Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ತಾನು ಸಂಪಾದಿಸಿಕೊಂಡಿದ್ದ ಎಲ್ಲಾ ಆಸ್ತಿಯನ್ನೂ, ಪದ್ದನ್ ಅರಾಮ್ ದೇಶದಲ್ಲಿ ಸಂಪಾದಿಸಿಕೊಂಡಿದ್ದ ಎಲ್ಲಾ ಪಶುಪ್ರಾಣಿಗಳನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ತನ್ನ ತಂದೆಯಾದ ಇಸಾಕನ ಬಳಿಗೆ ಹೋಗುವುದಕ್ಕಾಗಿ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಮೆಸಪೊಟೇಮಿಯಾದಲ್ಲಿ ತಾನು ಗಳಿಸಿಕೊಂಡಿದ್ದ ಆಸ್ತಿಯನ್ನೆಲ್ಲ ತೆಗೆದುಕೊಂಡು, ಜಾನುವಾರುಗಳನ್ನೆಲ್ಲ ಅಟ್ಟಿಕೊಂಡು ಕಾನಾನ್ ನಾಡಿಗೆ, ತನ್ನ ತಂದೆ ಇಸಾಕನ ಬಳಿಗೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ತಾನು ಗಳಿಸಿಕೊಂಡಿದ್ದ ಎಲ್ಲಾ ಆಸ್ತಿಯನ್ನೂ ಪದ್ದನ್ಅರಾಮ್ ದೇಶದಲ್ಲಿ ಸಂಪಾದಿಸಿಕೊಂಡಿದ್ದ ಎಲ್ಲಾ ಪಶುಗಳನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ತನ್ನ ತಂದೆಯಾದ ಇಸಾಕನ ಬಳಿಗೆ ಹೋಗುವದಕ್ಕಾಗಿ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಂತರ ಅವರೆಲ್ಲರೂ, ಯಾಕೋಬನ ತಂದೆ ವಾಸಿಸಿದ ಸ್ಥಳವಾದ ಕಾನಾನಿಗೆ ಮರಳಿ ಪ್ರಯಾಣ ಬೆಳೆಸಿದರು. ಯಾಕೋಬನು ಹೊಂದಿದ್ದ ಎಲ್ಲಾ ಆಡುಕುರಿಗಳ ಮಂದೆಗಳು ಅವರ ಮುಂದೆ ನಡೆದವು. ಅವನು ಪದ್ದನ್‌ಅರಾಮಿನಲ್ಲಿದ್ದಾಗ ಹೊಂದಿಕೊಂಡಿದ್ದ ಪ್ರತಿಯೊಂದನ್ನೂ ಅವರು ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ತನ್ನ ಎಲ್ಲಾ ಪಶುಗಳನ್ನೂ, ತಾನು ಸಂಪಾದಿಸಿದ ಎಲ್ಲಾ ಸಂಪತ್ತನ್ನೂ, ಪದ್ದನ್ ಅರಾಮಿನಲ್ಲಿ ತಾನು ಸಂಪಾದಿಸಿದ ಪಶುಗಳನ್ನೂ ಕಾನಾನ್ ದೇಶದಲ್ಲಿದ್ದ ತನ್ನ ತಂದೆ ಇಸಾಕನ ಬಳಿಗೆ ತೆಗೆದುಕೊಂಡು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:18
8 ತಿಳಿವುಗಳ ಹೋಲಿಕೆ  

ತಿರುಗಿ ನನ್ನನ್ನು ನನ್ನ ತಂದೆಯ ಮನೆಗೆ ಸುರಕ್ಷಿತವಾಗಿ ಬರಮಾಡಿದರೆ ಯೆಹೋವನೇ ನನಗೆ ದೇವರಾಗಿರುವನು.


ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿಮಿತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ, “ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು. ತರುವಾಯ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು” ಎಂದುಕೊಂಡನು.


ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನು ನಲವತ್ತು ವರ್ಷದವನಾದಾಗ ಅರಾಮ್ಯನಾದ ಬೆತೂವೇಲನ ಮಗಳೂ ಅರಾಮ್ಯನಾದ ಲಾಬಾನನ ತಂಗಿಯೂ ಆಗಿದ್ದ ರೆಬೆಕ್ಕಳನ್ನು ಪದ್ದನ್ ಅರಾಮಿನಿಂದ ಕರೆದುತಂದು ಹೆಂಡತಿಯನ್ನಾಗಿ ಮಾಡಿಕೊಂಡನು.


ಆಗ ಯಾಕೋಬನು ತನ್ನ ಮಕ್ಕಳನ್ನೂ, ಹೆಂಡತಿಯರನ್ನೂ ಒಂಟೆಗಳ ಮೇಲೆ ಹತ್ತಿಸಿದನು.


ತರುವಾಯ ಆ ಸೇವಕರು ಯಾಕೋಬನ ಬಳಿಗೆ ಹಿಂತಿರುಗಿ ಬಂದು, “ನಾವು ನಿನ್ನ ಅಣ್ಣನಾದ ಏಸಾವನ ಹತ್ತಿರಕ್ಕೆ ಹೋಗಿ ಬಂದಿದ್ದೇವೆ, ಅವನು ನಾನೂರು ಜನರ ಸಮೇತ ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ” ಎಂದು ಹೇಳಿದಾಗ,


ಸಂಪಾದಿಸುವ ಸಮಯ, ಕಳೆದುಕೊಳ್ಳುವ ಸಮಯ, ಕಾಪಾಡುವ ಸಮಯ, ಬಿಸಾಡುವ ಸಮಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು