ಆದಿಕಾಂಡ 31:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “ಕುರಿಗಳು ಗರ್ಭಧರಿಸುವ ಕಾಲದಲ್ಲಿ ನಾನು ಕನಸಿನಲ್ಲಿ ಕಣ್ಣೆತ್ತಿ ನೋಡಿದಾಗ ಕುರಿಗಳೊಂದಿಗೆ ಸಂಗಮಿಸಿದ ಆಡುಗಳೆಲ್ಲವೂ ರೇಖೆ, ಚುಕ್ಕೆ ಮಚ್ಚೆಗಳುಳ್ಳವುಗಳಾಗಿ ಕಾಣಿಸಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ಆಡುಕುರಿಗಳು ಸಂಗಮ ಮಾಡುವ ಕಾಲದಲ್ಲಿ ನಾನೊಂದು ಕನಸನ್ನು ಕಂಡೆ. ಅದರಲ್ಲಿ ಕಣ್ಣೆತ್ತಿ ನೋಡುತ್ತಿದ್ದ ನನಗೆ ಮೇಕೆಗಳ ಮೇಲೆ ಹಾರಿದ ಹೋತಗಳೆಲ್ಲವು ರೇಖೆ, ಚುಕ್ಕೆ, ಮಚ್ಚೆಗಳುಳ್ಳವುಗಳಾಗಿಯೆ ಕಾಣಿಸಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಕುರಿಗಳು ಸಂಗಮಮಾಡುವ ಕಾಲದಲ್ಲಿ ನಾನು ಕನಸಿನಲ್ಲಿ ಕಣ್ಣೆತ್ತಿ ನೋಡಿದಾಗ ಕುರಿಗಳ ಮೇಲೆ ಹಾರಿದ ಟಗರುಗಳೆಲ್ಲವೂ ರೇಖೆ ಚುಕ್ಕೆ ಮಚ್ಚೆಗಳುಳ್ಳವುಗಳಾಗಿ ಕಾಣಿಸಿದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ಪ್ರಾಣಿಗಳು ಸಂಗಮಿಸುವಾಗ ನನಗೆ ಒಂದು ಕನಸಾಯಿತು. ಸಂಗಮಿಸುತ್ತಿದ್ದ ಹೋತಗಳೆಲ್ಲ ಚುಕ್ಕೆಗಳನ್ನು ಮತ್ತು ಮಚ್ಚೆಗಳನ್ನು ಹೊಂದಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ಇದಲ್ಲದೆ ಕುರಿಗಳು ಸಂಗಮ ಮಾಡುವಾಗ, ಸ್ವಪ್ನದಲ್ಲಿ ನಾನು ನನ್ನ ಕಣ್ಣುಗಳನ್ನೆತ್ತಿ ನೋಡಲಾಗಿ, ಕುರಿಗಳ ಮೇಲೆ ಏರುವ ಟಗರುಗಳು ಚುಕ್ಕೆ, ಮಚ್ಚೆ, ರೇಖೆಗಳುಳ್ಳವುಗಳಾಗಿದ್ದವು. ಅಧ್ಯಾಯವನ್ನು ನೋಡಿ |