Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ನೀನೆದ್ದು ಈ ದೇಶವನ್ನು ಬಿಟ್ಟು ನೀನು ಹುಟ್ಟಿದ ದೇಶಕ್ಕೂ ಬಂಧುಗಳ ಬಳಿಗೂ ಹಿಂತಿರುಗಿ ಹೋಗು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬೇತೇಲಿನಲ್ಲಿ ನಿನಗೆ ಕಾಣಿಸಿದ ದೇವರು ನಾನೇ, ಅಲ್ಲಿ ನೀನು ಕಲ್ಲಿನ ಮೇಲೆ ಎಣ್ಣೆ ಹೊಯ್ದು ಅಭ್ಯಂಗಿಸಿ, ನನಗೆ ಹರಕೆ ಮಾಡಿಕೊಂಡೆಯಲ್ಲವೆ? ಈಗ ಎದ್ದು ಈ ನಾಡನ್ನು ಬಿಟ್ಟು ನೀನು ಹುಟ್ಟಿದ ನಾಡಿಗೆ ಹಿಂದಿರುಗಿ ಹೋಗು’ ಎಂದು ತಿಳಿಸಿದನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಬೇತೇಲಿನಲ್ಲಿ ನಿನಗೆ ಕಾಣಿಸಿದ ದೇವರು ನಾನೇ; ಅಲ್ಲಿ ಕಂಬದ ಮೇಲೆ ಎಣ್ಣೆಹೊಯಿದು ನನಗೆ ಹರಕೆ ಮಾಡಿಕೊಂಡಿಯಷ್ಟೆ. ಈಗ ನೀನೆದ್ದು ಈ ದೇಶವನ್ನು ಬಿಟ್ಟು ನೀನು ಹುಟ್ಟಿದ ದೇಶಕ್ಕೆ ತಿರಿಗಿಹೋಗು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬೇತೇಲಿನಲ್ಲಿ ನಿನ್ನ ಬಳಿಗೆ ಬಂದಿದ್ದ ದೇವರು ನಾನೇ. ಆ ಸ್ಥಳದಲ್ಲಿ ನೀನು ಒಂದು ಯಜ್ಞವೇದಿಕೆಯನ್ನು ಕಟ್ಟಿದೆ. ನೀನು ಯಜ್ಞವೇದಿಕೆಯ ಮೇಲೆ ಆಲಿವ್ ಎಣ್ಣೆಯನ್ನು ಸುರಿದು ನನಗೆ ಒಂದು ಪ್ರಮಾಣವನ್ನು ಮಾಡಿದೆ. ಈಗ ನೀನು ನಿನ್ನ ಹುಟ್ಟುಸ್ಥಳಕ್ಕೆ ಹಿಂತಿರುಗಿ ಹೋಗಬೇಕೆಂಬುದು ನನ್ನ ಅಪೇಕ್ಷೆ’ ಎಂದು ತಿಳಿಸಿದನು” ಎಂಬುದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀನು ಸ್ತಂಭವನ್ನು ಅಭಿಷೇಕಿಸಿ, ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ಎದ್ದು ಈ ದೇಶದಿಂದ ಹೊರಟು, ನಿನ್ನ ಬಂಧುಗಳ ದೇಶಕ್ಕೆ ಹಿಂದಿರುಗಿ ಹೋಗು,’ ಎಂದು ಹೇಳಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:13
7 ತಿಳಿವುಗಳ ಹೋಲಿಕೆ  

ಮತ್ತು ಯೆಹೋವನು ಯಾಕೋಬನಿಗೆ, “ನೀನು ನಿನ್ನ ತಂದೆಯ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ಹಿಂತಿರುಗಿ ಹೋಗು, ನಾನು ನಿನ್ನೊಂದಿಗೆ ಇರುವೆನು” ಎಂದು ಹೇಳಿದನು.


ಇದಲ್ಲದೆ ಯಾಕೋಬನು ದೇವರನ್ನು ಪ್ರಾರ್ಥಿಸಿ, “ಯೆಹೋವನೇ, ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ‘ನಿನ್ನ ಸ್ವದೇಶಕ್ಕೂ, ಬಂಧುಗಳ ಬಳಿಗೂ ತಿರುಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೆಯದನ್ನು ಮಾಡುವೆನೆಂದು’ ನನಗೆ ವಾಗ್ದಾನ ಮಾಡಿದ ಯೆಹೋವನೇ,


ಅವನು ತನ್ನ ಅಣ್ಣನ ಬಳಿಯಿಂದ ಓಡಿಹೋದಾಗ ದೇವರು ಅವನಿಗೆ ಪ್ರತ್ಯಕ್ಷನಾದನು. ಅದುದರಿಂದ ಅವನು ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.


ಆ ಕನಸಿನಲ್ಲಿ ದೇವದೂತನು, ‘ಯಾಕೋಬನೇ’ ಎಂದು ಕರೆಯಲು ನಾನು, ‘ಇದ್ದೇನೆ’ ಎಂದು ಹೇಳಿದಾಗ


ಯಾಕೋಬನು ಈ ಮಾತುಗಳನ್ನಾಡಿದಾಗ ರಾಹೇಲಳು ಮತ್ತು ಲೇಯಳು, “ನಮ್ಮ ತಂದೆಯ ಮನೆಯಲ್ಲಿ ನಮಗೆ ಪಾಲೂ ಸ್ವಾಸ್ತ್ಯತೆ ಇನ್ನೇನಿದೆ?


ದೇವರು ಯಾಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಗಟ್ಟಾ ಹತ್ತಿ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿ ಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ, ಆತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು