Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ರಾಹೇಲಳು, “ನನ್ನ ಅಕ್ಕನ ಸಂಗಡ ಬಲವಾಗಿ ಹೋರಾಡಿ ಜಯಿಸಿದ್ದೇನೆ” ಎಂದು ಹೇಳಿ ಅದಕ್ಕೆ “ನಫ್ತಾಲಿ” ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ರಾಖೇಲಳು, “ನನ್ನ ಅಕ್ಕನ ಸಂಗಡ ಬಹಳವಾಗಿ ಹೋರಾಡಿ ಗೆದ್ದಿದ್ದೇನೆ,” ಎಂದು ಹೇಳಿ ಆ ಮಗುವನ್ನು ‘ನಫ್ತಾಲಿ’ ಎಂದು ಹೆಸರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ರಾಹೇಲಳು - ನನ್ನ ಅಕ್ಕನ ಸಂಗಡ ಬಲವಾಗಿ ಹೋರಾಡಿ ಗೆದ್ದಿದ್ದೇನೆ ಎಂದು ಹೇಳಿ ಅದಕ್ಕೆ ನಫ್ತಾಲಿ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ರಾಹೇಲಳು, “ನನ್ನ ಅಕ್ಕನೊಂದಿಗೆ ಕಷ್ಟಪಟ್ಟು ಹೋರಾಡಿ ಗೆದ್ದಿದ್ದೇನೆ” ಎಂದು ಹೇಳಿ ಆ ಮಗುವಿಗೆ ನಫ್ತಾಲಿ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ರಾಹೇಲಳು, “ಅಧಿಕವಾದ ಹೋರಾಟಗಳಿಂದ ನನ್ನ ಸಹೋದರಿಯ ಸಂಗಡ ಹೋರಾಡಿ ಜಯಿಸಿದ್ದೇನೆ,” ಎಂದು ಹೇಳಿ ಅವನಿಗೆ ನಫ್ತಾಲಿ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:8
12 ತಿಳಿವುಗಳ ಹೋಲಿಕೆ  

ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್‌ ಮತ್ತು ನಫ್ತಾಲಿಯರ ಗಡಿ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ವಾಸಿಸತೊಡಗಿದನು.


ನಫ್ತಾಲಿಯು ಸ್ವತಂತ್ರವಾಗಿ ಜಿಂಕೆಯಂತಿದ್ದಾನೆ. ಅವನಿಂದ ಇಂಪಾದ ಮಾತುಗಳುಂಟಾಗುವವು.


ಆಗ ಪಾಳೆಯದಲ್ಲಿದ್ದವರೂ, ಕಾವಲುಗಾರರಾಗಿ ಠಾಣದಲ್ಲಿದ್ದವರೂ, ಸುಲಿಗೆಗೋಸ್ಕರ ಹೊರಗೆ ಹೋಗಿದ್ದವರೂ, ಉಳಿದ ಎಲ್ಲಾ ಜನರೂ ಭಯದಿಂದ ಕಳವಳಗೊಂಡರು. ಇದಲ್ಲದೆ ದೇವರು ಭೂಕಂಪವನ್ನು ಉಂಟುಮಾಡಿದ್ದರಿಂದ ಜನರಲ್ಲಿ ಮಹಾಭೀತಿಯುಂಟಾಯಿತು.


ನಫ್ತಾಲಿ ಕುಲದ ವಿಷಯದಲ್ಲಿ, “ನಫ್ತಾಲಿ ಕುಲವೇ, ನೀನು ಯೆಹೋವನ ದಯೆಯನ್ನು ಹೊಂದಿ ಸಂತೃಪ್ತನಾದೆ; ಆತನ ಆಶೀರ್ವಾದದಿಂದ ನಿನಗೆ ಸಮೃದ್ಧಿಯುಂಟು. (ಕಿನ್ನೆರೆತ್) ಸಮುದ್ರವೂ ದಕ್ಷಿಣಪ್ರದೇಶವೂ ನಿನಗೆ ಸ್ವಾಸ್ತ್ಯವಾಗಲಿ” ಎಂದು ಹೇಳಿದನು.


ಈ ಭಯಂಕರವಾದ ಗುಡುಗು ಮತ್ತು ಆನೆಕಲ್ಲಿನ ಮಳೆಯೂ ಬಹಳ ಹೆಚ್ಚಾದವು. ಇವುಗಳನ್ನು ನಿಲ್ಲಿಸುವುದಕ್ಕೆ ಯೆಹೋವನನ್ನು ಪ್ರಾರ್ಥಿಸಿರಿ. ಈ ದೇಶವನ್ನು ಬಿಟ್ಟು ಹೊರಡುವುದಕ್ಕೆ ನಿಮಗೆ ಅಪ್ಪಣೆ ಕೊಡುತ್ತೇನೆ. ಇನ್ನು ನಿಮ್ಮನ್ನು ತಡೆಯುವುದಿಲ್ಲ” ಎಂದನು.


ನಫ್ತಾಲಿಯ ಮಕ್ಕಳು: ಯಹೇಲ್, ಗೂನೀ, ಯೇಚೆರ್, ಶಿಲ್ಲೇಮ್.


ರಾಹೇಲಳ ದಾಸಿಯಾದ ಬಿಲ್ಹಳಲ್ಲಿ ಹುಟ್ಟಿದವರು: ದಾನ್, ನಫ್ತಾಲಿ.


“ಸ್ವಾಮಿ, ನಮ್ಮ ಮಾತನ್ನು ಕೇಳು. ನೀನು ನಮಗೆ ಮಹಾ ಪ್ರಭುವಾಗಿದ್ದೀಯಷ್ಟೆ. ಮರಣಹೊಂದಿರುವ ನಿನ್ನ ಪತ್ನಿಯ ದೇಹವನ್ನು ನಮಗಿರುವ ಸಮಾಧಿಯೊಳಗೆ ಶೇಷ್ಠವಾದದ್ದರಲ್ಲಿ ಇಡಬಹುದು. ನಿನ್ನ ಹೆಂಡತಿಯ ಶವವನ್ನು ಇಡುವುದಕ್ಕೆ ನಮ್ಮೊಳಗೆ ಯಾರೂ ಸ್ಮಶಾನ ಭೂಮಿಯನ್ನು ಕೊಡುವುದಕ್ಕೆ ಹಿಂದೆಗೆಯುವುದಿಲ್ಲ” ಎಂದು ಉತ್ತರ ಕೊಡಲು


ರಾಹೇಲಳ ದಾಸಿಯಾದ ಬಿಲ್ಹಳು ತಿರುಗಿ ಬಸುರಾಗಿ ಯಾಕೋಬನಿಗೆ ಎರಡನೆಯ ಗಂಡು ಮಗುವನ್ನು ಹೆರಲು,


ಲೇಯಳು ತನಗೆ ಹೆರಿಗೆ ನಿಂತುಹೋಗಿರುವುದನ್ನು ತಿಳಿದು ತನ್ನ ದಾಸಿಯಾದ ಜಿಲ್ಪಳನ್ನು ಯಾಕೋಬನ ಹೆಂಡತಿಯಾಗುವುದಕ್ಕೆ ಒಪ್ಪಿಸಿದಳು.


ತರುವಾಯ ನಫ್ತಾಲಿ ಕುಲದವರು, ಏನಾನನ ಮಗನಾದ ಅಹೀರನು ನಫ್ತಾಲಿ ಕುಲದ ಸೈನ್ಯಾಧಿಪತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು