Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 3:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಿನಗೂ ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವದು, ನೀನು ಅದರ ಹಿಮ್ಮಡಿಯನ್ನು ಕಚ್ಚುವಿ. ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನೀನು ಮತ್ತು ಸ್ತ್ರೀಯು ಒಬ್ಬರಿಗೊಬ್ಬರು ವೈರಿಗಳಾಗಿರುವಂತೆ ಮಾಡುವೆನು. ನಿನ್ನ ಮಕ್ಕಳು ಮತ್ತು ಅವಳ ಮಕ್ಕಳು ಒಬ್ಬರಿಗೊಬ್ಬರು ವೈರಿಗಳಾಗಿರುವರು. ನೀನು ಆಕೆಯ ಮಗನ ಪಾದವನ್ನು ಕಚ್ಚುವೆ. ಆದರೆ ಅವನು ನಿನ್ನ ತಲೆಯನ್ನು ಜಜ್ಜಿ ಹಾಕುವನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 3:15
48 ತಿಳಿವುಗಳ ಹೋಲಿಕೆ  

ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ತುಳಿದು ಜಜ್ಜಿಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.


ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು.


ಆಗ ಘಟಸರ್ಪನು ಸ್ತ್ರೀಯ ಮೇಲೆ ಬಹು ಕೋಪಗೊಂಡು, ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ, ದೇವರ ಆಜ್ಞೆಗಳನ್ನು ಕೈಗೊಂಡು ನಡೆದು ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದವರ ಮೇಲೆ ಯುದ್ಧಮಾಡುವುದಕ್ಕೆ ಹೊರಟು,


ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.


ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು.


ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.


“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”


ಹೊಲವೆಂದರೆ ಈ ಲೋಕ. ಒಳ್ಳೆಯ ಬೀಜವೆಂದರೆ ರಾಜ್ಯದ ಮಕ್ಕಳು.


ಆದ್ದರಿಂದ ದೇವರ ಮಕ್ಕಳು ಯಾರೆಂಬುದು ಹಾಗೂ ಸೈತಾನನ ಮಕ್ಕಳು ಯಾರೆಂಬುದು ಇದರಿಂದ ತಿಳಿದುಬರುತ್ತದೆ. ನೀತಿಯನ್ನು ಅನುಸರಿಸದವರೂ ತನ್ನ ಸಹೋದರನನ್ನು ಪ್ರೀತಿಸದವರೂ ದೇವರಿಗೆ ಸಂಬಂಧಪಟ್ಟವರಲ್ಲ.


ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ.


ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; ಆತನು ಅದನ್ನು ಬದಲಿಸುವುದಿಲ್ಲ. “ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು;


ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.


ಆತನು ದೊರೆತನಗಳನ್ನೂ ಮತ್ತು ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ, ತನ್ನ ಶಿಲುಬೆಯ ಮೂಲಕ ಅವುಗಳನ್ನು ಜಯಿಸಿ ಬಹಿರಂಗಪಡಿಸಿದನು.


ಅವನನ್ನು ದೃಷ್ಟಿಸಿನೋಡಿ; “ಸೈತಾನನ ಮಗನೇ, ಮೋಸದಿಂದಲೂ, ಎಲ್ಲಾ ಕೆಟ್ಟತನದಿಂದಲೂ ತುಂಬಿರುವವನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೇರವಾದ ಮಾರ್ಗಗಳನ್ನು ಡೊಂಕು ಮಾಡುವುದನ್ನು ಬಿಡುವುದಿಲ್ಲವೋ?


ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಇವನು ಇಂಥವನಾಗಿರುವುದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು, ಮರಣಹೊಂದಿ, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು, ಬಹು ಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆ ಮಾಡಿದನು.


ಹೀಗಿರಲು ಪ್ರಸವವೇದನೆ ಪಡತಕ್ಕವಳು ಮಗನನ್ನು ಹೆರುವವರೆಗೂ ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. ಅನಂತರ ಆ ಮಗನ ಸಹೋದರರಲ್ಲಿ ಉಳಿದವರು ಇಸ್ರಾಯೇಲರೊಂದಿಗೆ ಹಿಂದಿರುಗುವರು


ದ್ರೋಹಿಯಾದ ಮಗಳೇ, ಎಂದಿನವರೆಗೆ ಅತ್ತಿತ್ತ ಅಲೆದಾಡುವಿ? ಯೆಹೋವನು ಲೋಕದಲ್ಲಿ ಅಪೂರ್ವವಾದದ್ದನ್ನು ಉಂಟುಮಾಡಿದ್ದಾನೆ ನೋಡು, ಸ್ತ್ರೀಯಾದವಳು ತನ್ನ ಪುರುಷನನ್ನು ಕಾಪಾಡುವಳು.”


ಯೇಸುಕ್ರಿಸ್ತನು ದೇವರ ಮಗನೆಂದು ಒಪ್ಪಿಕೊಂಡು ನಂಬಿದವರಲ್ಲದೆ ಮತ್ತಾರು ಲೋಕವನ್ನು ಜಯಿಸಿದವರಾಗಿದ್ದಾರೆ?


ತಾನೇ ಶೋಧಿಸಲ್ಪಟ್ಟು ಬಾಧೆಯನ್ನು ಅನುಭವಿಸಿರುವುದರಿಂದ ಶೋಧಿಸಲ್ಪಡುವವರಿಗೆ ಸಹಾಯಮಾಡಲು ಶಕ್ತನಾಗಿದ್ದಾನೆ.


ಆದ್ದರಿಂದ ದೇವರವಾಕ್ಯದಲ್ಲಿ ಹೀಗೆ ಹೇಳಿದೆ, “ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ತಾನು ಸೆರೆಯಾಳುಗಳನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ವರಗಳನ್ನು ಕೊಟ್ಟನು.”


ಇದಲ್ಲದೆ ದೇವಜನರ ಮೇಲೆ ಯುದ್ಧ ಮಾಡಿ ಅವರನ್ನು ಜಯಿಸುವುದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು ಮತ್ತು ಸಕಲ ಕುಲ, ಜನ, ಭಾಷೆ, ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.


ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು.


ನಾನು ಪ್ರತಿದಿನ ದೇವಾಲಯದಲ್ಲಿ ನಿಮ್ಮ ಸಂಗಡ ಇದ್ದಾಗ ನೀವು ನನ್ನ ಮೇಲೆ ಕೈಹಾಕಲಿಲ್ಲ. ಆದರೆ ಇದು ನಿಮ್ಮ ಕಾಲ, ಇದು ಅಂಧಕಾರದ ದೊರೆತನದ ಕಾಲ” ಎಂದು ಹೇಳಿದನು.


ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಯಿಂದ ಹೇಗೆ ನೀವು ತಪ್ಪಿಸಿಕೊಳ್ಳುವಿರಿ?


ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು? ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.


ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು?


ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ನಾಲಿಗೆಯಿಂದ ವಂಚನೆಯ ಮಾತುಗಳನ್ನಾಡುತ್ತಾರೆ. ಅವರ ತುಟಿಯ ಹಿಂದೆ ಹಾವಿನ ವಿಷವಿದೆ.


ಮಗುವೇ, ನೀನಾದರೋ ಪರಾತ್ಪರನಾದ ದೇವರ ಪ್ರವಾದಿಯೆನಿಸಿಕೊಳ್ಳುವಿ. ನೀನು ಕರ್ತನ ಮುಂದೆ ಹೋಗಿ ಆತನ ಹಾದಿಗಳನ್ನು ಸಿದ್ಧಮಾಡುವವನಾಗಿಯೂ,


ಹಾವುಗಳನ್ನು ಕೈಗಳಿಂದ ಎತ್ತಿಕೊಳ್ಳುವರು; ವಿಷಪದಾರ್ಥಗಳನ್ನೇನಾದರು ಕುಡಿದರೂ ಅವರಿಗೆ ಯಾವ ಹಾನಿಯೂ ಆಗುವುದಿಲ್ಲ. ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಸ್ವಸ್ಥವಾಗುವುದು” ಎಂದು ಹೇಳಿದನು.


ಆದರೆ ಆಕೆಯು ಗಂಡು ಮಗುವಿಗೆ ಜನ್ಮನೀಡುವವರೆಗೂ ಆಕೆಯೊಡನೆ ಶರೀರ ಸಂಬಂಧವಿಲ್ಲದೆ ಇದ್ದನು. ಮತ್ತು ಯೋಸೇಫನು ಆ ಮಗುವಿಗೆ ‘ಯೇಸು’ ಎಂದು ಹೆಸರಿಟ್ಟನು.


ದಾನನು ಮಾರ್ಗದ ಮಧ್ಯದಲ್ಲಿರುವ ವಿಷಸರ್ಪದಂತೆ ಇರುವನು ಅದು ಕುದುರೆಯ ಹಿಮ್ಮಡಿಯನ್ನು ಕಚ್ಚುವುದು. ಸವಾರನು ಕೆಳಗೆ ಅಂಗಾತವಾಗಿ ಬೀಳುವನು.


ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.


ಕರ್ಮೆಲ್ ಬೆಟ್ಟದ ತುದಿಯಲ್ಲಿ ಅಡಗಿಕೊಂಡರೂ, ನಾನು ಅವರನ್ನು ಹುಡುಕಿ ಅಲ್ಲಿಂದಲೂ ಹಿಡಿದು ತರುವೆನು. ನನ್ನ ಕಣ್ಣಿಗೆ ಮರೆಯಾಗಿ ಸಮುದ್ರದತಳದಲ್ಲಿ ಅಡಗಿಕೊಂಡರೂ, ಅಲ್ಲಿಯೂ ನನ್ನ ಅಪ್ಪಣೆಯ ಪ್ರಕಾರ ಘಟಸರ್ಪವು ಅವರನ್ನು ಕಚ್ಚುವುದು.


ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು