ಆದಿಕಾಂಡ 3:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಗ ಆ ಮಹಿಳೆ, “ಈ ಮರದ ಹಣ್ಣು ಊಟಕ್ಕೆ ಎಷ್ಟು ಚೆನ್ನಾಗಿದೆ, ನೋಟಕ್ಕೆ ಎಷ್ಟು ರಮಣೀಯವಾಗಿದೆ. ಜ್ಞಾನಾರ್ಜನೆಗೆ ಎಷ್ಟು ಆಕರ್ಷಣೀಯವಾಗಿದೆ” ಎಂದು ತಿಳಿದು, ಅದನ್ನು ತೆಗೆದುಕೊಂಡು ತಿಂದಳು; ಸಂಗಡವಿದ್ದ ಗಂಡನಿಗೂ ಕೊಟ್ಟಳು; ಅವನೂ ತಿಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಗ ಸ್ತ್ರೀಯು - ಆ ಮರದ ಹಣ್ಣು ತಿನ್ನುವದಕ್ಕೆ ಉತ್ತಮವಾಗಿಯೂ ನೋಡುವದಕ್ಕೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು. ಸಂಗಡ ಇದ್ದ ಗಂಡನಿಗೂ ಕೊಡಲು ಅವನೂ ತಿಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಸ್ತ್ರೀಗೆ ಆ ಮರ ಸುಂದರವಾಗಿ ಕಂಡಿತು. ಅದರ ಹಣ್ಣು ಆಕೆಗೆ ತಿನ್ನಲು ಯೋಗ್ಯವಾಗಿ ಕಂಡಿತು. ಆ ಮರ ತನ್ನನ್ನು ಜ್ಞಾನಿಯನ್ನಾಗಿ ಮಾಡುತ್ತದೆಯೆಂದು ಆಕೆ ಉತ್ಸಾಹಗೊಂಡಳು. ಆದ್ದರಿಂದ ಸ್ತ್ರೀಯು ಆ ಮರದ ಹಣ್ಣನ್ನು ಕಿತ್ತುಕೊಂಡು ತಿಂದಳು; ತನ್ನೊಂದಿಗಿದ್ದ ಗಂಡನಿಗೂ ಸ್ವಲ್ಪ ಹಣ್ಣನ್ನು ಕೊಟ್ಟಳು. ಅವನು ಸಹ ಅದನ್ನು ತಿಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಸ್ತ್ರೀಯು, ಆ ಮರದ ಹಣ್ಣು ಆಹಾರಕ್ಕೆ ಒಳ್ಳೆಯದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು, ಆ ಹಣ್ಣನ್ನು ತೆಗೆದುಕೊಂಡು ತಿಂದಳು. ತನ್ನ ಸಂಗಡ ಇದ್ದ ಗಂಡನಿಗೂ ಕೊಟ್ಟಳು, ಅವನೂ ತಿಂದನು. ಅಧ್ಯಾಯವನ್ನು ನೋಡಿ |