ಆದಿಕಾಂಡ 31:50 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಮತ್ತು ಲಾಬಾನನು, “ನೀನು ನನ್ನ ಇಬ್ಬರು ಹೆಣ್ಣುಮಕ್ಕಳನ್ನು ನೋಯಿಸಿದರೆ ಅಥವಾ ಬೇರೆ ಸ್ತ್ರೀಯರನ್ನು ಮದುವೆ ಮಾಡಿಕೊಂಡರೆ ವಿಚಾರಿಸುವವರು ಮನುಷ್ಯರೊಳಗೆ ಯಾರೂ ಇಲ್ಲದಿದ್ದರೂ ದೇವರೇ ನಮ್ಮ ಒಡಂಬಡಿಕೆಗೆ ಸಾಕ್ಷಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಲಾಬಾನನು ಮುಂದುವರೆದು, “ನೀನು ನನ್ನ ಹೆಣ್ಣು ಮಕ್ಕಳನ್ನು ನೋಯಿಸಿದರೆ ಅಥವಾ ಬೇರೆ ಹೆಣ್ಣುಗಳನ್ನು ಮದುವೆ ಮಾಡಿಕೊಂಡರೆ ವಿಚಾರಿಸುವವರು ನಮ್ಮಲ್ಲಿ ಯಾರು ಇಲ್ಲದಿದ್ದರೂ ದೇವರೇ ನಮ್ಮ ಒಪ್ಪಂದಕ್ಕೆ ಸಾಕ್ಷಿಯೆಂಬುದನ್ನು ಮರೆಯಬೇಡ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)50 ಮತ್ತು ಲಾಬಾನನು - ನೀನು ನನ್ನ ಹೆಣ್ಣುಮಕ್ಕಳನ್ನು ನೋಯಿಸಿದರೆ ಅಥವಾ ಬೇರೆ ಸ್ತ್ರೀಯರನ್ನು ಮದುವೆ ಮಾಡಿಕೊಂಡರೆ ವಿಚಾರಿಸುವವರು ಮನುಷ್ಯರೊಳಗೆ ಯಾರೂ ಇಲ್ಲದಿದ್ದರೂ ದೇವರೇ ನಮ್ಮ ಒಡಂಬಡಿಕೆಗೆ ಸಾಕ್ಷಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ಆಮೇಲೆ ಲಾಬಾನನು “ನೀನು ನನ್ನ ಹೆಣ್ಣುಮಕ್ಕಳನ್ನು ನೋಯಿಸಿದರೆ, ದೇವರು ನಿನ್ನನ್ನು ದಂಡಿಸುವನು ಎಂಬುದನ್ನು ನೆನಪು ಮಾಡಿಕೊ. ನೀನು ಬೇರೆ ಸ್ತ್ರೀಯರನ್ನು ಮದುವೆ ಮಾಡಿಕೊಂಡರೆ, ದೇವರು ನಿನ್ನನ್ನು ನೋಡುತ್ತಿದ್ದಾನೆ ಎಂಬುದನ್ನು ನೆನಪು ಮಾಡಿಕೊ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ನೀನು ನನ್ನ ಪುತ್ರಿಯರನ್ನು ಉಪದ್ರವಪಡಿಸಿದರೆ, ಇಲ್ಲವೆ ನನ್ನ ಮಕ್ಕಳ ಹೊರತಾಗಿ ಬೇರೆ ಹೆಂಡತಿಯರನ್ನು ನೀನು ಪಡೆದರೆ, ಯಾವ ಮನುಷ್ಯನೂ ವಿಚಾರಿಸಲು ಇಲ್ಲದಿದ್ದರೂ ನನಗೂ ನಿನಗೂ ನಡುವೆ ದೇವರೇ ಈ ಒಪ್ಪಂದಕ್ಕೆ ಸಾಕ್ಷಿ,” ಎಂದನು. ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.