Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇದಲ್ಲದೆ ಯಾಕೋಬನು ಲಾಬಾನನ ಮುಖಭಾವವನ್ನು ನೋಡಿದಾಗ ಅದು ಮೊದಲಿದ್ದಂತೆ ತೋರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇದಲ್ಲದೆ, ಯಕೋಬನ ಕಣ್ಣಿಗೆ ಲಾಬಾನನ ಮನೋಭಾವವು ಮೊದಲಿದ್ದಂತೆ ತೋರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇದಲ್ಲದೆ ಅವನು ಲಾಬಾನನ ಮುಖಭಾವವನ್ನು ನೋಡಿದಾಗ ಅದು ಮೊದಲಿದ್ದಂತೆ ತೋರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಲಾಬಾನನು ಮೊದಲಿನಂತೆ ಸ್ನೇಹದಿಂದ ಇಲ್ಲದಿರುವುದನ್ನು ಸಹ ಯಾಕೋಬನು ಗಮನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇದಲ್ಲದೆ ಯಾಕೋಬನು ಲಾಬಾನನ ಮುಖವನ್ನು ನೋಡಿದಾಗ, ಅದು ತನ್ನ ಕಡೆಗೆ ಮೊದಲು ಇದ್ದ ಹಾಗೆ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:2
11 ತಿಳಿವುಗಳ ಹೋಲಿಕೆ  

ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ಕಡೆಗೆ ತಿರುಗಿಸಿಕೊಂಡು ಬೆಂಕಿಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕು ಎಂದು ಆಜ್ಞಾಪಿಸಿದನು.


ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಆದ್ದರಿಂದ ಕಾಯಿನನು ಬಹು ಕೋಪಗೊಂಡನು, ಅವನ ಮುಖವು ಸಿಟ್ಟಿನಿಂದ ಕಳೆಗುಂದಿತು.


ಆಗ ಯೋನಾತಾನನು ದಾವೀದನನ್ನು ಕರೆದು, ಅವನಿಗೆ ಈ ಮಾತುಗಳನ್ನು ತಿಳಿಸಿ, ಸೌಲನ ಬಳಿಗೆ ಕರೆದುಕೊಂಡು ಬಂದನು. ದಾವೀದನು ಮುಂಚಿನಂತೆ ಸೌಲನ ಸನ್ನಿಧಿಯಲ್ಲಿ ಇರುವವನಾದನು.


ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿರುವೆ” ಎಂದು ಹೇಳಲು ಲಾಬಾನನು ಅವನಿಗೆ, “ನನ್ನ ಮೇಲೆ ದಯೆ ಇಟ್ಟು ನನ್ನ ಬಳಿಯಲ್ಲೇ ಇರು. ಯೆಹೋವನು ನಿನ್ನ ನಿಮಿತ್ತ ನನ್ನನ್ನು ಅಭಿವೃದ್ಧಿಪಡಿಸಿದ್ದಾನೆಂದು ಚೆನ್ನಾಗಿ ತಿಳಿದುಕೊಂಡಿದ್ದೇನೆ.


ನಿಮ್ಮಲ್ಲಿ ಮೃದುಸ್ವಭಾವಿಯೂ ಮತ್ತು ಸೂಕ್ಷ್ಮಗುಣವುಳ್ಳವನು ಆಗಿರುವ ಸಹೋದರನು ಆಹಾರಕ್ಕಾಗಿ ತನ್ನ ಸಹೋದರ, ಪ್ರೀತಿಯ ಹೆಂಡತಿ ಮತ್ತು ತನ್ನ ಮಕ್ಕಳನ್ನು ದ್ವೇಷಿಸುವನು.


ಆ ನಗರಗಳ ವಿವರ ಹೀಗಿದೆ, ಯಾವನಾದರೂ ದ್ವೇಷವಿಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದರೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.


ಆಗ ಮೋಶೆಯು ಯೆಹೋವನಿಗೆ, “ಕರ್ತನೇ, ನಾನು ಮೊದಲಿನಿಂದಲೂ, ನೀನು ನಿನ್ನ ದಾಸನ ಸಂಗಡ ಮಾತನಾಡಿದ ಮೇಲೆಯೂ ನಾನು ವಾಕ್ಚಾತುರ್ಯವಿಲ್ಲದವನು. ನಾನು ತೊದಲುವವನಾಗಿದ್ದು ನನ್ನ ನಾಲಿಗೆಯೂ ಮಂದವಾಗಿವೆ” ಎಂದು ಹೇಳಿದನು.


“ನಮ್ಮ ತಂದೆಯ ಆಸ್ತಿಯೆಲ್ಲಾ ಯಾಕೋಬನ ಪಾಲಾಯಿತು, ನಮ್ಮ ತಂದೆಯ ಆಸ್ತಿಯಿಂದಲೇ ಅವನಿಗೆ ಇಷ್ಟೊಂದು ಐಶ್ವರ್ಯವುಂಟಾಯಿತು” ಎಂಬುದಾಗಿ ಲಾಬಾನನ ಮಕ್ಕಳು ಹೇಳಿಕೊಳ್ಳುವ ಮಾತುಗಳು ಯಾಕೋಬನ ಕಿವಿಗೆ ಬಿದ್ದವು.


ಮತ್ತು ಯೆಹೋವನು ಯಾಕೋಬನಿಗೆ, “ನೀನು ನಿನ್ನ ತಂದೆಯ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ಹಿಂತಿರುಗಿ ಹೋಗು, ನಾನು ನಿನ್ನೊಂದಿಗೆ ಇರುವೆನು” ಎಂದು ಹೇಳಿದನು.


ಅವರಿಗೆ ಹೇಳಿದ್ದೇನಂದರೆ, “ನಿಮ್ಮ ತಂದೆಯ ಮುಖಭಾವವು ನನ್ನ ವಿಷಯದಲ್ಲಿ ಮೊದಲಿದ್ದಂತೆ ಇಲ್ಲವೆಂದು ತೋರಿಬಂತು. ಆದರೂ ನನ್ನ ತಂದೆಯ ದೇವರು ನನ್ನೊಂದಿಗೆ ಇದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು