Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 3:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾನೆ” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದರೆ ಅದರ ನಡುವೆಯಿರುವ ಈ ಮರದ ಹಣ್ಣನ್ನು ಮಾತ್ರ ತಿನ್ನಲೂ ಕೂಡದು, ಮುಟ್ಟಲೂ ಕೂಡದು, ‘ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾರೆ,” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದರೆ ತೋಟದ ಮಧ್ಯದಲ್ಲಿರುವ ಈ ಮರದ ಫಲದ ವಿಷಯವಾಗಿ - ಇದನ್ನು ತಿನ್ನಲೂ ಕೂಡದು, ಮುಟ್ಟಲೂ ಕೂಡದು; ತಿಂದರೆ ಸಾಯುವಿರಿ ಎಂದು ದೇವರು ಹೇಳಿದ್ದಾನೆ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ಒಂದು ಮರದ ಹಣ್ಣನ್ನು ಮಾತ್ರ ನಾವು ತಿನ್ನಕೂಡದು. ದೇವರು ನಮಗೆ, ‘ತೋಟದ ಮಧ್ಯದಲ್ಲಿರುವ ಮರದ ಹಣ್ಣನ್ನು ನೀವು ತಿನ್ನಕೂಡದು; ಆ ಮರವನ್ನು ಮುಟ್ಟಕೂಡದು, ಇಲ್ಲವಾದರೆ ನೀವು ಸಾಯುವಿರಿ’ ಎಂದು ಹೇಳಿದ್ದಾನೆ” ಎಂಬುದಾಗಿ ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ತೋಟದ ಮಧ್ಯದಲ್ಲಿರುವ ಈ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಕೂಡದು, ಮುಟ್ಟಲೂ ಕೂಡದು; ತಿಂದರೆ ಸತ್ತು ಹೋಗುವಿರಿ’ ಎಂದು ದೇವರು ಹೇಳಿದ್ದಾರೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 3:3
12 ತಿಳಿವುಗಳ ಹೋಲಿಕೆ  

ಆದ್ದರಿಂದ, “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ.


ಆದರೆ ನಿನ್ನ ಕೈಚಾಚಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡು. ಆಗ ಅವನು ನಿನ್ನ ಎದುರಿಗೆ ನಿನ್ನನ್ನು ದೂಷಿಸದೇ ಬಿಡುವನೇ?” ಎಂದನು.


ಅದಕ್ಕೆ ದೇವರು, “ನೀನು, ಇದನ್ನು ಯಥಾರ್ಥ ಮನಸ್ಸಿನಿಂದ ಮಾಡಿದೆ ಎಂಬುದನ್ನು ನಾನು ಬಲ್ಲೆ; ಆದಕಾರಣ ನೀನು ನನಗೆ ವಿರುದ್ಧವಾಗಿ ಪಾಪಮಾಡದಂತೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ.


“ಇದನ್ನು ಹಿಡಿಯಬೇಡ, ಇದರ ರುಚಿನೋಡಬೇಡ, ಅದನ್ನು ಮುಟ್ಟಬೇಡ” ಎನ್ನುವ ನಿಬಂಧನೆಗಳಿಗೆ ಅಧೀನರಾಗಿರುವುದೇತಕ್ಕೆ? ಈ ಮಾನವ ಆಜ್ಞೆಗಳೂ ಹಾಗೂ ಬೋಧನೆಗಳೂ ಉಪಯೋಗದಿಂದ ನಾಶವಾಗುವ ಪದಾರ್ಥಗಳಿಗೆ ಅನುಸಾರವಾಗಿದೆ.


ನನ್ನ ಮಿತ್ರರೇ, ಕರುಣಿಸಿರಿ, ನೀವಾದರೂ ಕರುಣಿಸಿರಿ! ದೇವರ ಕೈ ನನ್ನನ್ನು ಹೊಡೆಯಿತಲ್ಲಾ.


ಆದರೆ ನಿನ್ನ ಕೈಚಾಚಿ ಅವನ ಅಸ್ತಿಮಾಂಸಗಳನ್ನು ಹೊಡೆ. ಆಗ ಅವನು ನಿನ್ನ ಮುಖದೆದುರಿಗೆ ನಿನ್ನನ್ನು ದೂಷಿಸದೆ ಬಿಡುವುದಿಲ್ಲ” ಎಂದನು.


‘ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು. ನನ್ನ ಪ್ರವಾದಿಗಳಿಗೆ ಯಾವ ಕೇಡನ್ನು ಮಾಡಬಾರದು’ ಎಂದು ಹೇಳಿದನು.


ನೀವು ಬರೆದು ಕಳುಹಿಸಿದ ವಿಷಯಗಳ ಬಗ್ಗೆ ನನ್ನ ಅಭಿಪ್ರಾಯವೇನೆಂದರೆ, ಸ್ತ್ರೀಯರ ಶರೀರ ಸಂಪರ್ಕವಿಲ್ಲದೆ ಇರುವುದು ಪುರುಷನಿಗೆ ಒಳ್ಳೆಯದು;


ಆ ಸ್ತ್ರೀಯು ಸರ್ಪಕ್ಕೆ, “ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ತಿನ್ನಬಹುದು,


ಆಗ ಸರ್ಪವು ಸ್ತ್ರೀಗೆ, “ನೀವು ನಿಶ್ಚಯವಾಗಿ ಸಾಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು