Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನನ್ನ ಅಣ್ಣನಾದ ಏಸಾವನು ಬಂದು ನನ್ನನ್ನೂ, ನನ್ನ ಮಕ್ಕಳನ್ನೂ, ಅವರ ತಾಯಿಯರನ್ನೂ ಕೊಂದುಹಾಕುವನೋ ಎಂದು ನನಗೆ ಭಯವಿದೆ. ಅವನ ಕೈಗೆ ಸಿಕ್ಕದಂತೆ ನಮ್ಮನ್ನು ಕಾಪಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನನ್ನ ಅಣ್ಣ ಏಸಾವನು ಬಂದು ನನ್ನನ್ನೂ ನನ್ನ ಮಕ್ಕಳನ್ನೂ ಅವರ ತಾಯಂದಿರನ್ನೂ ಕೊಲ್ಲುವನೋ ಏನೋ ಎಂಬ ಭಯ ನನಗಿದೆ. ಅವನ ಕೈಗೆ ಸಿಕ್ಕದಂತೆ ನಮ್ಮನ್ನು ಕಾಪಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನನ್ನ ಅಣ್ಣನಾದ ಏಸಾವನು ಬಂದು ನನ್ನನ್ನೂ ನನ್ನ ಮಕ್ಕಳನ್ನೂ ಅವರ ತಾಯಿಯನ್ನೂ ಕೊಲ್ಲುವನೋ ಏನೋ ಎಂದು ನನಗೆ ಭಯವದೆ. ಅವನ ಕೈಗೆ ಸಿಕ್ಕದಂತೆ ನಮ್ಮನ್ನು ಕಾಪಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಇಂತಿರಲು, ದಯವಿಟ್ಟು ನನ್ನ ಅಣ್ಣನಿಂದ ನನ್ನನ್ನು ಕಾಪಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತಿರುವೆ. ಏಸಾವನಿಂದ ನನ್ನನ್ನು ಕಾಪಾಡು. ಅವನು ಬಂದು ನಮ್ಮೆಲ್ಲರನ್ನೂ ತಾಯಂದಿರನ್ನೂ ಮಕ್ಕಳನ್ನೂ ಕೊಲ್ಲುವನೆಂಬ ಭಯ ನನಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನನ್ನ ಅಣ್ಣ ಏಸಾವನ ಕೈಯಿಂದ ನನ್ನನ್ನು ತಪ್ಪಿಸಿರಿ. ಏಕೆಂದರೆ ಅವನು ಬಂದು ನನ್ನನ್ನೂ, ಮಕ್ಕಳೊಂದಿಗೆ ತಾಯಂದಿರನ್ನೂ, ದಾಳಿಮಾಡುವನು ಎಂದು ನಾನು ಅವನಿಗೆ ಭಯಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:11
21 ತಿಳಿವುಗಳ ಹೋಲಿಕೆ  

ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಅನ್ಯಾಯಹೊಂದಿದ ಸಹೋದರನನ್ನು ಗೆಲ್ಲುವುದು ಅಸಾಧ್ಯ, ಕೋಟೆಯ ಅಗುಳಿಗಳಂತೆ ಜಗಳಗಳು ಜನರನ್ನು ಅಗಲಿಸುತ್ತವೆ.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು


ಹೀಗಿರಲು ನಿಮ್ಮ ಕುಲಗಳವರಿಗೆ ವಿರುದ್ಧವಾಗಿ ಯುದ್ಧಘೋಷವು ಮೊಳಗುವುದು. ಕಾಳಗದ ದಿನದಲ್ಲಿ ಶಲ್ಮಾನನು ತಾಯಿ ಮತ್ತು ಮಕ್ಕಳನ್ನು ಒಟ್ಟಿಗೆ ಬಂಡೆಗೆ ಅಪ್ಪಳಿಸಲ್ಪಡುವುದು. ಬೇತ್ ಅರ್ಬೇಲ್ ಪಟ್ಟಣವನ್ನು ಸೂರೆಮಾಡಿದಂತೆ ನಿಮ್ಮ ಎಲ್ಲಾ ಕೋಟೆಗಳು ಸೂರೆಮಾಡಲ್ಪಡುವವು.


‘ಅರಸನೇ, ನಾವು ಆರಾಧಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಬೆಂಕಿಯೊಳಗಿಂದ ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.


ನನ್ನ ಕೂಗನ್ನು ಲಾಲಿಸು, ಬಲು ಕುಗ್ಗಿಹೋಗಿದ್ದೇನೆ. ಹಿಂಸಕರ ಕೈಯಿಂದ ನನ್ನನ್ನು ತಪ್ಪಿಸು, ಅವರು ನನಗಿಂತ ಬಲಿಷ್ಠರಾಗಿದ್ದಾರಲ್ಲಾ.


ನರ ಮನುಷ್ಯರ ಬಲಾತ್ಕಾರದಿಂದ ನನ್ನನ್ನು ಬಿಡಿಸು, ಆಗ ನಿನ್ನ ನಿಯಮಗಳನ್ನು ಕೈಗೊಳ್ಳುವೆನು.


ದೇವರೇ, ನ್ಯಾಯವನ್ನು ತೀರಿಸು; ನನಗೋಸ್ಕರ ವ್ಯಾಜ್ಯವನ್ನು ನಡೆಸಿ ಭಕ್ತಿ ಇಲ್ಲದ ಜನಾಂಗದಿಂದ ತಪ್ಪಿಸು, ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು.


ಕಿವಿಗೊಟ್ಟು ಕೇಳಿ ಬೇಗನೆ ನನ್ನನ್ನು ಬಿಡಿಸು; ನನ್ನನ್ನು ರಕ್ಷಿಸುವ ಆಶ್ರಯಗಿರಿಯೂ, ದುರ್ಗಸ್ಥಾನವೂ ಆಗಿರು.


ನನ್ನ ಪ್ರಾಣವನ್ನು ಕಾಪಾಡಿ ಉಳಿಸು; ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ, ನನಗೆ ಆಶಾಭಂಗವಾಗಬಾರದು.


ದೇವರೇ, ನಾನು ನಿನ್ನ ಶರಣಾಗತನು; ನನ್ನನ್ನು ಕಾಪಾಡು.


ಯೆಹೋವನು ನ್ಯಾಯಾಧಿಪತಿಯಾಗಿ ನಮ್ಮಿಬ್ಬರ ವ್ಯಾಜ್ಯವನ್ನು ತೀರಿಸಲಿ. ಆತನೇ ನೋಡಿ ನನಗೋಸ್ಕರ ವಾದಿಸಿ ನನ್ನನ್ನು ನಿನ್ನ ಕೈಯಿಂದ ತಪ್ಪಿಸಲಿ” ಎಂದು ಹೇಳಿದನು.


ಆಗ ಅವರು ಯೆಹೋವನಿಗೆ, ‘ನಾವು ಯೆಹೋವನಾದ ನಿನ್ನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸಿ ಪಾಪಮಾಡಿದ್ದೇವೆ. ಈಗ ಕೃಪೆಮಾಡಿ ನಮ್ಮನ್ನು ಶತ್ರುಗಳ ಕೈಯಿಂದ ಬಿಡಿಸು; ನಾವು ಇನ್ನು ಮುಂದೆ ನಿನ್ನನ್ನೇ ಸೇವಿಸುವೆವು’ ಎಂದು ಮೊರೆಯಿಟ್ಟರು.


ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿಮಿತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ, “ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು. ತರುವಾಯ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು” ಎಂದುಕೊಂಡನು.


ನೀವು ದಾರಿಯಲ್ಲಿ ಹೋಗುವಾಗ ಮರದ ಮೇಲಾಗಲಿ ಅಥವಾ ನೆಲದ ಮೇಲಾಗಲಿ ಇರುವ ಒಂದು ಪಕ್ಷಿಯ ಗೂಡಿನೊಳಗೆ ಮರಿಗಳು ಅಥವಾ ಮೊಟ್ಟೆಗಳು ಇದ್ದು, ಅವುಗಳ ಮೇಲೆ ತಾಯಿ ಹೊದಗಿರುವುದನ್ನು ಕಂಡರೆ ಮರಿಗಳನ್ನು ತೆಗೆದುಕೊಳ್ಳಬಹುದೇ ಹೊರತು ತಾಯಿಯನ್ನು ಹಿಡಿದುಕೊಳ್ಳಬಾರದು.


ಹಿರಿಮಗನಾದ ಏಸಾವನು ಹೇಳಿದ ಮಾತು ರೆಬೆಕ್ಕಳಿಗೆ ತಿಳಿದುಬಂದಾಗ ಆಕೆಯು ತನ್ನ ಕಿರಿಯ ಮಗನಾದ ಯಾಕೋಬನನ್ನು ಕರೆದು ಅವನಿಗೆ, “ನೋಡು, ನಿನ್ನ ಅಣ್ಣನಾದ ಏಸಾವನು ನಿನ್ನನ್ನು ಕೊಂದು ಸಮಾಧಾನದಿಂದ ಇರಬೇಕೆಂದುಕೊಂಡಿದ್ದಾನೆ.


ಬಳಿಕ ಯಾಕೋಬನು ತನಗಿಂತ ಮೊದಲು ಎದೋಮ್ಯರ ಪ್ರದೇಶವಾಗಿರುವ ಸೇಯೀರ್ ಸೀಮೆಗೆ ತನ್ನ ಅಣ್ಣನಾದ ಏಸಾವನ ಬಳಿಗೆ ಸೇವಕರನ್ನು ಕಳುಹಿಸಿದನು.


ಯಾಕೋಬನಿಗೆ ಬಹು ಭಯವೂ ಕಳವಳವೂ ಉಂಟಾದವು. ಅವನು ತನ್ನೊಂದಿಗಿದ್ದ ಜನರನ್ನು, ಕುರಿದನಗಳನ್ನು ಹಾಗೂ ಒಂಟೆಗಳನ್ನು ಎರಡು ಗುಂಪುಗಳಾಗಿ ವಿಭಾಗಿಸಿದನು.


ಆಗ ಏಸಾವನು ಅವನನ್ನು ಎದುರುಗೊಳ್ಳುವುದಕ್ಕೆ ಓಡಿ ಬಂದು ಅವನ ಕೊರಳನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವರಿಬ್ಬರೂ ಅತ್ತರು.


“ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಪ್ರೀತಿಯನ್ನೂ ಸತ್ಯತೆಯನ್ನೂ ನನ್ನ ದಣಿಯಿಂದ ತೆಗೆಯಲಿಲ್ಲ; ನನ್ನನ್ನು ನನ್ನ ದಣಿಯ ಬಂಧುಗಳ ಮನೆಗೆ ನೆಟ್ಟನೆ ದಾರಿಯಿಂದಲೇ ಕರೆದುಕೊಂಡು ಬಂದಿದ್ದಾನೆ” ಎಂದನು.


ಅನಂತರ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತುಕೊಂಡು, “ಕರ್ತನಾದ, ಯೆಹೋವನೇ, ನಾನೆಷ್ಟರವನು? ನನ್ನ ಮನೆ ಎಷ್ಟರದು? ನೀನು ನನ್ನನ್ನು ಇಲ್ಲಿಯವರೆಗೂ ತಂದಿದ್ದಿಯಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು