Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಹೀಗಾಗಿ ಬಲಹೀನವಾದ ಹಿಂಡು ಲಾಬಾನನ ಪಾಲಿಗೆ ಬಂದವು, ಬಲಿಷ್ಠವಾದವುಗಳು ಯಾಕೋಬನು ಪಾಲಿಗೆ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಹೀಗೆ ಬಲವಿಲ್ಲದವುಗಳು ಲಾಬಾನನ ಪಾಲಿಗೆ, ಬಲಿಷ್ಠವಾದವುಗಳು ಯಕೋಬನ ಪಾಲಿಗೆ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಹೀಗೆ ಬಲವಿಲ್ಲದವುಗಳು ಲಾಬಾನನ ಪಾಲಿಗೆ ಬಿದ್ದವು, ಬಲಿಷ್ಠವಾದವುಗಳು ಯಾಕೋಬನ ಪಾಲಿಗೆ ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಆದರೆ ಬಲಹೀನವಾದ ಪ್ರಾಣಿಗಳು ಸಂಗಮ ಮಾಡುವಾಗ ಯಾಕೋಬನು ಆ ಕೊಂಬೆಗಳನ್ನು ಅಲ್ಲಿ ಇಡುತ್ತಿರಲಿಲ್ಲ. ಆದ್ದರಿಂದ ಬಲಹೀನವಾದ ಆಡುಕುರಿಗಳಿಗೆ ಹುಟ್ಟಿದ ಮರಿಗಳೆಲ್ಲ ಲಾಬಾನನಿಗೆ ಸೇರಿಕೊಂಡವು. ಬಲವಾದ ಆಡುಕುರಿಗಳಿಗೆ ಹುಟ್ಟಿದ ಮರಿಗಳೆಲ್ಲ ಯಾಕೋಬನಿಗೆ ಸೇರಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಆದರೆ ಕುರಿಗಳು ಬಲಹೀನವಾಗಿದ್ದಾಗ, ಅವನು ಕೋಲುಗಳನ್ನು ದೋಣಿಗಳಲ್ಲಿ ಇಡಲಿಲ್ಲ. ಹೀಗಾಗಿ ಬಲಹೀನವಾದವುಗಳು ಲಾಬಾನನಿಗೂ, ಬಲವಾದವುಗಳು ಯಾಕೋಬನಿಗೂ ಆದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:42
3 ತಿಳಿವುಗಳ ಹೋಲಿಕೆ  

ಇದಲ್ಲದೆ ಬಲಿಷ್ಠವಾದ ಆಡು ಕುರಿಗಳು ಸಂಗಮಮಾಡುವಾಗ ಆ ಕೋಲುಗಳನ್ನು ನೋಡುತ್ತಾ ಸಂಗಮಮಾಡಲಿ ಎಂದು ಯಾಕೋಬನು ತೊಟ್ಟಿಗಳಲ್ಲಿ ಕೋಲುಗಳನ್ನಿಟ್ಟನು. ಆದರೆ ಆಡುಕುರಿಗಳು ಬಲಹೀನವಾಗಿದ್ದಾಗ ಅವನು ಕೋಲುಗಳನ್ನು ತೊಟ್ಟಿಗಳಲ್ಲಿ ಇಡುತ್ತಿರಲಿಲ್ಲ.


ಈ ಪ್ರಕಾರ ಯಾಕೋಬನು ಬಹಳ ಸಂಪತ್ತುಳ್ಳವನಾದನು. ಅವನಿಗೆ ಕುರಿಹಿಂಡುಗಳು, ದಾಸದಾಸಿಯರು, ಒಂಟೆ ಕತ್ತೆಗಳು, ಹೇರಳವಾಗಿದ್ದವು.


ಆತನು ನನಗೆ, ‘ಲಾಬಾನನು ನಿನ್ನ ವಿಷಯದಲ್ಲಿ ನಡೆದುಕೊಂಡ ರೀತಿಯನ್ನು ನಾನು ನೋಡಿದ್ದೇನೆ, ಆದುದರಿಂದ ನೀನು ಕಣ್ಣೆತ್ತಿ ಕುರಿಗಳೊಂದಿಗೆ ಸಂಗಮಿಸುವ ಆಡುಗಳನ್ನು ನೋಡು. ರೇಖೆಯೂ, ಚುಕ್ಕೆಯೂ, ಮಚ್ಚೆಯೂ ಉಳ್ಳವುಗಳಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು