Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಿಮ್ಮ ತಂದೆ ನನಗೆ, ‘ಚುಕ್ಕೆಯುಳ್ಳದ್ದು ನಿನ್ನ ಸಂಬಳವಾಗಿರಲಿ’ ಎಂದು ಅವನು ಹೇಳಿದಾಗ ಹಿಂಡಿನ ಆಡುಕುರಿಗಳೆಲ್ಲವೂ ಚುಕ್ಕೆಯುಳ್ಳದ್ದನ್ನೇ ಈಯಿತು. ಅವನು ‘ರೇಖೆಯುಳ್ಳದ್ದು ನಿನ್ನ ಸಂಬಳವಾಗಿರಲಿ’ ಎಂದು ಹೇಳಿದಾಗ ಆಡುಕುರಿಗಳೆಲ್ಲವೂ ರೇಖೆಯುಳ್ಳ ಮರಿಗಳನ್ನೇ ಈದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ‘ಚುಕ್ಕೆಯುಳ್ಳವುಗಳನ್ನು ಮಾತ್ರ ನಿನ್ನ ಸಂಬಳಕ್ಕೆ ತೆಗೆದುಕೊ’, ಎಂದು ನಿಮ್ಮ ತಂದೆ ಹೇಳುವಾಗ ಹಿಂಡಿನ ಆಡುಕುರಿಗಳೆಲ್ಲ ಚುಕ್ಕೆಯುಳ್ಳ ಮರಿಗಳನ್ನೇ ಈದುವು. ‘ರೇಖೆಗಳಿರುವುವುಗಳನ್ನು ಮಾತ್ರ ಸಂಬಳಕ್ಕೆ ತೆಗೆದುಕೊ’, ಎಂದು ಹೇಳಿದಾಗ ಆಡುಕುರಿಗಳೆಲ್ಲವು ರೇಖೆಯುಳ್ಳ ಮರಿಗಳನ್ನೇ ಈದುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಚುಕ್ಕೆಯುಳ್ಳವುಗಳನ್ನು ನಿನ್ನ ಸಂಬಳಕ್ಕೆ ತಕ್ಕೋ ಎಂದು ಅವನು ಹೇಳಿದಾಗ ಹಿಂಡಿನ ಆಡುಕುರಿಗಳೆಲ್ಲವೂ ಚುಕ್ಕೆಯುಳ್ಳ ಮರಿಗಳನ್ನೇ ಈದವು. ರೇಖೆಗಳಿರುವವುಗಳನ್ನು ಸಂಬಳಕ್ಕೆ ತಕ್ಕೋ ಎಂದು ಹೇಳಿದಾಗ ಆಡುಕುರಿಗಳೆಲ್ಲವೂ ರೇಖೆಯುಳ್ಳ ಮರಿಗಳನ್ನು ಈದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಒಂದು ಸಲ ಲಾಬಾನನು, ‘ಚುಕ್ಕೆಯಿರುವ ಆಡುಕುರಿಗಳನ್ನೆಲ್ಲ ನೀನು ಇಟ್ಟುಕೊಳ್ಳಬಹುದು. ಇದೇ ನಿನಗೆ ಸಂಬಳ’ ಎಂದು ಹೇಳಿದನು. ಅವನು ಹೀಗೆ ಹೇಳಿದ ಮೇಲೆ ಎಲ್ಲಾ ಆಡುಕುರಿಗಳು ಚುಕ್ಕೆಯಿರುವ ಮರಿಗಳನ್ನು ಈಯ್ದವು. ಆದ್ದರಿಂದ ಅವೆಲ್ಲ ನನ್ನದಾದವು. ಆಗ ಲಾಬಾನನು, ‘ನಾನು ಚುಕ್ಕೆಯಿರುವ ಆಡುಕುರಿಗಳನ್ನು ತೆಗೆದುಕೊಳ್ಳುವೆ. ನೀನು ಮಚ್ಚೆಯಿರುವ ಆಡುಕುರಿಗಳನ್ನು ತೆಗೆದುಕೊಳ್ಳಬಹುದು. ಅದೇ ನಿನಗೆ ಸಂಬಳ’ ಎಂದು ಹೇಳಿದನು. ಅವನು ಹೀಗೆ ಹೇಳಿದ ಮೇಲೆ, ಎಲ್ಲಾ ಆಡುಕುರಿಗಳು ಮಚ್ಚೆಯಿರುವ ಮರಿಗಳನ್ನು ಈಯ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಿಮ್ಮ ತಂದೆ ನನಗೆ, ‘ಚುಕ್ಕೆಯುಳ್ಳದ್ದು ನಿನಗೆ ಸಂಬಳವಾಗಿರಲಿ,’ ಅಂದಾಗ, ಮಂದೆಯೆಲ್ಲಾ ಚುಕ್ಕೆಯುಳ್ಳದ್ದನ್ನೇ ಈಯಿತು. ಅವನು, ‘ರೇಖೆಯುಳ್ಳದ್ದು ನಿನಗೆ ಸಂಬಳವಾಗಿರಲಿ,’ ಎಂದಾಗ, ಮಂದೆಯೆಲ್ಲಾ ರೇಖೆಯುಳ್ಳದ್ದನ್ನೇ ಈಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:8
2 ತಿಳಿವುಗಳ ಹೋಲಿಕೆ  

ಅದೇನೆಂದರೆ, “ಈ ಹೊತ್ತು ನಾನು ನಿನ್ನ ಹಿಂಡಿನೊಳಗೆ ಹೋಗಿ, ಕುರಿಗಳಲ್ಲಿ ಚುಕ್ಕೆ ಮತ್ತು ಮಚ್ಚೆಗಳಿರುವವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿರುವವುಗಳನ್ನೂ, ಆಡುಗಳಲ್ಲಿ ಚುಕ್ಕೆ ಮತ್ತು ಮಚ್ಚೆಗಳಿರುವುಗಳನ್ನೂ ವಿಂಗಡಿಸುವೆನು. ಅವೇ ನನ್ನ ಸಂಬಳವಾಗಿರಲಿ.


ಆಡುಕುರಿಗಳು ಆ ಕೋಲುಗಳನ್ನು ನೋಡುತ್ತಾ ಸಂಗಮಮಾದಿದ್ದರಿಂದ ರೇಖೆ, ಚುಕ್ಕೆ, ಮಚ್ಚೆಗಳುಳ್ಳ ಮರಿಗಳನ್ನು ಈಯುತ್ತಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು