Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹೀಗೆ ಅವನು ತನ್ನ ಆಸ್ತಿಯನ್ನೆಲ್ಲಾ ತೆಗೆದುಕೊಂಡು ಯೂಫ್ರೆಟಿಸ್ ಮಹಾ ನದಿಯನ್ನು ದಾಟಿ ಗಿಲ್ಯಾದೆಂಬ ಬೆಟ್ಟದ ಸೀಮೆಯ ದಾರಿಯನ್ನು ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಹೀಗೆ ಅವನು ತನ್ನ ಆಸ್ತಿಪಾಸ್ತಿಯೊಂದಿಗೆ ಓಡಿಹೋಗಿ ಯೂಫ್ರೆಟಿಸ್ ಮಹಾನದಿಯನ್ನು ದಾಟಿ ಗಿಲ್ಯಾದ್‍ ಎಂಬ ಗುಡ್ಡಗಾಡಿನ ದಾರಿಯನ್ನು ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೀಗೆ ಅವನು ತನ್ನ ಆಸ್ತಿಯನ್ನೆಲ್ಲಾ ತೆಗೆದುಕೊಂಡು ಓಡಿಹೋಗಿ ಯೂಫ್ರೇಟೀಸ್ ಮಹಾನದಿಯನ್ನು ದಾಟಿ ಗಿಲ್ಯಾದೆಂಬ ಬೆಟ್ಟದ ಸೀಮೆಯ ದಾರಿಯನ್ನು ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯಾಕೋಬನು ತನ್ನ ಕುಟುಂಬವನ್ನು ಕರೆದುಕೊಂಡು, ತನ್ನ ಪ್ರತಿಯೊಂದು ಸ್ವತ್ತನ್ನು ತೆಗೆದುಕೊಂಡು ಬೇಗನೆ ಅಲ್ಲಿಂದ ಹೊರಟನು. ಅವರು ಯೂಫ್ರೇಟೀಸ್ ಮಹಾನದಿಯನ್ನು ದಾಟಿ, ಬೆಟ್ಟಗಳ ಸೀಮೆಯಿಂದ ಗಿಲ್ಯಾದ್ ದೇಶದ ಕಡೆಗೆ ಪ್ರಯಾಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವನು ತನಗಿದ್ದದ್ದನ್ನೆಲ್ಲಾ ತೆಗೆದುಕೊಂಡು ಓಡಿಹೋದನು. ಅವನು ಎದ್ದು ಗಿಲ್ಯಾದ್ ಪರ್ವತಕ್ಕೆ ಅಭಿಮುಖವಾಗಿ ಯೂಫ್ರೇಟೀಸ್ ನದಿಯನ್ನು ದಾಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:21
18 ತಿಳಿವುಗಳ ಹೋಲಿಕೆ  

ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ಹಜಾಯೇಲನು ಬಂದು ಗತ್ ಊರಿಗೆ ಮುತ್ತಿಗೆ ಹಾಕಿ, ಅದನ್ನು ಸ್ವಾಧೀನಪಡಿಸಿಕೊಂಡನು. ಅಲ್ಲಿಂದ ಅವನು ಯೆರೂಸಲೇಮಿಗೆ ವಿರೋಧವಾಗಿ ಹೊರಟನು.


ಚೀಯೋನಿಗೆ ಅಭಿಮುಖರಾಗಿ ಮಾರ್ಗವನ್ನು ವಿಚಾರಿಸಿ, ಬನ್ನಿರಿ, ಯೆಹೋವನನ್ನು ಆಶ್ರಯಿಸಿ, ಎಂದಿಗೂ ಮರೆಯದ ಶಾಶ್ವತವಾದ ಒಡಂಬಡಿಕೆಯನ್ನು ಆತನೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.


ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,


ಗಿಲ್ಯಾದಿನ ಜನರೂ ಅಧಿಪತಿಗಳೂ, “ನಮ್ಮಲ್ಲಿ ಅಮ್ಮೋನಿಯರೊಡನೆ ಯುದ್ಧಕ್ಕೆ ಕೈಹಾಕುವವನು ಯಾರು? ಅಂಥವನನ್ನು ಗಿಲ್ಯಾದಿನವರೆಲ್ಲರ ಮೇಲೆ ನಾಯಕನನ್ನಾಗಿ ಮಾಡುವೆವು” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.


ಆ ಕಾಲದಲ್ಲಿ ನಾವು ಆ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡೆವು. ಅರ್ನೋನ್ ಹಳ್ಳದ ಬಳಿಯಲ್ಲಿರುವ ಅರೋಯೇರ್ ಮೊದಲುಗೊಂಡು ಗಿಲ್ಯಾದ್ ಸೀಮೆಯ ಮಧ್ಯದ ವರೆಗೂ ಇರುವ ಪ್ರದೇಶವನ್ನೆಲ್ಲಾ ಅದರ ಪಟ್ಟಣಗಳ ಸಹಿತವಾಗಿ ನಾನು ರೂಬೇನ್ಯರಿಗೂ ಮತ್ತು ಗಾದ್ಯರಿಗೂ ಕೊಟ್ಟೆನು.


ರೂಬೇನ್ ಕುಲದವರಿಗೂ, ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಯಗ್ಜೇರ್, ಗಿಲ್ಯಾದ್ ಎಂಬ ಪ್ರದೇಶವನ್ನು ನೋಡಿದಾಗ ಅವು ದನಕುರಿಗಳ ಮೇವಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡರು.


ಇಸ್ರಾಯೇಲರಿಗೆ ಶುಭವಾಗಬೇಕೆಂಬುದು ಯೆಹೋವನ ಚಿತ್ತವೆಂದು ಬಿಳಾಮನು ತಿಳಿದು ಮೊದಲಿನಂತೆ ಶಕುನ ನೋಡುವುದಕ್ಕೆ ಹೋಗದೆ ಅರಣ್ಯದ ಕಡೆಗೆ ಮುಖವನ್ನು ತಿರುಗಿಸಿಕೊಂಡನು.


ಯಾಕೋಬನು ಗೋಷೆನ್ ಸೀಮೆಯ ದಾರಿಯನ್ನು ವಿಚಾರಿಸುವುದಕ್ಕೆ ಯೆಹೂದನನ್ನು ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್ ಸೀಮೆಗೆ ಬಂದಾಗ,


ಆ ಮೇಲೆ ಅವರು ಊಟಕ್ಕೆ ಕುಳಿತುಕೊಂಡಾಗ ಅವರು ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ, ಇಷ್ಮಾಯೇಲರ ಗುಂಪು ಒಂಟೆಗಳ ಮೇಲೆ ಪರಿಮಳ ದ್ರವ್ಯ, ಸುಗಂಧ ತೈಲ, ರಕ್ತಬೋಳ, ಇವುಗಳನ್ನು ಹೇರಿಕೊಂಡು ಗಿಲ್ಯಾದಿನಿಂದ ಐಗುಪ್ತದೇಶಕ್ಕೆ ಪ್ರಯಾಣಮಾಡುತ್ತಾ ಬರುವುದನ್ನು ಕಂಡರು.


ಅವನು ತನ್ನ ಬಂಧುಗಳನ್ನು ಕೂಡಿಸಿಕೊಂಡು, ಏಳು ದಿನ ಪ್ರಯಾಣಮಾಡಿ ಯಾಕೋಬನನ್ನು ಹಿಂದಟ್ಟಿ ಗಿಲ್ಯಾದ್ ಬೆಟ್ಟದ ಸೀಮೆಯಲ್ಲಿ ಅವನನ್ನು ಸಂಧಿಸಿದನು.


ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.


ಮೂರನೆಯ ನದಿಯ ಹೆಸರು ಟೈಗ್ರೀಸ್; ಅದು ಅಶ್ಶೂರ್ ದೇಶದ ಪೂರ್ವಕ್ಕೆ ಹರಿಯುವುದು. ನಾಲ್ಕನೆಯದು ಯೂಫ್ರೆಟಿಸ್ ನದಿ.


ಆದರೆ ಯಾಕೋಬನು ತಾನು ಹೋಗುತ್ತೇನೆಂದು ಅರಾಮ್ಯನಾದ ಲಾಬಾನನಿಗೆ ತಿಳಿಸದೆ ಅವನನ್ನು ಮೋಸಗೊಳಿಸಿ ಹೊರಟುಬಿಟ್ಟನು.


ಯಾಕೋಬನು ಹೊರಟುಹೋದ ವರ್ತಮಾನವು ಮೂರನೆಯ ದಿನದಲ್ಲಿ ಲಾಬಾನನಿಗೆ ತಿಳಿದುಬರಲು,


ಅಲ್ಲಿಂದ ಗಿಲ್ಯಾದ್ ಪ್ರಾಂತ್ಯ, ತಖ್ತೀಮ್ ಹೂಜೀ ಪ್ರದೇಶ ಇವುಗಳ ಮೇಲೆ ಯಾನಿನ ದಾನ್ ಎಂಬಲ್ಲಿಗೂ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು