Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆದರೆ ತಂದೆಯ ಮನೆಗೆ ಹೋಗುವುದಕ್ಕೆ ನಿನಗೆ ಬಹಳ ಆಶೆಯಿರುವುದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ತಂದೆಯ ಮನೆಗೆ ಹಿಂದಿರುಗುವ ಅಭಿಲಾಶೆಯಿಂದ ನೀನು ಹೀಗೆ ಬಂದು ಬಿಟ್ಟಿದ್ದೇನೋ ಸರಿ. ಆದರೆ ನನ್ನ ಕುಲದೇವರುಗಳನ್ನು ಕದ್ದದ್ದು ಏಕೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆದರೆ ತಂದೆಯ ಮನೆಗೆ ಹೋಗುವದಕ್ಕೆ ನಿನಗೆ ಬಹಳ ಆಶೆಯಿರುವದರಿಂದ ಹೋಗಬೇಕಾಯಿತು. ಅದಿರಲಿ; ನನ್ನ ದೇವರುಗಳನ್ನು ಕದ್ದದ್ದು ಯಾಕೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನೀನು ನಿನ್ನ ಮನೆಗೆ ಹಿಂತಿರುಗಿ ಹೋಗಬೇಕೆಂಬುದು ನಿನ್ನ ಅಪೇಕ್ಷೆ ಎಂದು ನನಗೆ ತಿಳಿದಿದೆ. ಆದ್ದರಿಂದಲೇ ನೀನು ಹೊರಟು ಬಂದೆ. ಆದರೆ ನೀನು ನನ್ನ ಮನೆಯಿಂದ ವಿಗ್ರಹಗಳನ್ನು ಕದ್ದುಕೊಂಡು ಬಂದದ್ದೇಕೆ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಈಗ ನೀನು ನಿನ್ನ ತಂದೆಯ ಮನೆಯನ್ನು ಬಹಳವಾಗಿ ಹಾರೈಸಿದ್ದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:30
17 ತಿಳಿವುಗಳ ಹೋಲಿಕೆ  

ಅವನು, “ನೀವು ಯಾಜಕನನ್ನೂ ನಾವು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ, ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವು ನನ್ನನ್ನು ಕೇಳುವುದು ಹೇಗೆ?” ಅಂದನು.


ಆಗ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವುದಕ್ಕೋಸ್ಕರ ಹೋಗಿದ್ದನು. ಹೀಗಿರುವಲ್ಲಿ ರಾಹೇಲಳು ತನ್ನ ತಂದೆಯ ಮನೆಯಲ್ಲಿದ್ದ ವಿಗ್ರಹಗಳನ್ನು ಕದ್ದುಕೊಂಡಳು.


ನೀವು ಅವುಗಳಿಗೆ, “ಭೂಮ್ಯಾಕಾಶಗಳನ್ನು ಸೃಷ್ಟಿಸದಿರುವ ದೇವರುಗಳು ಭೂಮಿಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು” ಎಂದು ಹೇಳಿರಿ.


ನಾನು ಐಗುಪ್ತದ ದೇವಾಲಯಗಳಲ್ಲಿ ಬೆಂಕಿಹೊತ್ತಿಸುವೆನು, ಅವನು ಅವುಗಳನ್ನು ಸುಟ್ಟು ದೇವತೆಗಳನ್ನು ಸೆರೆ ಒಯ್ಯುವನು; ಕುರುಬನು ತನ್ನ ಕಂಬಳಿಯನ್ನು ಸುತ್ತಿಕೊಳ್ಳುವಂತೆ ಅವನು ಐಗುಪ್ತ ದೇಶವನ್ನು ಸುತ್ತಿಕೊಳ್ಳುವನು; ಸಮಾಧಾನವಾಗಿ ಅಲ್ಲಿಂದ ಹೊರಟು ಹೋಗುವನು.


ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದರು, ಏಕೆಂದರೆ ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ. ಆದುದರಿಂದಲೇ ಅವು ಅವರಿಂದ ಹಾಳಾದವು.


ಫಿಲಿಷ್ಟಿಯರು ಅಲ್ಲಿ ಬಿಟ್ಟು ಹೋಗಿದ್ದ ವಿಗ್ರಹಗಳನ್ನು ದಾವೀದನೂ ಅವನ ಜನರೂ ತೆಗೆದುಕೊಂಡು ಬಂದರು.


ಯೋವಾಷನು ತನಗೆ ವಿರೋಧವಾಗಿ ನಿಂತವರೆಲ್ಲರಿಗೆ, “ಬಾಳನಿಗೋಸ್ಕರ ನೀವು ವ್ಯಾಜ್ಯಮಾಡಬೇಕೋ? ನೀವು ಅವನನ್ನು ರಕ್ಷಿಸಬೇಕೋ? ಅವನಿಗಾಗಿ ವ್ಯಾಜ್ಯಮಾಡುವವರು ಈ ಹೊತ್ತೇ ಕೊಲ್ಲಲ್ಪಡಲಿ. ಬಾಳನು ದೇವನಾಗಿದ್ದರೆ ತನ್ನ ಯಜ್ಞವೇದಿಯನ್ನು ಕೆಡವಿಬಿಟ್ಟದ್ದಕ್ಕಾಗಿ ತಾನೇ ವ್ಯಾಜ್ಯಮಾಡಲಿ” ಎಂದನು.


ಆ ಕಾಲದಲ್ಲಿ ಯೆಹೋವನು ಐಗುಪ್ತ್ಯರ ದೇವತೆಗಳನ್ನು ಶಿಕ್ಷಿಸಿ, ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದ್ದರಿಂದ ಅವರು ಆ ಮಕ್ಕಳ ಶವಗಳನ್ನು ಸಮಾಧಿಮಾಡುತ್ತಿದ್ದರು.


ಆ ರಾತ್ರಿ ನಾನು ಐಗುಪ್ತದೇಶದ ಮೇಲೆ ಹಾದುಹೋಗಿ ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ, ಚೊಚ್ಚಲಾಗಿರುವುದನ್ನೆಲ್ಲಾ ಸಂಹರಿಸುವೆನು. ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ ನ್ಯಾಯತೀರಿಸುವೆನು. ನಾನೇ ಯೆಹೋವನು.


ಅದಕ್ಕೆ ಯಾಕೋಬನು ಲಾಬಾನನಿಗೆ, “ನೀನು ನಿನ್ನ ಹೆಣ್ಣು ಮಕ್ಕಳನ್ನು ಬಲಾತ್ಕಾರದಿಂದ ಹಿಂದಕ್ಕೆ ತೆಗೆದುಕೊಳ್ಳುವಿ ಎಂದು ಭಯಪಟ್ಟು ಹೊರಟು ಬಂದೆನು.


ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ “ನಿಮ್ಮ ಮಧ್ಯಲ್ಲಿರುವ ಅನ್ಯ ದೇವರುಗಳನ್ನು ತೆಗೆದುಹಾಕಿ ನಿಮ್ಮನ್ನು ಶುದ್ಧಪಡಿಸಿಕೊಂಡು, ವಸ್ತ್ರಗಳನ್ನು ಬದಲಾಯಿಸಿರಿ,


ಯೆಹೋಶುವನು ಅವರಿಗೆ, “ನಿಮ್ಮ ದೇವರಾದ ಯೆಹೋವನು ಹೇಳುವುದೇನೆಂದರೆ, ಅಬ್ರಹಾಮ, ನಾಹೋರ ಎಂಬುವವರ ತಂದೆಯಾದ ತೆರಹ, ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.


ಯಾಜಕನೂ ಬಂದು ಇವರೊಡನೆ ಬಾಗಿಲಲ್ಲಿ ನಿಂತಿದ್ದಾಗ, ಆ ಐದು ಮಂದಿ ಮನೆಯನ್ನು ಹೊಕ್ಕು, ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನೂ, ಏಫೋದನ್ನೂ, ದೇವತಾಪ್ರತಿಮೆಗಳನ್ನೂ ತೆಗೆದುಕೊಂಡರು.


“ಮಾರ್ಗವು ಕವಲೊಡೆಯುವ ಸ್ಥಳದಲ್ಲಿ, ಎರಡು ದಾರಿಗಳ ಮೊದಲಲ್ಲಿ ಬಾಬೆಲಿನ ಅರಸನು ಶಕುನ ನೋಡುವುದಕ್ಕೆ ನಿಂತಿದ್ದಾನೆ; ಬಾಣಗಳನ್ನು ಕಲಕಿ, ವಿಗ್ರಹಗಳನ್ನು ಪ್ರಶ್ನೆಕೇಳಿ, ಕಾಳಿಜವನ್ನು ಪರೀಕ್ಷಿಸಿದ್ದಾನೆ.


ಆದರೆ ಹೋಬಾಬನು ಮೋಶೆಗೆ, “ನಾನು ಬರುವುದಿಲ್ಲ; ನನ್ನ ಸ್ವದೇಶಕ್ಕೆ, ನನ್ನ ಸ್ವಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು