ್ನುವಂತೆ ಮಾಡಿತು,” ಎಂದು ಉತ್ತರಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯೆಹೋವದೇವರು ಸ್ತ್ರೀಯನ್ನು - ಇದೇನು ನೀನು ಮಾಡಿದ್ದು ಎಂದು ಕೇಳಲು ಸ್ತ್ರೀಯು - ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು ಎಂದು ಉತ್ತರ ಕೊಟ್ಟಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆಗ ದೇವರಾದ ಯೆಹೋವನು ಸ್ತ್ರೀಗೆ, “ನೀನು ಮಾಡಿದ್ದೇನು?” ಎಂದು ಕೇಳಿದನು. ಅದಕ್ಕೆ ಸ್ತ್ರೀಯು, “ಆ ಹಾವಿನ ಮೋಸಕ್ಕೆ ಒಳಗಾಗಿ ನಾನು ಆ ಹಣ್ಣನ್ನು ತಿಂದೆ” ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯೆಹೋವ ದೇವರು ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಅದಕ್ಕೆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು. ನಾನು ತಿಂದೆನು,” ಎಂದು ಉತ್ತರಕೊಟ್ಟಳು. ಅಧ್ಯಾಯವನ್ನು ನೋಡಿ |