Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ನನ್ನ ತಂದೆಯ ದೇವರೂ, ಅಬ್ರಹಾಮನ ದೇವರೂ, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸಿಬಿಡುತ್ತಿದ್ದೆ, ದೇವರು ನನ್ನ ಕಷ್ಟವನ್ನೂ ನಾನು ಪಟ್ಟ ಪ್ರಯಾಸ ಗೊತ್ತಿದ್ದರಿಂದಲೇ ನಿನ್ನೆಯ ರಾತ್ರಿ ನಿನ್ನನ್ನು ಗದರಿಸಿದನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ನನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ಆಗಿರುವಂಥವರು ನನ್ನ ಕಡೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀವು ನನ್ನನ್ನು ಬರಿಗೈಯಾಗಿ ಕಳುಹಿಸುತ್ತಿದ್ದಿರಿ. ದೇವರು ನನ್ನ ಕಷ್ಟದುಃಖವನ್ನೂ ನಾನು ಪಟ್ಟ ಪ್ರಯಾಸವನ್ನೂ ಗಮನಿಸಿದ್ದಾರೆ. ಆದ್ದರಿಂದಲೇ ನಿನ್ನೆಯ ರಾತ್ರಿ ನಿಮಗೆ ಎಚ್ಚರಿಕೆ ನೀಡಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ನನ್ನ ಹಿರಿಯರ ದೇವರು, ಅಂದರೆ ಅಬ್ರಹಾಮನ ದೇವರೂ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ಆಗಿರುವಾತನು, ನನ್ನ ಪಕ್ಷದಲ್ಲಿ ಇರದಿದ್ದರೆ ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಾಗಿ ಕಳುಹಿಸುತ್ತಿದ್ದಿ. ದೇವರು ನನ್ನ ಕಷ್ಟವನ್ನೂ ನಾನು ಪಟ್ಟ ಪ್ರಯಾಸವನ್ನೂ ನೋಡಿದ್ದರಿಂದಲೇ ನಿನ್ನೆಯ ರಾತ್ರಿ ನಿನ್ನನ್ನು ಗದರಿಸಿದನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಆದರೆ ನನ್ನ ಪೂರ್ವಿಕರ ದೇವರೂ ಅಬ್ರಹಾಮನ ದೇವರೂ ಇಸಾಕನು ಭಯಪಡುವ ದೇವರೂ ನನ್ನ ಸಂಗಡವಿದ್ದನು. ದೇವರು ನನ್ನ ಜೊತೆಯಲ್ಲಿ ಇಲ್ಲದಿದ್ದರೆ ನೀನು ನನ್ನನ್ನು ಬರಿಗೈಲಿ ಕಳುಹಿಸಿಬಿಡುತ್ತಿದ್ದೆ. ಆದರೆ ನನ್ನ ಕಷ್ಟವನ್ನೂ ನಾನು ಮಾಡಿದ ಕೆಲಸವನ್ನೂ ದೇವರು ನೋಡಿದನು. ನಿನ್ನೆಯ ರಾತ್ರಿ ನಾನು ತಪ್ಪಿತಸ್ಥನಲ್ಲವೆಂದು ದೇವರು ನಿನಗೆ ತೋರಿಸಿಕೊಟ್ಟಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ನನ್ನ ತಂದೆ ದೇವರೂ, ಅಬ್ರಹಾಮನ ದೇವರೂ, ಇಸಾಕನ ಭಯವೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದೆ. ನನ್ನ ಬಾಧೆಯನ್ನೂ, ನನ್ನ ಕಷ್ಟವನ್ನೂ ದೇವರು ಕಂಡು, ನಿನ್ನೆ ರಾತ್ರಿ ನಿನ್ನನ್ನು ಗದರಿಸಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:42
22 ತಿಳಿವುಗಳ ಹೋಲಿಕೆ  

ನಿನ್ನ ಕೃಪೆಯಲ್ಲಿ ಸಂತೋಷಿಸಿ ಉಲ್ಲಾಸದಿಂದಿರುವೆನು; ನಾನು ಕುಗ್ಗಿಹೋಗಿರುವುದನ್ನು ನೋಡಿ, ನನ್ನ ಬಾಧೆಗಳನ್ನು ನೀನು ಲಕ್ಷ್ಯಕ್ಕೆ ತೆಗೆದುಕೊಂಡಿಯಲ್ಲಾ.


ನಿಮಗೆ ಕೇಡುಮಾಡುವುದಕ್ಕೆ ನನ್ನಲ್ಲಿ ಸಾಮರ್ಥ್ಯ ಇದೆ. ಆದರೆ ಕಳೆದ ರಾತ್ರಿಯಲ್ಲಿ ನಿಮ್ಮ ತಂದೆಯ ದೇವರು, ‘ಯಾಕೋಬನಿಗೆ ಒಳ್ಳೆಯದನ್ನಾಗಲೀ, ಕೆಟ್ಟದನ್ನಾಗಲಿ ಹೇಳದ ಹಾಗೆ ಎಚ್ಚರವಾಗಿರು’ ಎಂದು ಹೇಳಿದನು.


ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಿನಗೂ ನನಗೂ ನ್ಯಾಯತೀರಿಸಲಿ” ಎಂದನು. ಅದೇ ಪ್ರಕಾರ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಿದನು.


ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ, ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ ‘ರೂಬೇನ್ ಎಂದು’ ಹೆಸರಿಟ್ಟಳು.”


ಸೇನಾಧೀಶ್ವರನಾದ ಯೆಹೋವನನ್ನೇ ಪ್ರತಿಷ್ಠೆಪಡಿಸಿರಿ; ಆತನಿಗೆ ಹೆದರಿಕೊಳ್ಳಿರಿ, ನಡುಗಿರಿ.


ಆದರೆ ರಾತ್ರಿಯಲ್ಲಿ ದೇವರು ಅರಾಮ್ಯನಾದ ಲಾಬಾನನ ಕನಸಿನಲ್ಲಿ ಬಂದು, “ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು” ಎಂದನು.


ಆದರೂ ಪ್ರಧಾನ ದೇವದೂತನಾದ ಮೀಕಾಯೇಲನು ಮೋಶೆಯ ದೇಹದ ವಿಷಯದಲ್ಲಿ ಸೈತಾನನೊಂದಿಗೆ ವಾಗ್ವಾದ ಮಾಡಿದಾಗ, ಅವನು ಸೈತಾನನಿಗೆ ವಿರೋಧವಾಗಿ ಒಂದೂ ನಿಂದೆಯ ಮಾತನಾಡದೆ, “ಕರ್ತನು ನಿನ್ನನ್ನು ಗದರಿಸಲಿ” ಎಂದನು.


“ನೀವು ಸ್ನೇಹಭಾವದಿಂದ ಸಹಾಯ ಮಾಡುವುದಕ್ಕಾಗಿ ನನ್ನ ಬಳಿಗೆ ಬಂದಿರುವುದಾದರೆ ನಿಮ್ಮೊಡನೆ ನನಗೆ ಐಕ್ಯಭಾವವಿರುವುದು. ನಿರಪರಾಧಿಯಾದ ನನ್ನನ್ನು ನನ್ನ ವಿರೋಧಿಗಳಿಗೆ ಒಪ್ಪಿಸುವ ಕುಯುಕ್ತಿಯಿಂದ ಬಂದಿರುವುದಾದರೆ ನಮ್ಮ ಪೂರ್ವಿಕರ ದೇವರು ನಿಮ್ಮನ್ನು ನೋಡಿ ದಂಡಿಸಲಿ” ಎಂದು ಹೇಳಿದನು.


ಆಗ ಯೆಹೋವನು, “ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಿಶ್ಚಯವಾಗಿ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡುವ ವಿಷಯದಲ್ಲಿ, ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.


ಆತನು ನನಗೆ, ‘ಲಾಬಾನನು ನಿನ್ನ ವಿಷಯದಲ್ಲಿ ನಡೆದುಕೊಂಡ ರೀತಿಯನ್ನು ನಾನು ನೋಡಿದ್ದೇನೆ, ಆದುದರಿಂದ ನೀನು ಕಣ್ಣೆತ್ತಿ ಕುರಿಗಳೊಂದಿಗೆ ಸಂಗಮಿಸುವ ಆಡುಗಳನ್ನು ನೋಡು. ರೇಖೆಯೂ, ಚುಕ್ಕೆಯೂ, ಮಚ್ಚೆಯೂ ಉಳ್ಳವುಗಳಾಗಿವೆ.


ಅವರಿಗೆ ಹೇಳಿದ್ದೇನಂದರೆ, “ನಿಮ್ಮ ತಂದೆಯ ಮುಖಭಾವವು ನನ್ನ ವಿಷಯದಲ್ಲಿ ಮೊದಲಿದ್ದಂತೆ ಇಲ್ಲವೆಂದು ತೋರಿಬಂತು. ಆದರೂ ನನ್ನ ತಂದೆಯ ದೇವರು ನನ್ನೊಂದಿಗೆ ಇದ್ದಾನೆ.


ಅದಕ್ಕೆ ಇಸಾಕನು ಬಹಳವಾಗಿ ಗಡಗಡನೆ ನಡುಗುತ್ತಾ, “ಯಾರೋ ಬೇರೊಬ್ಬನು ಬೇಟೆ ಮಾಂಸವನ್ನು ತಂದು ನನಗೆ ಕೊಟ್ಟುಹೋದನಲ್ಲಾ. ನೀನು ಬರುವುದಕ್ಕಿಂತ ಮೊದಲೇ ಅವನು ತಂದಿದ್ದರಲ್ಲಿ ನಾನು ಊಟಮಾಡಿ ಅವನನ್ನೇ ಆಶೀರ್ವದಿಸಿದೆನು; ಅವನಿಗೆ ಮಾಡಿದ ಆಶೀರ್ವಾದ ತಪ್ಪಲಾರದು” ಎಂದನು.


ಆಮೇಲೆ ಆಕೆಯು ತನ್ನ ಸಂಗಡ ಮಾತನಾಡಿದ ಯೆಹೋವನಿಗೆ, “ನೀನು ನನ್ನನ್ನು ನೋಡುವ ದೇವರು” ಎಂದು ಹೆಸರಿಟ್ಟಳು: ಏಕೆಂದರೆ, “ನನ್ನನ್ನು ನೋಡುವಾತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ” ಎಂದುಕೊಂಡಳು.


ಯೆಹೋವನ ದೂತನು ಅವಳಿಗೆ, “ನೀನು ಗರ್ಭಿಣಿಯಾಗಿದಿಯಾ; ನಿನಗೆ ಮಗನು ಹುಟ್ಟುವನು; ಯೆಹೋವನು ನಿನ್ನ ಕಷ್ಟದ ಕೂಗಿಗೆ ಕಿವಿಗೊಟ್ಟಿದ್ದರಿಂದ ಆ ಮಗನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು.


ಮನುಷ್ಯರು ಕಟ್ಟುತ್ತಿದ್ದ ಆ ಪಟ್ಟಣವನ್ನೂ, ಗೋಪುರವನ್ನೂ ನೋಡುವುದಕ್ಕೆ ಯೆಹೋವನು ಇಳಿದು ಬಂದನು.


ಇದಲ್ಲದೆ ಯಾಕೋಬನು ದೇವರನ್ನು ಪ್ರಾರ್ಥಿಸಿ, “ಯೆಹೋವನೇ, ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ‘ನಿನ್ನ ಸ್ವದೇಶಕ್ಕೂ, ಬಂಧುಗಳ ಬಳಿಗೂ ತಿರುಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೆಯದನ್ನು ಮಾಡುವೆನೆಂದು’ ನನಗೆ ವಾಗ್ದಾನ ಮಾಡಿದ ಯೆಹೋವನೇ,


ನಾವು ಇಲ್ಲಿಂದ ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಲಾಲಿಸಿ ನಾನು ಹೋದ ಮಾರ್ಗದಲ್ಲೆಲ್ಲಾ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟಿಸುತ್ತೇನೆ” ಎಂದು ಹೇಳಿದನು.


ಇಸ್ರಾಯೇಲನು ತನಗಿದ್ದ ಸರ್ವಸ್ವವನ್ನು ತೆಗೆದುಕೊಂಡು, ಪ್ರಯಾಣ ಮಾಡಿ ಬೇರ್ಷೆಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಯಜ್ಞಗಳನ್ನು ಅರ್ಪಿಸಿದನು.


ನನ್ನ ಪೂರ್ವಿಕರ ದೇವರೇ, ನಿನ್ನನ್ನು ಸ್ತುತಿಸುತ್ತೇನೆ, ಕೊಂಡಾಡುತ್ತೇನೆ, ನೀನು ನನಗೆ ಜ್ಞಾನತ್ರಾಣಗಳನ್ನು ದಯಪಾಲಿಸಿ ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದ್ದಿಯಲ್ಲಾ; ಹೌದು, ರಾಜನ ರಹಸ್ಯವನ್ನು ನಮಗೆ ಪ್ರಕಟಪಡಿಸಿರುವೆ” ಎಂದನು.


ಬಿಡುಗಡೆ ಮಾಡುವಾಗ ಬರಿಗೈಯಲ್ಲಿ ಕಳುಹಿಸಿಬಿಡಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು