Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಲೇಯಳು, “ನನ್ನ ದಾಸಿಯನ್ನು ನನ್ನ ಗಂಡನ ವಶಕ್ಕೆ ಒಪ್ಪಿಸಿದ್ದರಿಂದ ದೇವರು ನನಗೆ ಪ್ರತಿಫಲವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅದಕ್ಕೆ “ಇಸ್ಸಾಕಾರ್” ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ನಾನು ನನ್ನ ದಾಸಿಯನ್ನು ಗಂಡನಿಗೆ ಒಪ್ಪಿಸಿದ್ದರಿಂದ ದೇವರು ನನಗೆ ಪ್ರತಿಫಲವನ್ನು ಕೊಟ್ಟಿದ್ದಾರೆ,” ಎಂದು ಹೇಳಿ ಆಕೆ ಆ ಮಗುವಿಗೆ ‘ಇಸ್ಸಾಕಾರ್’ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಾನು ನನ್ನ ದಾಸಿಯನ್ನು ನನ್ನ ಗಂಡನ ವಶಕ್ಕೆ ಒಪ್ಪಿಸಿದ್ದರಿಂದ ದೇವರು ನನಗೆ ಪ್ರತಿಫಲವನ್ನು ಕೊಟ್ಟಿದ್ದಾನೆಂದು ಹೇಳಿ ಅದಕ್ಕೆ ಇಸ್ಸಾಕಾರೆಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಲೇಯಳು, “ದೇವರು ನನಗೆ ಒಂದು ಬಹುಮಾನವನ್ನು ಕೊಟ್ಟನು; ಯಾಕೆಂದರೆ ನಾನು ನನ್ನ ಸೇವಕಿಯನ್ನು ನನ್ನ ಗಂಡನಿಗೆ ಕೊಟ್ಟೆನು” ಎಂದು ಹೇಳಿ, ಆ ಮಗುವಿಗೆ ಇಸ್ಸಾಕಾರ್ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಲೇಯಳು, “ನಾನು ನನ್ನ ಗಂಡನಿಗೆ ನನ್ನ ದಾಸಿಯನ್ನು ಕೊಟ್ಟಿದ್ದರಿಂದ ದೇವರು ನನಗೆ ಪ್ರತಿಫಲವನ್ನು ಕೊಟ್ಟಿದ್ದಾರೆ,” ಎಂದು ಹೇಳಿ, ಅವನಿಗೆ ಇಸ್ಸಾಕಾರ್ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:18
8 ತಿಳಿವುಗಳ ಹೋಲಿಕೆ  

ಇಸ್ಸಾಕಾರ್ಯರಿಂದ ಇನ್ನೂರು ಮುಖ್ಯಸ್ಥರು. ಇವರು ಸಮಯೋಚಿತಜ್ಞಾನವುಳ್ಳವರಾಗಿ ಇಸ್ರಾಯೇಲರು ಮಾಡತಕ್ಕದ್ದನ್ನು ಅರಿತವರಾಗಿದ್ದರು. ಇವರ ಸಹೋದರರೆಲ್ಲರೂ ಇವರ ಆಜ್ಞೆಗೆ ಬದ್ಧರಾಗಿದ್ದರು.


ಜೆಬುಲೂನ್ಯರ ಮತ್ತು ಇಸ್ಸಾಕಾರ್ಯರ ವಿಷಯದಲ್ಲಿ, “ಜೆಬುಲೂನ್ಯರೇ, ನಿಮ್ಮ ಪ್ರಯಾಣಗಳಲ್ಲಿ ಸಂತೋಷವಾಗಿರಿ; ಇಸ್ಸಾಕಾರ್ಯರೇ, ನಿಮ್ಮ ಪಾಳೆಯಗಳಲ್ಲಿ ಆನಂದವಾಗಿರಿ.


ಇಸ್ಸಾಕಾರನ ಮಕ್ಕಳು: ತೋಲಾ, ಪುವ್ವಾ, ಯೋಬ್, ಶಿಮ್ರೋನ್.


ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದವರು ಯಾರೆಂದರೆ: ಯಾಕೋಬನ ಚೊಚ್ಚಲ ಮಗನಾದ ರೂಬೇನ್ ಮತ್ತು ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್.


ದೇವರು ಲೇಯಳ ಪ್ರಾರ್ಥನೆಯನ್ನು ಕೇಳಿದನು. ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಗಂಡು ಮಗುವನ್ನು ಹೆತ್ತಳು.


ಲೇಯಳು ಪುನಃ ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಗಂಡು ಮಗುವನ್ನು ಹೆತ್ತಳು.


ಸಿಮೆಯೋನನ ಕುಲದವರಲ್ಲಿ ಹನ್ನೆರಡು ಸಾವಿರ, ಲೇವಿಯ ಕುಲದವರಲ್ಲಿ ಹನ್ನೆರಡು ಸಾವಿರ, ಇಸ್ಸಕಾರನ ಕುಲದವರಲ್ಲಿ ಹನ್ನೆರಡು ಸಾವಿರ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು