Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಮೇಲೆ ದೇವರು ರಾಹೇಲಳನ್ನು ನೆನಪಿಸಿಕೊಂಡು ಆಕೆಯ ಮೊರೆಯನ್ನು ಕೇಳಿ ಆಕೆಗೆ ಮಕ್ಕಳಾಗುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇದಾದ ಬಳಿಕ ದೇವರು ರಾಖೇಲಳನ್ನು ನೆನೆಸಿಕೊಂಡರು. ಆಕೆಯ ಮೊರೆಯನ್ನು ಕೇಳಿ ಆಕೆಗೂ ಮಕ್ಕಳಾಗುವಂತೆ ಅನುಗ್ರಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಮೇಲೆ ದೇವರು ರಾಹೇಲಳನ್ನು ನೆನಸಿಕೊಂಡು ಆಕೆಯ ಮೊರೆಯನ್ನು ಕೇಳಿ ಆಕೆಗೆ ಮಕ್ಕಳಾಗುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಂತರ, ದೇವರು ರಾಹೇಲಳ ಪ್ರಾರ್ಥನೆಯನ್ನು ಕೇಳಿ ಆಕೆಗೆ ಮಕ್ಕಳಾಗುವಂತೆ ಅನುಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ದೇವರು ರಾಹೇಲಳನ್ನು ಜ್ಞಾಪಕಮಾಡಿಕೊಂಡರು. ದೇವರು ಆಕೆಯ ಮೊರೆಯನ್ನು ಕೇಳಿ, ಆಕೆಗೆ ಮಕ್ಕಳಾಗುವಂತೆ ಅನುಗ್ರಹಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:22
11 ತಿಳಿವುಗಳ ಹೋಲಿಕೆ  

ಲೇಯಳು ಯಾಕೋಬನಿಗೆ ಅಲಕ್ಷ್ಯವಾಗಿದ್ದಾಳೆಂಬುದನ್ನು ಯೆಹೋವನು ನೋಡಿ, ಆಕೆಯು ಗರ್ಭಧರಿಸುವಂತೆ ಅನುಗ್ರಹಿಸಿದನು; ಆದರೆ ರಾಹೇಲಳು ಬಂಜೆಯಾಗಿದ್ದಳು.


ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.


ಬಂಜೆಯು ಮಕ್ಕಳೊಂದಿಗೆ, ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ. ಯೆಹೋವನಿಗೆ ಸ್ತೋತ್ರ!


ಯಾಕೋಬನು ರಾಹೇಲಳ ಮೇಲೆ ಕೋಪಗೊಂಡು, “ದೇವರು ನಿನಗೆ ಮಕ್ಕಳನ್ನು ಕೊಡದೆ ಹೋದ ಮೇಲೆ ಕೊಡಲಿಕ್ಕೆ ನನ್ನಿಂದಾದೀತೋ” ಎಂದನು.


ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು; ಗರ್ಭಫಲವು ಆತನ ಬಹುಮಾನವೇ.


ಹೀಗೆ ಆತನು ತನ್ನ ಪರಿಶುದ್ಧ ವಚನವನ್ನೂ, ತನ್ನ ಸೇವಕನಾದ ಅಬ್ರಹಾಮನನ್ನೂ ನೆನಪುಮಾಡಿಕೊಂಡು


ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.


ತರುವಾಯ ಆಕೆಯು ಹೆಣ್ಣು ಮಗುವನ್ನು ಹೆತ್ತು ಅದಕ್ಕೆ “ದೀನಾ” ಎಂದು ಹೆಸರಿಟ್ಟಳು.


ರಾಹೇಲಳಲ್ಲಿ ಹುಟ್ಟಿದವರು: ಯೋಸೇಫನು ಮತ್ತು ಬೆನ್ಯಾಮೀನನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು