Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ಕನಸಿನಲ್ಲಿ ದೇವದೂತನು, ‘ಯಾಕೋಬನೇ’ ಎಂದು ಕರೆಯಲು ನಾನು, ‘ಇದ್ದೇನೆ’ ಎಂದು ಹೇಳಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆ ಕನಸಿನಲ್ಲಿ ದೇವದೂತನು, ‘ಯಕೋಬನೇ’ ಎಂದು ಕರೆದನು. ನಾನು, ‘ಇಗೋ, ಇದ್ದೇನೆ’, ಎಂದು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ಕನಸಿನಲ್ಲಿ ದೇವದೂತನು - ಯಾಕೋಬನೇ ಎಂದು ಕರೆಯಲು ನಾನು - ಇದ್ದೇನೆ ಎಂದು ಹೇಳಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೇವದೂತನು ಕನಸಿನಲ್ಲಿ ನನ್ನ ಚೊತೆ ಮಾತಾಡಿ ‘ಯಾಕೋಬನೇ’ ಎಂದು ಕರೆದನು. “ನಾನು ‘ಇಗೋ ಇದ್ದೇನೆ’ ಎಂದು ಉತ್ತರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದೇವದೂತನು ಸ್ವಪ್ನದಲ್ಲಿ ನನಗೆ, ‘ಯಾಕೋಬನೇ’ ಎಂದನು. ಅದಕ್ಕೆ ನಾನು, ‘ಇಲ್ಲಿ ಇದ್ದೇನೆ,’ ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:11
21 ತಿಳಿವುಗಳ ಹೋಲಿಕೆ  

ಆಗ ನೀವು ಕೂಗಿದರೆ ಯೆಹೋವನು ಉತ್ತರಕೊಡುವನು, ಮೊರೆಯಿಟ್ಟು ಕರೆದರೆ, “ಇಗೋ, ಇದ್ದೇನೆ” ಅನ್ನುವನು. ನೀವು ನಿಮ್ಮ ಮಧ್ಯದೊಳಗಿಂದ ನೊಗವನ್ನು, ಇನ್ನೊಬ್ಬರನ್ನು ದೂಷಣೆಗೆ ಗುರಿಮಾಡಿ ತೋರುವ ಬೆರಳನ್ನು, ಕೆಡುಕಿನ ನುಡಿಯನ್ನು ಬಿಟ್ಟು,


ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ನೀನೆದ್ದು ಈ ದೇಶವನ್ನು ಬಿಟ್ಟು ನೀನು ಹುಟ್ಟಿದ ದೇಶಕ್ಕೂ ಬಂಧುಗಳ ಬಳಿಗೂ ಹಿಂತಿರುಗಿ ಹೋಗು’” ಎಂದು ಹೇಳಿದನು.


ಆದರೆ ಏಲಿಯು, “ನನ್ನ ಮಗನೇ, ಸಮುವೇಲನೇ” ಎಂದು ಕರೆಯಲು ಅವನು, “ಇಗೋ, ಇದ್ದೇನೆ” ಎಂದನು.


ಯೆಹೋವನು ಸಮುವೇಲನನ್ನು ಮೂರನೆಯ ಸಾರಿ ಕರೆದನು. ಅವನು ತಟ್ಟನೆ ಏಲಿಯ ಹತ್ತಿರ ಹೋಗಿ, “ಇಗೋ, ಬಂದಿದ್ದೇನೆ, ನನ್ನನ್ನು ಕರೆದಿಯಲ್ಲಾ” ಅನ್ನಲು, ಹುಡುಗನನ್ನು ಕರೆದವನು ಯೆಹೋವನೇ ಎಂದು ಏಲಿಯು ತಿಳಿದು ಅವನಿಗೆ, “ಹೋಗಿ ಮಲಗಿಕೋ;


ಯೆಹೋವನು ತಿರುಗಿ, “ಸಮುವೇಲನೇ” ಎಂದು ಕರೆದನು. ಸಮುವೇಲನು ಕೂಡಲೆ ಎದ್ದು ಏಲಿಯ ಬಳಿಗೆ ಹೋಗಿ, “ಇಗೋ, ಬಂದಿದ್ದೇನೆ; ನೀನು ನನ್ನನ್ನು ಕರೆದೆಯಲ್ಲಾ” ಅನ್ನಲು ಅವನು, “ನನ್ನ ಮಗನೇ, ನಾನು ನಿನ್ನನ್ನು ಕರೆಯಲಿಲ್ಲಾ, ಹೋಗಿ ಮಲಗಿಕೋ” ಎಂದನು.


ಯೆಹೋವನು ಸಮುವೇಲನನ್ನು ಕರೆದನು; ಸಮುವೇಲನು “ಇಗೋ ಬಂದೆ” ಎಂದು ಉತ್ತರಕೊಟ್ಟು ಒಡನೆ ಏಲಿಯ ಬಳಿಗೆ ಹೋಗಿ,


ಅವನು ಅದನ್ನು ನೋಡುವುದಕ್ಕೆ ಹತ್ತಿರ ಬರುವುದನ್ನು ಯೆಹೋವನು ಕಂಡನು. ಆಗ ದೇವರು ಆ ಪೊದೆಯೊಳಗಿಂದ “ಮೋಶೆಯೇ, ಮೋಶೆಯೇ” ಎಂದು ಅವನನ್ನು ಕರೆದನು. ಅದಕ್ಕೆ ಮೋಶೆ, “ಇಗೋ ಇದ್ದೇನೆ” ಅಂದನು.


ಅವರಿಗೆ ಹೇಳಿದ್ದೇನಂದರೆ, “ನಿಮ್ಮ ತಂದೆಯ ಮುಖಭಾವವು ನನ್ನ ವಿಷಯದಲ್ಲಿ ಮೊದಲಿದ್ದಂತೆ ಇಲ್ಲವೆಂದು ತೋರಿಬಂತು. ಆದರೂ ನನ್ನ ತಂದೆಯ ದೇವರು ನನ್ನೊಂದಿಗೆ ಇದ್ದಾನೆ.


ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರೀಕ್ಷಿಸಿದನು.


ಆಗ ಯೆಹೋವನು ತನ್ನೊಳಗೆ, “ನಾನು ಮಾಡಬೇಕೆಂದಿರುವ ಕಾರ್ಯವನ್ನು ಅಬ್ರಹಾಮನಿಗೆ ಮರೆಮಾಡುವುದು ಸರಿಯೋ?


ಅಬ್ರಹಾಮನು ಬಿಸಿಲೇರಿದಾಗ ಮಮ್ರೆಯ ಮೋರೆ ತೋಪಿನ ತನ್ನ ಗುಡಾರದ ಬಾಗಿಲಲ್ಲಿ ಕುಳಿತಿರುವಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾದನು.


ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು.


ಆಗ ಯೆಹೋವನ ದೂತನು ಆಕಾಶದೊಳಗಿನಿಂದ, “ಅಬ್ರಹಾಮನೇ, ಅಬ್ರಹಾಮನೇ” ಎಂದು ಅವನನ್ನು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ, ಇದ್ದೇನೆ” ಎಂದನು.


ಯೆಹೋವನ ದೂತನು ಆಕಾಶದೊಳಗಿನಿಂದ ಎರಡನೆಯ ಸಾರಿ ಅಬ್ರಹಾಮನನ್ನು ಕರೆದು ಅವನಿಗೆ,


“ಕುರಿಗಳು ಗರ್ಭಧರಿಸುವ ಕಾಲದಲ್ಲಿ ನಾನು ಕನಸಿನಲ್ಲಿ ಕಣ್ಣೆತ್ತಿ ನೋಡಿದಾಗ ಕುರಿಗಳೊಂದಿಗೆ ಸಂಗಮಿಸಿದ ಆಡುಗಳೆಲ್ಲವೂ ರೇಖೆ, ಚುಕ್ಕೆ ಮಚ್ಚೆಗಳುಳ್ಳವುಗಳಾಗಿ ಕಾಣಿಸಿದವು.


ಆದರೆ ರಾತ್ರಿಯಲ್ಲಿ ದೇವರು ಅರಾಮ್ಯನಾದ ಲಾಬಾನನ ಕನಸಿನಲ್ಲಿ ಬಂದು, “ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು” ಎಂದನು.


ಒಂದು ದಿನ ಯೋಸೇಫನು ಕನಸು ಕಂಡು ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.


ಅಲ್ಲಿ ದೇವರು ರಾತ್ರಿಯ ದರ್ಶನದಲ್ಲಿ ಇಸ್ರಾಯೇಲನಿಗೆ, “ಯಾಕೋಬನೇ, ಯಾಕೋಬನೇ” ಎಂದು ಕರೆಯಲು, ಅವನು, “ಇಗೋ ಇದ್ದೇನೆ” ಎಂದನು.


ಯೆಹೋವನು ಅವರಿಗೆ, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಪ್ರಕಟಿಸುವೆನು, ಮತ್ತು ಕನಸಿನಲ್ಲಿ ಅವನ ಸಂಗಡ ಮಾತನಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು