Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 3:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ಇದರ ಹಣ್ಣನ್ನು ತಿಂದ ಕ್ಷಣವೇ ನಿಮ್ಮ ಕಣ್ಣುಗಳು ತೆರೆಯುವವು, ನೀವು ದೇವರುಗಳಂತೆ ಆಗಿ ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನು ತಿಳಿಯುವಿರಿ, ಇದು ದೇವರಿಗೆ ಚೆನ್ನಾಗಿ ಗೊತ್ತು” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇದರ ಹಣ್ಣನ್ನು ತಿಂದ ಕೂಡಲೆ ನಿಮ್ಮ ಕಣ್ಣುಗಳು ತೆರೆಯುವುವು, ನೀವು ದೇವರಂತೆ ಆಗಿ ಒಳಿತು - ಕೆಡಕುಗಳನ್ನರಿತ ಜ್ಞಾನಿಗಳು ಆಗಿಬಿಡುವಿರಿ. ಇದು ದೇವರಿಗೆ ಚೆನ್ನಾಗಿ ಗೊತ್ತುಂಟು,” ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ಇದರ ಹಣ್ಣನ್ನು ತಿಂದಾಗಲೇ ನಿಮ್ಮ ಕಣ್ಣುಗಳು ತೆರೆಯುವವು; ನೀವು ದೇವರಂತೆ ಆಗಿ ಒಳ್ಳೇದರ ಕೆಟ್ಟದ್ದರ ಭೇದವನ್ನು ಅರಿತವರಾಗುವಿರಿ; ಇದು ದೇವರಿಗೆ ಚೆನ್ನಾಗಿ ಗೊತ್ತುಂಟು ಅಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀವು ಆ ಮರದ ಹಣ್ಣನ್ನು ತಿಂದರೆ ನಿಮಗೆ ಒಳ್ಳೆಯದರ ಮತ್ತು ಕೆಟ್ಟದ್ದರ ಬಗ್ಗೆ ಜ್ಞಾನ ಬರುತ್ತದೆಯೆಂದು ದೇವರಿಗೆ ಗೊತ್ತಿದೆ. ಅಲ್ಲದೆ ನೀವು ದೇವರಿಗೆ ಸರಿಸಮಾನರಾಗುವಿರಿ” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ಇದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯುವುವು, ನೀವು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ಅರಿತವರಾಗಿ ದೇವರ ಹಾಗೆ ಇರುವಿರಿ. ಇದು ದೇವರಿಗೆ ತಿಳಿದಿದೆ,” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 3:5
31 ತಿಳಿವುಗಳ ಹೋಲಿಕೆ  

“ನರಪುತ್ರನೇ, ನೀನು ತೂರಿನ ಅರಸನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನೇ ದೇವರು, ಸಮುದ್ರ ಮಧ್ಯದಲ್ಲಿ ದೇವರ ಸ್ಥಾನದಲ್ಲಿ ಕುಳಿತುಕೊಂಡಿರುವೆನು’ ಎಂದು ಹೇಳಿಕೊಂಡಿದ್ದೀ; ನೀನು ದೇವರಲ್ಲ, ಮನುಷ್ಯನೇ. ಆದರೂ ನಿನ್ನನ್ನು ನೀನೇ ದೇವರಿಗೆ ಸಮಾನನೆಂದು ಭಾವಿಸಿಕೊಂಡಿರುವಿ.


ಯಾವುದು ದೇವರೆನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ.


ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು.


ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಗಾಗಿ ಮೋಸಹೋದಳೋ ಹಾಗೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಶುದ್ಧತ್ವವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವಾಗಿದೆ.


ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.


ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.


ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ದೇಹವೆಲ್ಲಾ ಕತ್ತಲಾಗಿರುವುದು. ನಿನ್ನೊಳಗಿರುವ ಬೆಳಕೇ ಕತ್ತಲಾದರೆ ಆ ಕತ್ತಲು ಎಷ್ಟು ಮಹತ್ತರವಾಗಿರಬೇಕು!


ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು.


ಅದಕ್ಕೆ ಅವನು, “ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ, ಬೆತ್ತಲೆಯಾಗಿರುವುದರಿಂದ ಹೆದರಿ ಅಡಗಿಕೊಂಡೆನು” ಎಂದನು.


ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಅಂಜೂರದ ಎಲೆಗಳನ್ನು ಜೋಡಿಸಿ ಉಟ್ಟುಕೊಂಡರು.


ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವುದರಿಂದ ಭೂನಿವಾಸಿಗಳನ್ನು ಮರಳುಗೊಳಿಸಿತ್ತು. ಅವರಿಗೆ, ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸಿತು.


ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವನಾದ್ದರಿಂದ ಅವರು ಆ ಘಟಸರ್ಪನಿಗೆ ಆರಾಧನೆ ಮಾಡಿದರು. ಇದಲ್ಲದೆ ಆ ಮೃಗಕ್ಕೂ ಆರಾಧನೆ ಮಾಡಿ, “ಈ ಮೃಗಕ್ಕೆ ಸಮಾನರು ಯಾರು? ಇದರ ವಿರುದ್ಧ ಯುದ್ಧ ಮಾಡುವುದಕ್ಕೆ ಯಾರು ಶಕ್ತರು?” ಎಂದರು.


“ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್” ಎಂದು ಕೊಚ್ಚಿಕೊಂಡನು.


ಉನ್ನತವಾದ ಮೇಘಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುವೆನು’ ಎಂದುಕೊಂಡೆಯಲ್ಲಾ!


ಆಗ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಪ್ರವಾದಿಗಳನ್ನು ಕೂಡಿಸಿ ಅವರನ್ನು, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕಾಗಿ ಹೋಗಬಹುದೋ ಹೋಗಬಾರದೋ?” ಎಂದು ಕೇಳಲು ಅವರು, “ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.


ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ಅದಕ್ಕೆ ಫರೋಹನು, “ಯೆಹೋವನೆಂಬುವವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲರನ್ನು ಹೋಗಗೊಡಿಸುವುದೇತಕ್ಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ, ಇಸ್ರಾಯೇಲರನ್ನು ಹೋಗಲು ನಾನು ಬಿಡುವುದೇ ಇಲ್ಲ” ಅಂದನು.


ಯಾವನಾದರೂ ಮೂವತ್ತು ದಿನಗಳ ತನಕ ರಾಜನಾದ ನಿನ್ನ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ವಿಜ್ಞಾಪನೆ ಮಾಡಿಕೊಂಡರೆ ಅವನನ್ನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ಖಂಡಿತ ನಿಬಂಧನೆಯನ್ನು ರಾಜಾಜ್ಞೆಯ ರೂಪವಾಗಿ ವಿಧಿಸುವುದು ಒಳ್ಳೆಯದೆಂದು ರಾಜ್ಯದ ಸಕಲ ಮುಖ್ಯಾಧಿಕಾರಿ, ನಾಯಕ, ದೇಶಾಧಿಪತಿ, ಮಂತ್ರಿ, ಸಂಸ್ಥಾನಾಧ್ಯಕ್ಷರೂ ಆಲೋಚನೆ ಮಾಡಿಕೊಂಡಿದ್ದಾರೆ.


ನೀನು ನಿನ್ನನ್ನು ಸಂಹರಿಸುವವರ ಎದುರಿಗೆ ನಾನು ದೇವರು ಎಂದು ಹೇಳುವೆಯೋ? ನಿನ್ನನ್ನು ಸಂಹರಿಸುವವನ ಕೈಯಲ್ಲಿ ನೀನು ದೇವರಲ್ಲ, ನರಪ್ರಾಣಿಯೇ.


ನಾನು ಎದೆಗುಂದಿಸದ ಶಿಷ್ಟನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ, ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.


ಅವರು, “ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾರು?” ಎಂದು ಹೇಳಿಕೊಳ್ಳುತ್ತಾರಲ್ಲಾ.


ನೀವು ಹಿಜ್ಕೀಯನಿಂದ ಮರುಳಾಗಿ ಈ ರೀತಿಯಾಗಿ ಮೋಸಹೋಗಬೇಡಿರಿ, ಅವನನ್ನು ನಂಬಲೂ ಬೇಡಿರಿ. ಯಾವ ರಾಜ್ಯಜನಾಂಗಗಳ ದೇವತೆಗಳೂ ತನ್ನ ಪ್ರಜೆಗಳನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆ ಹೋದನು ಅಂದ ಮೇಲೆ, ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕಿದಂತೆ ತಪ್ಪಿಸಬಲ್ಲನೇ?” ಎಂದು ಹೇಳಿಸಿದನು.


“ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದ ಅರಸನಾದ ಫರೋಹನೇ, ನಿನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು, ‘ಈ ನದಿ ನನ್ನದೇ, ನನಗಾಗಿಯೇ ಅದನ್ನು ಮಾಡಿಕೊಂಡಿದ್ದೇನೆ’ ಎಂದು ಹೇಳಿಕೊಳ್ಳುವ ದೊಡ್ಡ ಮೊಸಳೆಯೇ, ಇಗೋ, ನಾನು ನಿನ್ನ ವಿರುದ್ಧವಾಗಿದ್ದೇನೆ.


“ನರಪುತ್ರನೇ, ನೀನು ತೂರಿನ ಅರಸನ ವಿಷಯದಲ್ಲಿ ಶೋಕ ಗೀತೆಯನ್ನು ಹಾಡು, ಅವನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಸರ್ವಸುಲಕ್ಷಣ ಶಿರೋಮಣಿ, ಪೂರ್ಣಜ್ಞಾನಿ, ಪರಿಪೂರ್ಣಸುಂದರಿ.


ಆನಂತರ ಯೆಹೋವನಾದ ದೇವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಎಲ್ಲಾ ತರಹದ ಮರಗಳನ್ನು ಆ ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ಅದಲ್ಲದೆ ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು.


ಇಸ್ರಾಯೇಲ್‍ ಸಂತತಿಯವರಲ್ಲಿ ಯುದ್ಧ ವಿದ್ಯೆಯನ್ನು ಅರಿಯದವರಿಗೆ ಅದನ್ನು ಕಲಿಸಿಕೊಡುವುದಕ್ಕೂ ಯೆಹೋವನು ಉಳಿಸಿದ ಜನಾಂಗಗಳವರು ಯಾರಾರೆಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು