ಆದಿಕಾಂಡ 30:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅದಕ್ಕೆ ಆಕೆಯು, “ನನ್ನ ದಾಸಿಯಾದ ಬಿಲ್ಹಾ ಇದ್ದಾಳಲ್ಲಾ, ಅವಳನ್ನು ಸಂಗಮಿಸು, ಅವಳು ಬಸುರಾದರೆ ಆ ಮಗುವನ್ನು ನನ್ನ ಮಡಿಲಲ್ಲಿ ಹಾಕಲಿ. ಆಗ ನನಗೂ ಸಂತಾನವಾಗುವುದು” ಎಂದು ಹೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅದಕ್ಕೆ ರಾಖೇಲಳು, “ನನ್ನ ದಾಸಿ ಬಿಲ್ಹಾ ಇದ್ದಾಳಲ್ಲವೆ? ಅವಳನ್ನು ಕೂಡಿ, ಅವಳು ನನಗಾಗಿ ಒಂದು ಮಗುವನ್ನು ಹೆತ್ತು ನನ್ನ ಮಡಿಲಲ್ಲಿ ಇಡಲಿ; ಆಗ ಅವಳ ಮುಖಾಂತರ ನನಗೆ ಸಂತಾನ ಪ್ರಾಪ್ತಿಯಾಗುವುದು,” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅದಕ್ಕೆ ಆಕೆಯು - ನನ್ನ ದಾಸಿಯಾದ ಬಿಲ್ಹಾ ಇದ್ದಾಳಲ್ಲಾ; ಅವಳನ್ನು ಕೂಡು; ಅವಳು ಬಸುರಾದರೆ ನನ್ನ ತೊಡೆಯ ಮೇಲೆ ಹೆರಿಸುವೆನು; ಹಾಗೆ ನನಗೂ ಸಂತಾನವಾಗುವದು ಎಂದು ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಂತರ ರಾಹೇಲಳು, “ನೀನು ನನ್ನ ಸೇವಕಿಯಾದ ಬಿಲ್ಹಾಳನ್ನು ತೆಗೆದುಕೊಳ್ಳಬಹುದು. ಆಕೆಯೊಡನೆ ಮಲಗಿಕೊ; ಆಕೆ ನನಗೋಸ್ಕರ ಒಂದು ಮಗುವನ್ನು ಹೆರುವಳು. ಆಗ ನಾನು ಆಕೆಯ ಮೂಲಕ ತಾಯಿಯಾಗುವೆನು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅದಕ್ಕೆ ಆಕೆಯು, “ನನ್ನ ದಾಸಿ ಬಿಲ್ಹಳು ಇದ್ದಾಳೆ, ಅವಳ ಬಳಿಗೆ ಹೋಗು, ಅವಳು ಹೆತ್ತು ನನ್ನ ಮಡಿಲಲ್ಲಿ ಇಡಲಿ. ಅವಳಿಂದ ನನಗೆ ಮಕ್ಕಳಾಗುವರು,” ಎಂದಳು. ಅಧ್ಯಾಯವನ್ನು ನೋಡಿ |