Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ನಿಮ್ಮ ತಂದೆಯು ನನ್ನನ್ನು ವಂಚಿಸಿ ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದನು, ನನಗೆ ಕೇಡುಮಾಡುವುದಕ್ಕೆ ದೇವರು ಅವನಿಗೆ ಅವಕಾಶಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಿಮ್ಮ ತಂದೆಯಾದರೋ ನನಗೆ ಮೋಸಮಾಡಿ ಹತ್ತು ಸಾರಿ ನನ್ನ ಸಂಬಳವನ್ನು ಬದಲಾಯಿಸಿದ್ದಾರೆ. ಅವರಿಂದ ನನಗೆ ಕೇಡಾಗದಂತೆ ದೇವರೇ ನೋಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನು ಚಪಲಚಿತ್ತನಾಗಿ ಹತ್ತುಸಾರಿ ನನ್ನ ಸಂಬಳವನ್ನು ಬದಲಾಯಿಸಿ ವಂಚಿಸಿದರೂ ನನಗೆ ಕೇಡುಮಾಡುವದಕ್ಕೆ ದೇವರು ಅವನಿಗೆ ಅವಕಾಶಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ನಿಮ್ಮ ತಂದೆ ನನಗೆ ಮೋಸ ಮಾಡಿದನು. ನಿಮ್ಮ ತಂದೆ ನನ್ನ ಸಂಬಳವನ್ನು ಹತ್ತು ಸಲ ಬದಲಾಯಿಸಿದನು. ಆದರೆ ಆ ಸಮಯದಲ್ಲೆಲ್ಲ ದೇವರು ನನ್ನನ್ನು ಲಾಬಾನನ ಎಲ್ಲಾ ಮೋಸಗಳಿಂದ ಕಾಪಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ನಿಮ್ಮ ತಂದೆಯು ನನಗೆ ವಂಚನೆಮಾಡಿ, ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದನು. ಆದಾಗ್ಯೂ ದೇವರು ಅವನಿಂದ ನನಗೆ ಕೇಡು ಮಾಡಗೊಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:7
19 ತಿಳಿವುಗಳ ಹೋಲಿಕೆ  

ಇಪ್ಪತ್ತು ವರ್ಷ ನಿನ್ನ ಮನೆಯಲ್ಲಿದ್ದೆನು. ನಿನ್ನ ಇಬ್ಬರು ಹೆಣ್ಣು ಮಕ್ಕಳಿಗೋಸ್ಕರ ಹದಿನಾಲ್ಕು ವರ್ಷವೂ ನಿನ್ನ ಆಡು ಕುರಿಗಳಿಗೋಸ್ಕರ ಆರು ವರ್ಷವೂ ಸೇವೆಮಾಡಿದೆನು. ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದೆ.


ನಿಮಗೆ ಕೇಡುಮಾಡುವುದಕ್ಕೆ ನನ್ನಲ್ಲಿ ಸಾಮರ್ಥ್ಯ ಇದೆ. ಆದರೆ ಕಳೆದ ರಾತ್ರಿಯಲ್ಲಿ ನಿಮ್ಮ ತಂದೆಯ ದೇವರು, ‘ಯಾಕೋಬನಿಗೆ ಒಳ್ಳೆಯದನ್ನಾಗಲೀ, ಕೆಟ್ಟದನ್ನಾಗಲಿ ಹೇಳದ ಹಾಗೆ ಎಚ್ಚರವಾಗಿರು’ ಎಂದು ಹೇಳಿದನು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ಜನಾಂಗಗಳ ವಿವಿಧ ಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವು ನಿಮ್ಮೊಂದಿಗೆ ಬರುವೆವು, ಏಕೆಂದರೆ ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ’” ಎಂದು ಹೇಳುವರು.


ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು.


ಅವರ ನೆರೆಯೂರುಗಳಲ್ಲಿ ವಾಸಿಸುತ್ತಿದ್ದ ಯೆಹೂದ್ಯರು ಬಂದು ಬಂದು ನಮಗೆ, ನೀವು ಯಾವ ಕಡೆಗೆ ತಿರುಗಿಕೊಂಡರೂ ಎಲ್ಲಾ ಕಡೆಗಳಿಂದಲೂ ಅವರು ನಮ್ಮ ವಿರುದ್ಧವಾಗಿ ಯುದ್ಧಕ್ಕೆ ಬರುತ್ತಾರೆ ಎಂದು ಪದೇ ಪದೇ ಬಂದು ತಿಳಿಸುತ್ತಿದ್ದರು.


ಈ ಮನುಷ್ಯರೆಲ್ಲರು ಐಗುಪ್ತ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ, ನಾನು ನಡೆಸಿರುವ ಮಹತ್ಕಾರ್ಯಗಳನ್ನೂ, ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ, ಪದೇ ಪದೇ ನನ್ನನ್ನು ಪರೀಕ್ಷಿಸಿದ್ದರಿಂದ


ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ” ಎಂದು ಯೆಹೋವನು ಅನ್ನುತ್ತಾನೆ.


ಆ ದಿನದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಪುರುಷನನ್ನು ಹಿಡಿದು, “ನಾವು ಸ್ವಂತವಾಗಿ ದುಡಿದ ಅನ್ನವನ್ನು ಉಣ್ಣುವೆವು, ನಾವೇ ಸಂಪಾದಿಸಿದ ಬಟ್ಟೆಯನ್ನು ಉಟ್ಟುಕೊಳ್ಳುವೆವು, ನಿನ್ನ ಹೆಸರು ಮಾತ್ರ ನಮಗಿದ್ದರೆ ಸಾಕು. ಯಜಮಾನನಾಗಿ ನಮ್ಮ ಮಾನ ಕಾಪಾಡಿದರೆ ಸಾಕು” ಎಂದು ಕೇಳಿಕೊಳ್ಳುವರು.


ಈವರೆಗೆ ಹತ್ತಾರು ಸಾರಿ ನನ್ನನ್ನು ಅವಮಾನಪಡಿಸಿ ನನಗೆ ಕೇಡುಮಾಡುತ್ತಿರುವುದಕ್ಕೆ ನಿಮಗೆ ನಾಚಿಕೆಯಿಲ್ಲವಲ್ಲಾ.


ನೀನು ಅವನಿಗೂ, ಅವನ ಮನೆಗೂ, ಅವನ ಎಲ್ಲಾ ಸ್ವತ್ತಿಗೂ ಸುತ್ತು ಮುತ್ತಲು ನಿನ್ನ ಕೃಪೆಯ ಬೇಲಿಯನ್ನು ಹಾಕಿದ್ದೀಯಲ್ಲಾ. ಅವನು ಕೈಹಾಕಿದ ಕೆಲಸವನ್ನು ನೀನು ಸಫಲಪಡಿಸುತ್ತಿರುವುದರಿಂದ ಅವನ ಸಂಪತ್ತು ದೇಶದಲ್ಲಿ ವೃದ್ಧಿಯಾಗುತ್ತಾ ಬಂದಿದೆ.


ನಾನು ನಿಮ್ಮ ಜೀವನಾಧಾರವನ್ನು ತೆಗೆದುಬಿಟ್ಟಾಗ ಹತ್ತು ಜನರು ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿಸುಟ್ಟು, ಅದನ್ನು ತೂಕದ ಪ್ರಕಾರ ಹಂಚಿಕೊಡುವರು; ನೀವು ಅದನ್ನು ಊಟಮಾಡಿದಾಗ ತೃಪ್ತಿಹೊಂದುವುದಿಲ್ಲ.


ಅದಕ್ಕೆ ದೇವರು, “ನೀನು, ಇದನ್ನು ಯಥಾರ್ಥ ಮನಸ್ಸಿನಿಂದ ಮಾಡಿದೆ ಎಂಬುದನ್ನು ನಾನು ಬಲ್ಲೆ; ಆದಕಾರಣ ನೀನು ನನಗೆ ವಿರುದ್ಧವಾಗಿ ಪಾಪಮಾಡದಂತೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ.


ನಾನು ಮುಂದೆ ಹೋಗದ ಹಾಗೆ ಆತನು ನನ್ನ ದಾರಿಗೆ ಅಡ್ಡಗೋಡೆ ಹಾಕಿ, ನನ್ನ ಹಾದಿಗಳನ್ನು ಕತ್ತಲು ಕವಿಯುವಂತೆ ಮಾಡಿದ್ದಾನೆ.


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”


ಬೆಳಗ್ಗೆ ಆಕೆ ಲೇಯಳೆಂದು ಯಾಕೋಬನಿಗೆ ತಿಳಿದು ಬರಲು ಅವನು ಲಾಬಾನನಿಗೆ, “ಇದೇನು ನೀನು ನನಗೆ ಮಾಡಿದ್ದು? ರಾಹೇಲಳಿಗೋಸ್ಕರ ನಿನಗೆ ಸೇವೆಮಾಡಿದೆನಲ್ಲಾ; ಯಾಕೆ ನನಗೆ ಮೋಸ ಮಾಡಿದೆ” ಎಂದು ಕೇಳಿದ್ದಕ್ಕೆ,


ನಾನು ನಿನಗೆ ಏನು ಕೊಡಬೇಕು ಹೇಳು ಕೊಡುತ್ತೇನೆ” ಎಂದು ಹೇಳಿದನು.


ಆದರೆ ರಾತ್ರಿಯಲ್ಲಿ ದೇವರು ಅರಾಮ್ಯನಾದ ಲಾಬಾನನ ಕನಸಿನಲ್ಲಿ ಬಂದು, “ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು” ಎಂದನು.


ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಸರ್ವವಿಷಯಗಳಲ್ಲಿ ಅವರನ್ನು ವಿಚಾರಮಾಡಲು ಅವನ ಪೂರ್ಣ ರಾಜ್ಯದಲ್ಲಿನ ಎಲ್ಲಾ ಜೋಯಿಸರಿಗಿಂತಲೂ, ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು