Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ರಾಹೇಲಳು ಆ ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಬರದೊಳಗಿಟ್ಟು (ತಡಿಯ ಚೀಲದಲ್ಲಿ) ಅವುಗಳ ಮೇಲೆ ಕುಳಿತ್ತಿದ್ದಳು. ಲಾಬಾನನು ಗುಡಾರದಲ್ಲಿದ್ದ ವಸ್ತುಗಳನ್ನೆಲ್ಲಾ ನೋಡಿದರೂ ಅವುಗಳನ್ನು ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ರಾಖೇಲಳು ಆ ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಬರದೊಳಗಿಟ್ಟು, ಅವುಗಳ ಮೇಲೆ ಕುಳಿತಿದ್ದಳು. ಲಾಬಾನನು ಗುಡಾರದಲ್ಲಿದ್ದ ಸಾಮಾನುಗಳನ್ನೆಲ್ಲ ಮುಟ್ಟಿ ಮುಟ್ಟಿ ನೋಡಿದನು. ವಿಗ್ರಹಗಳು ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ರಾಹೇಲಳು ಆ ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಬರದೊಳಗಿಟ್ಟು ಅವುಗಳ ಮೇಲೆ ಕೂತಿದ್ದಳು. ಲಾಬಾನನು ಗುಡಾರದಲ್ಲಿದ್ದ ಸಾಮಾನನ್ನೆಲ್ಲಾ ಮುಟ್ಟಿಮುಟ್ಟಿ ನೋಡಿದರೂ ಅವುಗಳನ್ನು ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ರಾಹೇಲಳು ಆ ವಿಗ್ರಹಗಳನ್ನು ತನ್ನ ಒಂಟೆಯ ಸಬರದೊಳಗಿಟ್ಟು ಅದರ ಮೇಲೆ ಕುಳಿತುಕೊಂಡಿದ್ದಳು. ಲಾಬಾನನು ಇಡೀ ಗುಡಾರವನ್ನು ಹುಡುಕಿದರೂ ತನ್ನ ವಿಗ್ರಹಗಳನ್ನು ಕಂಡುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆದರೆ ರಾಹೇಲಳು ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಾಮಗ್ರಿಯಲ್ಲಿಟ್ಟು, ಅದರ ಮೇಲೆ ಕುಳಿತುಕೊಂಡಳು. ಲಾಬಾನನು ಗುಡಾರವನ್ನೆಲ್ಲಾ ಹುಡುಕಿದರೂ, ಅವನು ಅವುಗಳನ್ನು ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:34
8 ತಿಳಿವುಗಳ ಹೋಲಿಕೆ  

ಆಗ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವುದಕ್ಕೋಸ್ಕರ ಹೋಗಿದ್ದನು. ಹೀಗಿರುವಲ್ಲಿ ರಾಹೇಲಳು ತನ್ನ ತಂದೆಯ ಮನೆಯಲ್ಲಿದ್ದ ವಿಗ್ರಹಗಳನ್ನು ಕದ್ದುಕೊಂಡಳು.


ಆಗ ಯಾಕೋಬನು ತನ್ನ ಮಕ್ಕಳನ್ನೂ, ಹೆಂಡತಿಯರನ್ನೂ ಒಂಟೆಗಳ ಮೇಲೆ ಹತ್ತಿಸಿದನು.


ಲಾಬಾನನು ಯಾಕೋಬನ ಗುಡಾರದಲ್ಲಿಯೂ, ಲೇಯಳ ಗುಡಾರದಲ್ಲಿಯೂ, ಆ ಇಬ್ಬರು ದಾಸಿಯರ ಗುಡಾರದಲ್ಲಿಯೂ ಹುಡುಕಿದನು. ಆದರೂ ಅವನಿಗೇನೂ ಸಿಕ್ಕಲ್ಲಿಲ್ಲ. ಲೇಯಳ ಗುಡಾರವನ್ನು ಬಿಟ್ಟು ರಾಹೇಲಳ ಗುಡಾರಕ್ಕೆ ಬಂದನು.


ರಾಹೇಲಳು ತನ್ನ ತಂದೆಗೆ, “ಅಪ್ಪಾ, ನಾನು ನಿನ್ನ ಮುಂದೆ ಎದ್ದು ನಿಂತುಕೊಳ್ಳದೆ ಹೋದರೂ ಕೋಪಿಸಿಕೊಳ್ಳಬೇಡ, ನಾನು ಮೈಲಿಗೆಯಾಗಿದ್ದೇನೆ” ಎಂದು ಹೇಳಿದಳು. ಅವನು ಚೆನ್ನಾಗಿ ಹುಡುಕಿದರೂ ಆ ವಿಗ್ರಹಗಳನ್ನು ಕಂಡುಕೊಳ್ಳದೆ ಹೊರಟು ಹೋದನು.


ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವುದು. ಹಟವು ಮಿಥ್ಯಾಭಕ್ತಿಗೂ, ವಿಗ್ರಹಾರಾಧನೆಗೂ ಸಮಾನವಾಗಿರುವುದು. ನೀನು ಯೆಹೋವನ ಮಾತಿನಂತೆ ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಅರಸುತನದಿಂದ ನಿವಾರಿಸಿಬಿಟ್ಟಿದ್ದಾನೆ” ಎಂದು ಹೇಳಿದನು.


ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹಗಳಿಲ್ಲದೆ ಇಸ್ರಾಯೇಲರು ಬಹಳ ದಿನಗಳು ತಾಳಿಕೊಂಡಿರುವರು.


ಸ್ರಾವವುಳ್ಳವನು ಕುಳಿತ್ತಿದ್ದ ತಡಿಯು ಅಶುದ್ಧವು.


ಅವನು, “ನೀವು ಯಾಜಕನನ್ನೂ ನಾವು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ, ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವು ನನ್ನನ್ನು ಕೇಳುವುದು ಹೇಗೆ?” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು