Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 3:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅದಲ್ಲದೆ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕಾಗಿ ಆ ವನದ ಪೂರ್ವದಿಕ್ಕಿನಲ್ಲೆ ‘ಕೆರೂಬಿ’ಯರನ್ನೂ ಪ್ರಜ್ವಲಿಸುತ್ತಾ ಎಲ್ಲ ಕಡೆ ಸುತ್ತುವ ಕತ್ತಿಯನ್ನೂ ಇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅದಲ್ಲದೆ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಆತನು ಏದೆನ್ ವನದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಧಗಧಗನೆ ಪ್ರಜ್ವಲಿಸುತ್ತಾ ಸುತ್ತುವ ಕತ್ತಿಯನ್ನೂ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅಲ್ಲದೆ ಏದೆನ್ ತೋಟವನ್ನು ಸಂರಕ್ಷಿಸುವುದಕ್ಕಾಗಿ ಆತನು ಕೆರೂಬಿದೂತರನ್ನು ತೋಟದ ಪೂರ್ವಭಾಗದಲ್ಲಿ ಇರಿಸಿದನು. ಇದಲ್ಲದೆ ಆತನು ಬೆಂಕಿಯ ಖಡ್ಗವನ್ನು ಅಲ್ಲಿಟ್ಟನು. ಈ ಖಡ್ಗವು ಎಲ್ಲಾ ದಿಕ್ಕುಗಳತ್ತ ತಿರುಗುತ್ತಾ ಧಗಧಗನೆ ಪ್ರಜ್ವಲಿಸುತ್ತಾ ಜೀವದಾಯಕ ಮರದ ಮಾರ್ಗವನ್ನು ಕಾಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಹೀಗೆ ಅವರು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷದ ದಾರಿಯನ್ನು ಕಾಯುವುದಕ್ಕೆ ಏದೆನ್ ತೋಟದ ಪೂರ್ವದಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಖಡ್ಗವನ್ನೂ ಇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 3:24
20 ತಿಳಿವುಗಳ ಹೋಲಿಕೆ  

ದೇವದೂತರ ವಿಷಯದಲ್ಲಿ, “ದೇವರು ತನ್ನ ದೂತರನ್ನು ಗಾಳಿಯನ್ನಾಗಿಯೂ, ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ” ಎಂದು ಹೇಳಿದ್ದಾನೆ.


ಗಾಳಿಯನ್ನು ನಿನ್ನ ದೂತರನ್ನಾಗಿಯೂ, ಅಗ್ನಿಜ್ವಾಲೆಯನ್ನು ಸೇವಕರನ್ನಾಗಿಯೂ ಮಾಡಿಕೊಳ್ಳುತ್ತೀ.


ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಜನಾಂಗಗಳು ನಡುಗಲಿ. ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; ಭೂಮಿಯು ಕಂಪಿಸಲಿ.


ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.


ಕೆರೂಬಿಗಳ ಮಧ್ಯದಲ್ಲಿ ಆಸೀನನಾಗಿರುವ ಸೇನಾಧೀಶ್ವರ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ್ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.


ಯೆಹೋಶುವನು ಯೆರಿಕೋವಿನ ಹತ್ತಿರದಲ್ಲಿ ಇದ್ದಾಗ ಒಮ್ಮೆ ತನ್ನ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ತನ್ನೆದುರಿನಲ್ಲಿ ನಿಂತಿರುವುದನ್ನು ಕಂಡನು. ಯೆಹೋಶುವನು ಅವನ ಸಮೀಪಕ್ಕೆ ಹೋಗಿ “ನೀನು ನಮ್ಮವನೋ ಅಥವಾ ಶತ್ರು ಪಕ್ಷದವನೋ?” ಎಂದು ಕೇಳಲು


ಯೆಹೋವನ ದೂತನು ಬಿಚ್ಚುಕತ್ತಿಯನ್ನು ಕೈಯಲ್ಲಿ ಹಿಡಿದುಕೊಂಡು ದಾರಿಯಲ್ಲೇ ನಿಂತಿರುವುದನ್ನು ಆ ಕತ್ತೆ ನೋಡಿ ದಾರಿಯನ್ನು ಬಿಟ್ಟು ಅಡವಿಯ ಕಡೆಗೆ ಹೋಯಿತು. ಕತ್ತೆಯನ್ನು ದಾರಿಗೆ ತಿರುಗಿಸುವುದಕ್ಕೆ ಬಿಳಾಮನು ಅದನ್ನು ಹೊಡೆದನು.


“ಇಸ್ರಾಯೇಲರು ನನಗಾಗಿ ಕಾಣಿಕೆಯನ್ನು ತರಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ತೆಗೆದುಕೊಳ್ಳಬೇಕು.


ಆದ್ದರಿಂದ ಯೆಹೋವನು ಅವನನ್ನು ಸೃಷ್ಟಿಸಿದ ಮಣ್ಣಿನ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕಾಗಿ ಅವನನ್ನು ಏದೆನ್ ತೋಟದಿಂದ ಹೊರಗೆ ಕಳುಹಿಸಿ ಬಿಟ್ಟನು.


ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಸಂಗಮಿಸಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು, “ನಾನು ಯೆಹೋವನ ಅನುಗ್ರಹದಿಂದ ಗಂಡು ಮಗುವನ್ನು ಪಡೆದಿದ್ದೇನೆ” ಎಂದು ಹೇಳಿದಳು.


ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.


ಇಗೋ, ನಾನು ನೋಡಲಾಗಿ ಕೆರೂಬಿಗಳ ತಲೆಗಳ ಮೇಲಣ ಗಗನಮಂಡಲದ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನದ ಆಕಾರವು ನನಗೆ ಕಾಣಿಸಿತು.


ಆದುದರಿಂದ ನಾನು ಅದನ್ನು ಜನಾಂಗಗಳಲ್ಲಿ ಮಹಾ ಬಲಿಷ್ಠನಾದವನ ಕೈಗೆ ಕೊಟ್ಟುಬಿಟ್ಟಿದ್ದೇನೆ. ಅವನು ಅದರ ಕೆಟ್ಟತನಕ್ಕೆ ತಕ್ಕಂತೆ ಅದನ್ನು ದಂಡಿಸುತ್ತಾನೆ. ನಾನು ಅದರ ದುಷ್ಟತ್ವದ ನಿಮಿತ್ತ ತಳ್ಳಿಹಾಕಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು