Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ನಮ್ಮ ತಂದೆಯ ಆಸ್ತಿಯೆಲ್ಲಾ ಯಾಕೋಬನ ಪಾಲಾಯಿತು, ನಮ್ಮ ತಂದೆಯ ಆಸ್ತಿಯಿಂದಲೇ ಅವನಿಗೆ ಇಷ್ಟೊಂದು ಐಶ್ವರ್ಯವುಂಟಾಯಿತು” ಎಂಬುದಾಗಿ ಲಾಬಾನನ ಮಕ್ಕಳು ಹೇಳಿಕೊಳ್ಳುವ ಮಾತುಗಳು ಯಾಕೋಬನ ಕಿವಿಗೆ ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಲಾಬಾನನ ಮಕ್ಕಳು, “ನಮ್ಮ ತಂದೆಯ ಆಸ್ತಿಪಾಸ್ತಿಯೆಲ್ಲ ಯಕೋಬನ ಪಾಲಾಯಿತು. ನಮ್ಮ ತಂದೆಯ ಆಸ್ತಿಯಿಂದಲೇ ಅವನು ಇಷ್ಟು ಐಶ್ವರ್ಯವನ್ನು ಶೇಖರಿಸಿದ್ದು,” ಎಂದು ಆಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಮ್ಮ ತಂದೆಯ ಆಸ್ತಿಯೆಲ್ಲಾ ಯಾಕೋಬನ ಪಾಲಾಯಿತು; ನಮ್ಮ ತಂದೆಯ ಆಸ್ತಿಯಿಂದಲೇ ಅವನಿಗೆ ಇಷ್ಟು ಐಶ್ವರ್ಯವುಂಟಾಯಿತು ಎಂಬದಾಗಿ ಲಾಬಾನನ ಮಕ್ಕಳು ಹೇಳಿಕೊಳ್ಳುವ ಮಾತುಗಳು ಯಾಕೋಬನ ಕಿವಿಗೆ ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಒಂದು ದಿನ ಲಾಬಾನನ ಗಂಡುಮಕ್ಕಳು ಮಾತಾಡುತ್ತಿರುವುದನ್ನು ಯಾಕೋಬನು ಕೇಳಿಸಿಕೊಂಡನು. ಅವರು, “ನಮ್ಮ ತಂದೆ ಹೊಂದಿದ್ದ ಪ್ರತಿಯೊಂದನ್ನೂ ಯಾಕೋಬನು ತೆಗೆದುಕೊಂಡು ಐಶ್ವರ್ಯವಂತನಾಗಿದ್ದಾನೆ; ಅವನು ನಮ್ಮ ತಂದೆಯ ಐಶ್ವರ್ಯವನ್ನೆಲ್ಲ ತೆಗೆದುಕೊಂಡಿದ್ದಾನೆ” ಎಂದು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಲಾಬಾನನ ಮಕ್ಕಳು, “ನಮ್ಮ ತಂದೆಗೆ ಇದ್ದವುಗಳನ್ನೆಲ್ಲಾ ಯಾಕೋಬನು ತೆಗೆದುಕೊಂಡು, ನಮ್ಮ ತಂದೆಗಿದ್ದವುಗಳಿಂದ ಈ ಘನತೆಯನ್ನೆಲ್ಲಾ ಪಡೆದಿದ್ದಾನೆ,” ಎಂದು ಹೇಳುವ ಮಾತುಗಳನ್ನು ಯಾಕೋಬನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:1
23 ತಿಳಿವುಗಳ ಹೋಲಿಕೆ  

ಆಗ ಸಮಸ್ತ ಪ್ರಯಾಸವನ್ನು, ಕೈಗೂಡುವ ಸಕಲ ಕಾರ್ಯವನ್ನು ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.


ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು.


ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.


ಅವನು ಅಹಂಭಾವಿಯೂ ಅಜ್ಞಾನಿಯೂ ಆಗಿದ್ದು, ನಿಂದನೆ ವಾಗ್ವಾದಗಳನ್ನುಂಟು ಮಾಡುವ ಭ್ರಾಂತಿಯಲ್ಲಿದ್ದಾನೆ. ಇವುಗಳಿಂದ ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯ ಮುಂತಾದವುಗಳು ಉಂಟಾಗುತ್ತವೆ.


ಬಳಿಕ ಸೈತಾನನು ಆತನನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ,


“ಆಹಾ, ಗಾದೆಗಳಲ್ಲಿ ಜಾಣರು ‘ತಾಯಿಯಂತೆ ಮಗಳು’ ಎಂಬ ಗಾದೆಯನ್ನು ನಿನ್ನ ವಿಷಯವಾಗಿ ನುಡಿಯುವರು.


ಯೆಹೋವನು ಹೀಗೆನ್ನುತ್ತಾನೆ, “ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರಮಿಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ.


ಹೀಗಿರುವುದರಿಂದ ಪಾತಾಳವು ಹೆಚ್ಚು ಆತುರದಿಂದ ಅಗಾಧವಾಗಿ ಬಾಯಿ ತೆರೆಯಲು, ಅವರ ಮಹಿಮೆ, ಕೋಲಾಹಲ, ಗದ್ದಲ, ಉಲ್ಲಾಸ ಇವೆಲ್ಲವುಗಳು ಅದರೊಳಗೆ ಬಿದ್ದುಹೋಗುವವು.


ಕೋಪವು ಕ್ರೂರ, ಕ್ರೋಧವು ಪ್ರವಾಹ, ಮತ್ಸರಕ್ಕೆ ಎದುರಾಗಿ ಯಾರು ನಿಂತಾರು?


ಶಾಂತಗುಣವು ದೇಹಕ್ಕೆ ಜೀವಾಧಾರವು, ಕ್ರೋಧವು ಎಲುಬಿಗೆ ಕ್ಷಯವು.


ನಾನು ಸಿಂಹಗಳಂತಿರುವ ಶತ್ರುಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ದುರಾಶೆಯಿಂದ ಕಬಳಿಸುವಂತಹ ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಈಟಿ ಮತ್ತು ಬಾಣಗಳಂತಿವೆ, ನಾಲಿಗೆಗಳು ಹದವಾದ ಕತ್ತಿಗಳೇ.


ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ಉಳಿದ ಆಸ್ತಿಯನ್ನು ತಮ್ಮ ಮಕ್ಕಳಿಗೆ ಬಿಡುತ್ತಾರೆ.


ನನ್ನ ಗುಡಾರದ ಆಳುಗಳು, ‘ನಮ್ಮ ಯಜಮಾನ ಬಡಿಸಿದ ಮಾಂಸದಿಂದ ತೃಪ್ತರಾಗದವರು ಎಲ್ಲಿಯೂ ಸಿಕ್ಕಲಾರರು’ ಎಂದು ಹೇಳಿಕೊಳ್ಳುತ್ತಿರಲಿಲ್ಲವೋ?


ಅವರ ಮುಂದೆ ತನ್ನ ಘನೈಶ್ವರ್ಯಗಳನ್ನೂ, ಪುತ್ರಲಾಭಾತಿಶಯವನ್ನೂ, ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಸರದಾರರಿಗಿಂತ, ರಾಜಸೇವಕರಿಗಿಂತ ತನಗೇ ಶ್ರೇಷ್ಠಸ್ಥಾನವನ್ನು ಅನುಗ್ರಹಿಸಿದ್ದನ್ನೂ ವರ್ಣಿಸಿ,


ಐಗುಪ್ತ ದೇಶದಲ್ಲಿ ನನಗಿರುವ ಎಲ್ಲಾ ವೈಭವವನ್ನೂ, ನೀವು ಕಂಡಿದ್ದೆಲ್ಲವನ್ನು ತಂದೆಗೆ ತಿಳಿಸಿ ಬೇಗನೆ ಅವನನ್ನು ಇಲ್ಲಿಗೆ ಕರೆದುಕೊಂಡು ಬರಬೇಕು” ಎಂದು ಹೇಳಿ,


ಈ ಪ್ರಕಾರ ಯಾಕೋಬನು ಬಹಳ ಸಂಪತ್ತುಳ್ಳವನಾದನು. ಅವನಿಗೆ ಕುರಿಹಿಂಡುಗಳು, ದಾಸದಾಸಿಯರು, ಒಂಟೆ ಕತ್ತೆಗಳು, ಹೇರಳವಾಗಿದ್ದವು.


ಇದಲ್ಲದೆ ಯಾಕೋಬನು ಲಾಬಾನನ ಮುಖಭಾವವನ್ನು ನೋಡಿದಾಗ ಅದು ಮೊದಲಿದ್ದಂತೆ ತೋರಲಿಲ್ಲ.


ಅದಕ್ಕೆ ಲಾಬಾನನು ಯಾಕೋಬನಿಗೆ, “ಈ ಪುತ್ರಿಯರು ನನ್ನ ಪುತ್ರಿಯರಲ್ಲವೇ, ಈ ಮಕ್ಕಳು ನನ್ನ ಮೊಮ್ಮಕ್ಕಳಲ್ಲವೇ, ಈ ಹಿಂಡುಗಳೂ ನನ್ನವೇ, ನಿನ್ನ ಕಣ್ಣು ಮುಂದೆ ಇರುವುದೆಲ್ಲವೂ ನನ್ನದೇ. ಹಾಗಾದರೆ ಈ ನನ್ನ ಪುತ್ರಿಯರಿಗೋಸ್ಕರವೂ, ಇವರು ಹೆತ್ತ ಮಕ್ಕಳಿಗೋಸ್ಕರವೂ ಈಗ ನಾನೇನು ಮಾಡಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು