ಆದಿಕಾಂಡ 3:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಯೆಹೋವನಾದ ದೇವರು ಸರ್ಪಕ್ಕೆ; “ನೀನು ಈ ಕಾರ್ಯವನ್ನು ಮಾಡಿದ್ದರಿಂದ ಎಲ್ಲಾ ಪಶುಗಳಲ್ಲಿಯೂ ಅಡವಿಯ ಎಲ್ಲಾ ಕಾಡುಮೃಗಗಳಲ್ಲಿಯೂ ಶಾಪಗ್ರಸ್ತನಾಗಿರುವೆ. ನೀನು ಹೊಟ್ಟೆಯಿಂದ ಹರಿದು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಮಣ್ಣನ್ನೇ ತಿನ್ನುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಗ. ಸರ್ವೇಶ್ವರರಾದ ದೇವರು, ಇಂತೆಂದರು ಸರ್ಪಕ್ಕೆ: “ಈ ಪರಿಯ ಕೃತ್ಯವನ್ನು ನೀನೆಸಗಿದುದರಿಂದ ಶಾಪಗ್ರಸ್ತನಾದೆ ಎಲ್ಲ ಪಶು ಪ್ರಾಣಿಗಳಿಗಿಂತ; ಹರಿದಾಡುವೆ ಹೊಟ್ಟೆಯ ಮೇಲೆ ಇಂದಿನಿಂದ ತಿನ್ನುವೆ ಮಣ್ಣನೆ ಜೀವಮಾನ ಪರಿಯಂತ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಗ ಯೆಹೋವದೇವರು ಸರ್ಪಕ್ಕೆ - ನೀನು ಈ ಕಾರ್ಯವನ್ನು ಮಾಡಿದ್ದರಿಂದ ಎಲ್ಲಾ ಪಶುಗಳಲ್ಲಿಯೂ ಅಡವಿಯ ಎಲ್ಲಾ ಮೃಗಗಳಲ್ಲಿಯೂ ಶಾಪಗ್ರಸ್ತವಾದಿ; ನೀನು ಹೊಟ್ಟೆಯಿಂದ ಹರಿದು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಮಣ್ಣೇ ತಿನ್ನುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆಗ ದೇವರಾದ ಯೆಹೋವನು ಹಾವಿಗೆ, “ನೀನು ಮಾಡಿದ ಈ ಕೆಟ್ಟಕಾರ್ಯದಿಂದ ನಿನಗೂ ಕೇಡುಗಳಾಗುತ್ತವೆ. ಬೇರೆಲ್ಲಾ ಪ್ರಾಣಿಗಳಿಗಿಂತಲೂ ನಿನಗೆ ಹೀನಸ್ಥಿತಿ ಉಂಟಾಗುವುದು. ನೀನು ಹೊಟ್ಟೆಯಿಂದಲೇ ತೆವಳಿಕೊಂಡು ನಿನ್ನ ಜೀವಮಾನವೆಲ್ಲಾ ಮಣ್ಣನ್ನೇ ತಿನ್ನುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಯೆಹೋವ ದೇವರು ಸರ್ಪಕ್ಕೆ ಹೀಗೆ ಹೇಳಿದರು, “ನೀನು ಇದನ್ನು ಮಾಡಿದ ಕಾರಣ, “ಎಲ್ಲಾ ಪಶುಗಳಲ್ಲಿಯೂ ಎಲ್ಲಾ ಕಾಡುಮೃಗಗಳಲ್ಲಿಯೂ ನೀನು ಬಹು ಶಾಪಗ್ರಸ್ತನಾದೆ. ಇಂದಿನಿಂದ ನಿನ್ನ ಜೀವನ ಪೂರ್ತಿ ಹೊಟ್ಟೆಯಿಂದ ಹರಿದಾಡಿ, ಮಣ್ಣನ್ನು ತಿನ್ನುವೆ. ಅಧ್ಯಾಯವನ್ನು ನೋಡಿ |