ಆದಿಕಾಂಡ 31:54 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201954 ಯಾಕೋಬನು ಆ ಬೆಟ್ಟದ ಮೇಲೆ ಯಜ್ಞವನ್ನು ಮಾಡಿ ತನ್ನ ಬಂಧುಗಳನ್ನು ತನ್ನೊಡನೆ ಊಟಮಾಡಲು ಕರೆಯಿಸಿದನು. ಅವರು ಊಟ ಮಾಡಿ ಬೆಟ್ಟದಲ್ಲಿಯೇ ರಾತ್ರಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)54 ಅಲ್ಲದೆ, ಯಕೋಬನು ಆ ಬೆಟ್ಟದ ಮೇಲೆ ಬಲಿಯನ್ನರ್ಪಿಸಿ ಬಂಧುಗಳನ್ನು ತನ್ನೊಡನೆ ಸಹಭೋಜನಕ್ಕೆ ಕರೆಸಿದನು. ಅವರು ಸಹಭೋಜನ ಮಾಡಿ ಆ ರಾತ್ರಿಯೆಲ್ಲಾ ಬೆಟ್ಟದ ಮೇಲಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)54 ಇದಲ್ಲದೆ ಯಾಕೋಬನು ಆ ಬೆಟ್ಟದ ಮೇಲೆ ಯಜ್ಞವನ್ನು ಮಾಡಿ ತನ್ನ ಬಂಧುಗಳನ್ನು ತನ್ನೊಡನೆ ಸಹಭೋಜನಕ್ಕೆ ಕರಸಿದನು. ಅವರು ಸಹಭೋಜನ ಮಾಡಿ ಆ ರಾತ್ರಿಯೆಲ್ಲಾ ಬೆಟ್ಟದ ಮೇಲೆ ಇದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್54 ಆಮೇಲೆ ಯಾಕೋಬನು ಒಂದು ಪಶುವನ್ನು ಕೊಂದು ಅದನ್ನು ಬೆಟ್ಟದ ಮೇಲೆ ಯಜ್ಞವಾಗಿ ಅರ್ಪಿಸಿದನು; ತನ್ನ ಜನರನ್ನು ಊಟಕ್ಕೆ ಆಹ್ವಾನಿಸಿದನು. ಅವರು ಊಟ ಮಾಡಿದ ಮೇಲೆ, ಆ ರಾತ್ರಿ ಬೆಟ್ಟದ ಮೇಲೆ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ54 ಯಾಕೋಬನು ಆ ಬೆಟ್ಟದಲ್ಲಿ ಬಲಿಯನ್ನು ಅರ್ಪಿಸಿ, ಭೋಜನ ಮಾಡುವುದಕ್ಕೆ ತನ್ನ ಬಂಧುಗಳನ್ನು ಕರೆಕಳುಹಿಸಿದನು. ಅವರು ಭೋಜನ ಮಾಡಿ ಬೆಟ್ಟದಲ್ಲಿಯೇ ರಾತ್ರಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿ |