Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೀಗೆ ದೇವರು ನಿಮ್ಮ ತಂದೆಯ ಆಡುಕುರಿಗಳನ್ನು, ಪಶುಪ್ರಾಣಿಗಳನ್ನು ಅವನಿಂದ ತೆಗೆದು ನನಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹೀಗೆ ದೇವರು ನಿಮ್ಮ ತಂದೆಯ ಆಡುಕುರಿಗಳನ್ನು ತೆಗೆದು ನನಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹೀಗೆ ದೇವರು ನಿಮ್ಮ ತಂದೆಯ ಆಡುಕುರಿಗಳನ್ನು ಅವನಿಂದ ತೆಗೆದು ನನಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಹೀಗೆ ದೇವರು ನಿಮ್ಮ ತಂದೆಯಿಂದ ಆಡುಕುರಿಗಳನ್ನು ತೆಗೆದುಕೊಂಡು ಅವುಗಳನ್ನು ನನಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಹೀಗೆ ದೇವರು ನಿಮ್ಮ ತಂದೆಯ ಪಶುಗಳನ್ನು ತೆಗೆದು, ನನಗೆ ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:9
9 ತಿಳಿವುಗಳ ಹೋಲಿಕೆ  

“ನಮ್ಮ ತಂದೆಯ ಆಸ್ತಿಯೆಲ್ಲಾ ಯಾಕೋಬನ ಪಾಲಾಯಿತು, ನಮ್ಮ ತಂದೆಯ ಆಸ್ತಿಯಿಂದಲೇ ಅವನಿಗೆ ಇಷ್ಟೊಂದು ಐಶ್ವರ್ಯವುಂಟಾಯಿತು” ಎಂಬುದಾಗಿ ಲಾಬಾನನ ಮಕ್ಕಳು ಹೇಳಿಕೊಳ್ಳುವ ಮಾತುಗಳು ಯಾಕೋಬನ ಕಿವಿಗೆ ಬಿದ್ದವು.


ಆದ್ದರಿಂದ ದೇವರು ನಮ್ಮ ತಂದೆಯಿಂದ ತೆಗೆದುಕೊಂಡ ಆಸ್ತಿಯನ್ನೆಲ್ಲಾ ನಮಗೂ, ನಮ್ಮ ಮಕ್ಕಳಿಗೂ ಕೊಟ್ಟನಲ್ಲಾ, ದೇವರು ನಿನಗೆ ಹೇಳಿದಂತೆಯೇ ಮಾಡು” ಎಂದು ಉತ್ತರ ಕೊಟ್ಟರು.


ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ? ನಾನು ಉದಾರಿಯಾಗಿರುವುದಕ್ಕೆ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವಿ?’ ಎಂದು ಹೇಳಿದನು.


ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯ, ಪಾಪಿಯ ಸೊತ್ತು ಸಜ್ಜನರಿಗೆ ಗಂಟು.


ಕಾಡಿನಲ್ಲಿರುವ ಸರ್ವಮೃಗಗಳೂ, ಗುಡ್ಡಗಳಲ್ಲಿರುವ ಸಾವಿರಾರು ಪಶುಗಳೂ ನನ್ನವೇ.


“ಕುರಿಗಳು ಗರ್ಭಧರಿಸುವ ಕಾಲದಲ್ಲಿ ನಾನು ಕನಸಿನಲ್ಲಿ ಕಣ್ಣೆತ್ತಿ ನೋಡಿದಾಗ ಕುರಿಗಳೊಂದಿಗೆ ಸಂಗಮಿಸಿದ ಆಡುಗಳೆಲ್ಲವೂ ರೇಖೆ, ಚುಕ್ಕೆ ಮಚ್ಚೆಗಳುಳ್ಳವುಗಳಾಗಿ ಕಾಣಿಸಿದವು.


ಆಡುಕುರಿಗಳು ಆ ಕೋಲುಗಳನ್ನು ನೋಡುತ್ತಾ ಸಂಗಮಮಾದಿದ್ದರಿಂದ ರೇಖೆ, ಚುಕ್ಕೆ, ಮಚ್ಚೆಗಳುಳ್ಳ ಮರಿಗಳನ್ನು ಈಯುತ್ತಿದ್ದವು.


ಇನ್ನೂರು ಆಡುಕುರಿ, ಇಪ್ಪತ್ತು ಹೋತ, ಇಪ್ಪತ್ತು ಟಗರು, ಮರಿಯೊಡನೆ ಹಾಲು ಕರೆಯುವ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು