ಆದಿಕಾಂಡ 31:53 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಿನಗೂ ನನಗೂ ನ್ಯಾಯತೀರಿಸಲಿ” ಎಂದನು. ಅದೇ ಪ್ರಕಾರ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)53 ಅಬ್ರಹಾಮನ ದೇವರು. ನಾಹೋರನ ದೇವರು, ಅವರ ತಂದೆಗಳ ದೇವರು ನಿನಗೂ ನನಗೂ ನ್ಯಾಯ ತೀರಿಸಲಿ,” ಎಂದನು. ಅದೇ ಮೇರೆಗೆ ಯಕೋಬನು, ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)53 ಅಬ್ರಹಾಮ ನಾಹೋರರ ದೇವರು ಅಂದರೆ ಅವರ ತಂದೆಯ ದೇವರು ನಿನಗೂ ನನಗೂ ನ್ಯಾಯತೀರಿಸಲಿ ಅಂದನು. ಅದೇ ಮೇರೆಗೆ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್53 ನಾವು ಈ ಒಪ್ಪಂದವನ್ನು ಮುರಿದುಹಾಕಿದರೆ, ನಮ್ಮಲ್ಲಿ ಅಪರಾಧಿಯಾದವನಿಗೆ ಅಬ್ರಹಾಮನ ದೇವರು, ನಾಹೋರನ ದೇವರು ಮತ್ತು ಅವರ ಪೂರ್ವಿಕರ ದೇವರು ನ್ಯಾಯತೀರಿಸಲಿ” ಎಂದು ಹೇಳಿದನು. ಅದೇ ರೀತಿಯಲ್ಲಿ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವೆಮಾಡುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ53 ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಮ್ಮ ಮಧ್ಯದಲ್ಲಿ ನ್ಯಾಯತೀರಿಸಲಿ,” ಎಂದನು. ಆಗ ಯಾಕೋಬನು ತನ್ನ ತಂದೆ ಇಸಾಕನ ಭಯದ ಮೇಲೆ ಪ್ರಮಾಣ ಮಾಡಿದನು. ಅಧ್ಯಾಯವನ್ನು ನೋಡಿ |