ಆದಿಕಾಂಡ 30:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಗೋದಿ ಸುಗ್ಗಿಯ ಕಾಲದಲ್ಲಿ ರೂಬೇನನು ಅಡವಿಗೆ ಹೋಗಿದ್ದಾಗ ಕಾಮಜನಕ ಹಣ್ಣುಗಳನ್ನು ಕಂಡು ತನ್ನ ತಾಯಿಯಾದ ಲೇಯಳಿಗೆ ತಂದು ಕೊಡಲು ರಾಹೇಲಳು ಆಕೆಗೆ, “ನಿನ್ನ ಮಗನು ತಂದಿರುವ ಕಾಮಜನಕ ಹಣ್ಣುಗಳಲ್ಲಿ ಕೆಲವನ್ನು ನನಗೆ ಕೊಡು” ಎಂದು ಕೇಳಿಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಗೋದಿಯ ಸುಗ್ಗಿ ಕಾಲದಲ್ಲಿ ರೂಬೇನನು ಹೊಲದ ಕಡೆ ಹೊಗುತ್ತಿದ್ದಾಗ ಕಾಮೋದ್ದೀಪಕ ಹಣ್ಣುಗಳನ್ನು ಕಂಡನು. ಅವನ್ನು ತಂದು ತನ್ನ ತಾಯಿ ಲೇಯಳಿಗೆ ಕೊಟ್ಟನು. ರಾಖೇಲಳು ಆಕೆಗೆ, “ನಿನ್ನ ಮಗ ತಂದಿರುವ ಕಾಮೋದ್ದೀಪಕ ಫಲಗಳಲ್ಲಿ ಕೆಲವನ್ನು ನನಗೆ ಕೊಡಕ್ಕಾ,” ಎಂದು ಕೇಳಿಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಗೋದೀ ಸುಗ್ಗಿಯ ಕಾಲದಲ್ಲಿ ರೂಬೇನನು ಅಡವಿಗೆ ಹೋಗಿದ್ದಾಗ ಕಾಮಜನಕ ಫಲಗಳನ್ನು ಕಂಡು ತನ್ನ ತಾಯಿಯಾದ ಲೇಯಳಿಗೆ ತಂದು ಕೊಡಲು ರಾಹೇಲಳು ಆಕೆಗೆ - ನಿನ್ನ ಮಗನು ತಂದಿರುವ ಕಾಮಜನಕ ಫಲಗಳಲ್ಲಿ ಕೆಲವನ್ನು ನನಗೆ ಕೊಡಮ್ಮಾ ಎಂದು ಕೇಳಿಕೊಂಡಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಗೋಧಿಯ ಸುಗ್ಗಿಕಾಲದಲ್ಲಿ, ರೂಬೇನನು ಹೊಲಕ್ಕೆ ಹೋಗಿದ್ದಾಗ ಕಾಮಜನಕಗಿಡದ ಹೂವುಗಳನ್ನು ಕಂಡನು. ರೂಬೇನನು ಈ ಹೂವುಗಳನ್ನು ತನ್ನ ತಾಯಿಯಾದ ಲೇಯಳಿಗೆ ತಂದುಕೊಟ್ಟನು. ರಾಹೇಲಳು ಲೇಯಳಿಗೆ, “ದಯವಿಟ್ಟು, ನಿನ್ನ ಮಗನು ತಂದಿರುವ ಹೂವುಗಳಲ್ಲಿ ನನಗೆ ಸ್ವಲ್ಪಕೊಡು” ಎಂದು ಕೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ರೂಬೇನನು ಗೋಧಿ ಕೊಯ್ಯುವ ಕಾಲದಲ್ಲಿ ಹೋಗಿ, ಹೊಲದಲ್ಲಿ ದುದಾಯಿ ಫಲಗಳನ್ನು ಕಂಡು, ತಾಯಿ ಲೇಯಳ ಬಳಿಗೆ ಕೆಲವು ಫಲಗಳನ್ನು ತಂದಾಗ, ರಾಹೇಲಳು ಲೇಯಳಿಗೆ, “ನಿನ್ನ ಮಗನು ತಂದ ಫಲಗಳಲ್ಲಿ ಕೆಲವನ್ನು ನನಗೆ ಕೊಡು,” ಎಂದಳು. ಅಧ್ಯಾಯವನ್ನು ನೋಡಿ |