ಆದಿಕಾಂಡ 31:46 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಯಾಕೋಬನು ತನ್ನ ಕಡೆಯವರಿಗೆ, “ಕಲ್ಲುಗಳನ್ನು ಕೂಡಿಸಿರಿ” ಎಂದು ಹೇಳಲು ಅವರು ಕಲ್ಲುಗಳನ್ನು ಕೂಡಿಸಿ ಗುಡ್ಡೆ ಮಾಡಿದರು. ಅವರೆಲ್ಲರೂ ಆ ಗುಡ್ಡೆಯ ಬಳಿಯಲ್ಲಿ ಭೋಜನವನ್ನು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಅದಲ್ಲದೆ, ತನ್ನ ಕಡೆಯವರಿಗೆ, “ಕಲ್ಲುಗಳನ್ನು ಒಟ್ಟುಗೂಡಿಸಿರಿ,” ಎನ್ನಲು, ಅವರು ಕಲ್ಲುಗಳನ್ನು ತಂದು ಒಂದು ಕುಪ್ಪೆ ಮಾಡಿದರು; ಅದರ ಬಳಿಯಲ್ಲೆ ಕುಳಿತು ಸಹಭೋಜನ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಯಾಕೋಬನು ತನ್ನ ಕಡೆಯವರಿಗೆ - ಕಲ್ಲುಗಳನ್ನು ಕೂಡಿಸಿರಿ ಎಂದು ಹೇಳಲು ಅವರು ಕಲ್ಲುಗಳನ್ನು ಕೂಡಿಸಿ ಕುಪ್ಪೆಯನ್ನು ಮಾಡಿದಾಗ ಅವರೆಲ್ಲರೂ ಆ ಕುಪ್ಪೆಯ ಬಳಿಯಲ್ಲಿ ಸಹ ಭೋಜನವನ್ನು ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ಅವನು ತನ್ನ ಜನರಿಗೆ ಮತ್ತಷ್ಟು ಕಲ್ಲುಗಳನ್ನು ತೆಗೆದುಕೊಂಡು ಬಂದು ಕಲ್ಲಿನ ಕುಪ್ಪೆ ಮಾಡುವಂತೆ ಹೇಳಿದನು. ಬಳಿಕ ಅವರು ಆ ಕುಪ್ಪೆಯ ಬಳಿಯಲ್ಲಿ ಊಟಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ಯಾಕೋಬನು ತನ್ನ ಕಡೆಯವರಿಗೆ, “ಕಲ್ಲುಗಳನ್ನು ಕೂಡಿಸಿರಿ,” ಎಂದನು. ಅವರು ಕಲ್ಲುಗಳನ್ನು ತೆಗೆದುಕೊಂಡು ಒಂದು ಕುಪ್ಪೆ ಮಾಡಿದರು. ಅವರು ಆ ಕುಪ್ಪೆಯ ಬಳಿಯಲ್ಲಿ ಕುಳಿತುಕೊಂಡು ಊಟಮಾಡಿದರು. ಅಧ್ಯಾಯವನ್ನು ನೋಡಿ |