Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ನಂಬಿಕೆಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಯೋಗ್ಯನು. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನ್ನ ಬಳಿಯಲ್ಲಿ ಒಂದು ಕೋಲು ಮಾತ್ರವೇ ಇತ್ತು. ಈಗ ಎರಡು ಗುಂಪುಗಳಿಗೆ ಒಡೆಯನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದಾಸನಾದ ನನ್ನ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ನಿಮ್ಮ ವಾಗ್ದಾನವನ್ನು ನೆರವೇರಿಸಿದ್ದೀರಿ. ನಾನು ಅದಕ್ಕೆ ಕೇವಲ ಅಪಾತ್ರನು. ನಾನು ಮೊದಲು ಈ ಜೋರ್ಡನ್ ನದಿಯನ್ನು ದಾಟಿದಾಗ ನನಗಿದ್ದುದು ಒಂದು ಊರುಗೋಲು ಮಾತ್ರ. ಈಗ ಎರಡು ಪರಿವಾರಗಳಿಗೆ ಒಡೆಯನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಪಾತ್ರನಾಗಿದ್ದೇನೆ. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಪಾಳೆಯಗಳಿಗೆ ಒಡೆಯನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀನು ನನಗೆ ತುಂಬ ಕರುಣೆ ತೋರಿದೆ. ನೀನು ನನಗೆ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡಿದೆ. ಮೊದಲನೆ ಸಲ ನಾನು ಜೋರ್ಡನ್ ನದಿಯನ್ನು ದಾಟಿ ಪ್ರಯಾಣ ಮಾಡಿದಾಗ, ಕೇವಲ ನನ್ನ ಊರುಗೋಲೇ ಹೊರತು ಬೇರೇನೂ ನನಗಿರಲಿಲ್ಲ. ಆದರೆ ಈಗ ಎರಡು ಗುಂಪುಗಳಿಗೆ ಬೇಕಾದ ವಸ್ತುಗಳನ್ನು ನಾನು ಪಡೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀವು ನಿಮ್ಮ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ, ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಏಕೆಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ, ನನ್ನ ಕೈಯಲ್ಲಿ ಕೋಲು ಮಾತ್ರವೇ ಇತ್ತು, ಈಗ ನನಗೆ ಎರಡು ಗುಂಪುಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:10
33 ತಿಳಿವುಗಳ ಹೋಲಿಕೆ  

ನೀನೇ ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. ನಿನ್ನ ಬಲಗೈ ನನಗೆ ಆಧಾರ; ನಿನ್ನ ಕೃಪಾಕಟಾಕ್ಷವು ನನಗೆ ದೊಡ್ಡಸ್ತಿಕೆಯನ್ನು ಉಂಟುಮಾಡಿದೆ.


“ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಪ್ರೀತಿಯನ್ನೂ ಸತ್ಯತೆಯನ್ನೂ ನನ್ನ ದಣಿಯಿಂದ ತೆಗೆಯಲಿಲ್ಲ; ನನ್ನನ್ನು ನನ್ನ ದಣಿಯ ಬಂಧುಗಳ ಮನೆಗೆ ನೆಟ್ಟನೆ ದಾರಿಯಿಂದಲೇ ಕರೆದುಕೊಂಡು ಬಂದಿದ್ದಾನೆ” ಎಂದನು.


ಅನಂತರ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತುಕೊಂಡು, “ಕರ್ತನಾದ, ಯೆಹೋವನೇ, ನಾನೆಷ್ಟರವನು? ನನ್ನ ಮನೆ ಎಷ್ಟರದು? ನೀನು ನನ್ನನ್ನು ಇಲ್ಲಿಯವರೆಗೂ ತಂದಿದ್ದಿಯಲ್ಲಾ.


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”


ನಾನು ಹೀಗೆ ಬರೆದು, ಬುದ್ಧಿಹೀನನಾಗಿದ್ದೇನೆ! ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು, ಯಾಕೆಂದರೆ ನಾನು ಕೇವಲ ಅಲ್ಪನಾದರೂ “ಅತಿಶ್ರೇಷ್ಟರಾದ, ಅಪೊಸ್ತಲರು” ಅನ್ನಿಸಿಕೊಳ್ಳುವವರಿಗಿಂತಲೂ ಒಂದರಲ್ಲಿಯಾದರೂ ಕಡಿಮೆಯಾದವನಲ್ಲ.


ನೀವು ನಿಮಗೆ ಅಪ್ಪಣೆಯಾಗಿರುವುದನ್ನೆಲ್ಲಾ ಮಾಡಿದ ಮೇಲೆ ‘ನಾವು ಆಳುಗಳು, ಪ್ರಯೋಜನವಿಲ್ಲದವರು, ಮಾಡಬೇಕಾದದ್ದನ್ನೇ ಮಾಡಿದ್ದೇವೆ’ ಅನ್ನಿರಿ” ಎಂದು ಹೇಳಿದನು.


ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು, “ಕರ್ತನೇ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗು” ಅಂದನು.


ನೀನು ಪುರಾತನ ಕಾಲದಿಂದಲೂ ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ, ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.


ಯೆಹೋವನು ನಮಗೆ ಅನುಗ್ರಹಿಸಿದ್ದನ್ನೆಲ್ಲಾ ಸ್ಮರಿಸಿ ಆತನ ಕೃಪಾಕಾರ್ಯಗಳನ್ನು ಮತ್ತು ಸ್ತುತ್ಯಕೃತ್ಯಗಳನ್ನು, ಆತನು ಕನಿಕರದಿಂದಲೂ, ಕೃಪಾತಿಶಯದಿಂದಲೂ ಇಸ್ರಾಯೇಲ್ ವಂಶದವರಿಗೆ ದಯಪಾಲಿಸಿರುವ ಮಹೋಪಕಾರವನ್ನೂ ಪ್ರಸಿದ್ಧಿಪಡಿಸುವೆನು.


ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು,


ನೀತಿವಂತರ ಮಾರ್ಗವು ಮಧ್ಯಾಹ್ನದ ವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.


ಆತನ ಶಾಶ್ವತ ಪ್ರೀತಿ ಮತ್ತು ನಂಬಿಗಸ್ತಿಕೆ ಒಂದನ್ನೊಂದು ಕೂಡಿರುವವು; ನೀತಿಯು, ಸಮಾಧಾನವು ಮುದ್ದಿಟ್ಟುಕೊಳ್ಳುವವು.


ಅವರು ಹೆಚ್ಚು ಹೆಚ್ಚಾಗಿ ಬಲಹೊಂದಿ, ಚೀಯೋನ್ ಗಿರಿಯಲ್ಲಿ ದೇವರ ಸನ್ನಿಧಿಯನ್ನು ಸೇರಿ,


ಅವನು ನಿನ್ನ ಸಾನ್ನಿಧ್ಯವನ್ನು ಪಡೆದು, ಸದಾಕಾಲವೂ ಸಿಂಹಾಸನಾರೂಢನಾಗಿರಲಿ; ನಿನ್ನ ಪ್ರೇಮ ಮತ್ತು ಸತ್ಯತೆಗಳು ಅವನನ್ನು ಕಾಯಲಿ.


ನಾನು ಯೆಹೋವನನ್ನು ಕುರಿತು, “ನೀನೇ ನನ್ನ ಒಡೆಯನು; ನನ್ನ ಸುಖವು ನಿನ್ನಲ್ಲಿಯೇ ಹೊರತು ಬೇರೆ ಇಲ್ಲ” ಎಂದು ಹೇಳುವೆನು.


ಅವನನ್ನು ದೇವರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ.


ಹೀಗಾದರೂ ಶಿಷ್ಟನು ತನ್ನ ಮಾರ್ಗವನ್ನೇ ಹಿಡಿದು ನಡೆಯುವನು, ಶುದ್ಧಹಸ್ತನು ಬಲಗೊಳ್ಳುತ್ತಲೇ ಇರುವನು.


ನಿನ್ನ ಮೊದಲನೆಯ ಸ್ಥಿತಿಯು ಅಲ್ಪವಾಗಿದ್ದರೂ, ನಿನ್ನ ಕಡೆಯ ಸ್ಥಿತಿಯು ಬಹಳ ವೃದ್ಧಿಹೊಂದುವುದು.


ಆದುದರಿಂದ ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮ್ಮ ಅನುಭವಕ್ಕೆ ಬಂದ ರೀತಿಯಲ್ಲಿ ನೆರವೇರಿಸುವವನಾಗಿ, ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವುದಕ್ಕೆ ಸಾಮರ್ಥ್ಯವನ್ನು ಕೊಟ್ಟವನೆಂದು ಜ್ಞಾಪಕಮಾಡಿಕೊಳ್ಳಿರಿ.


ಯಾಕೋಬನಿಗೆ ಬಹು ಭಯವೂ ಕಳವಳವೂ ಉಂಟಾದವು. ಅವನು ತನ್ನೊಂದಿಗಿದ್ದ ಜನರನ್ನು, ಕುರಿದನಗಳನ್ನು ಹಾಗೂ ಒಂಟೆಗಳನ್ನು ಎರಡು ಗುಂಪುಗಳಾಗಿ ವಿಭಾಗಿಸಿದನು.


ಈಗ ಅವನಿಗೆ ಎತ್ತು, ಕತ್ತೆ ಮುಂತಾದ ಪಶುಗಳ ಹಿಂಡುಗಳೂ ದಾಸದಾಸಿಯರು ಇದ್ದಾರೆ. ಅವನು ತಮ್ಮ ದಯೆ ಆತನ ಮೇಲೆ ಇರಬೇಕೆಂದು ತಿಳಿಸುವುದಕ್ಕೆ ನಿಮ್ಮನ್ನು ಕಳುಹಿಸಿದ್ದಾನೆ’” ಎಂದು ಹೇಳಿರಿ ಅಂದನು.


ಈ ಪ್ರಕಾರ ಯಾಕೋಬನು ಬಹಳ ಸಂಪತ್ತುಳ್ಳವನಾದನು. ಅವನಿಗೆ ಕುರಿಹಿಂಡುಗಳು, ದಾಸದಾಸಿಯರು, ಒಂಟೆ ಕತ್ತೆಗಳು, ಹೇರಳವಾಗಿದ್ದವು.


ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಪುನಃ ಈ ದೇಶಕ್ಕೆ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸದ ಹೊರತು ಬಿಡುವುದಿಲ್ಲ” ಎಂದನು.


ಅದಕ್ಕೆ ಅಬ್ರಹಾಮನು, “ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಸ್ವಾಮಿಯ ಸಂಗಡ ವಾದಿಸುವುದಕ್ಕೆ ಧೈರ್ಯಗೊಂಡಿದ್ದೇನೆ;


ದಾವೀದನು ಮಹನಯಿಮಿಗೆ ಹೋದನು. ಅಬ್ಷಾಲೋಮನು ಮತ್ತು ಇಸ್ರಾಯೇಲರೆಲ್ಲರೂ ಕೂಡಿಕೊಂಡು ಯೊರ್ದನ್ ನದಿಯನ್ನು ದಾಟಿದರು.


“ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ಈ ಹೊತ್ತು ನಾನು ಬಂದ ಕಾರ್ಯವನ್ನು ನೀನು ಸಫಲಪಡಿಸಿ ನನ್ನ ದಣಿಯಾದ ಅಬ್ರಹಾಮನಿಗೆ ದಯೆಯನ್ನು ತೋರಿಸಬೇಕೆಂದು ಬೇಡಿಕೊಳ್ಳುತ್ತೇನೆ.


ಇದಲ್ಲದೆ ಯೆಹೋವನು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆಯಾದ ಅಬ್ರಹಾಮನ ದೇವರೂ, ಇಸಾಕನ ದೇವರೂ ಆಗಿರುವ ಯೆಹೋವನು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.


ಮತ್ತು ಯೆಹೋವನು ಯಾಕೋಬನಿಗೆ, “ನೀನು ನಿನ್ನ ತಂದೆಯ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ಹಿಂತಿರುಗಿ ಹೋಗು, ನಾನು ನಿನ್ನೊಂದಿಗೆ ಇರುವೆನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು