Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯಾಕೋಬನು ಆ ರಾತ್ರಿ ಅಲ್ಲೇ ತಂಗಿದನು. ತಾನು ತಂದದ್ದರಲ್ಲಿ ಕೆಲವನ್ನು ಸಹೋದರನಾದ ಏಸಾವನಿಗೆ ಕಾಣಿಕೆಯಾಗಿ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13-15 ಯಕೋಬನು ಆ ರಾತ್ರಿಯನ್ನು ಅಲ್ಲೇ ಕಳೆದನು. ಇನ್ನೂರು ಆಡು, ಇಪ್ಪತ್ತು ಹೋತ, ಇನ್ನೂರು ಕುರಿ, ಇಪ್ಪತ್ತು ಟಗರು, ಹಾಲು ಕರೆಯುವ ಮೂವತ್ತು ಒಂಟೆ ಮತ್ತು ಅವುಗಳ ಮರಿ, ನಲವತ್ತು ಆಕಳು, ಹತ್ತು ಹೋರಿ, ಇಪ್ಪತ್ತು ಹೆಣ್ಣುಕತ್ತೆ, ಹತ್ತು ಗಂಡುಕತ್ತೆ ಇವುಗಳನ್ನು ತನ್ನ ಅಣ್ಣ ಏಸಾವನಿಗೆ ಕಾಣಿಕೆಗಾಗಿ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13-14 ಅವನು ಆ ರಾತ್ರಿ ಅಲ್ಲೇ ಇಳುಕೊಂಡು ಇನ್ನೂರು ಆಡು, ಇಪ್ಪತ್ತು ಹೋತ, ಇನ್ನೂರು ಕುರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯಾಕೋಬನು ಆ ರಾತ್ರಿ ಅಲ್ಲಿಯೇ ಉಳಿದುಕೊಂಡು ಏಸಾವನಿಗೆ ಉಡುಗೊರೆಯಾಗಿ ಕೊಡಲು ಕೆಲವು ವಸ್ತುಗಳನ್ನು ಸಿದ್ಧಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯಾಕೋಬನು ಆ ರಾತ್ರಿ ಅಲ್ಲೇ ಕಳೆದನು. ತಾನು ತಂದದ್ದರಲ್ಲಿ ಕೆಲವನ್ನು ಅವನ ಅಣ್ಣ ಏಸಾವನಿಗೆ ಕಾಣಿಕೆಗಾಗಿ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:13
18 ತಿಳಿವುಗಳ ಹೋಲಿಕೆ  

ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ, “ಹಾಗಿದ್ದರೆ, ನೀವು ಹೀಗೆ ಮಾಡಿರಿ. ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ. ಸ್ವಲ್ಪ ತೈಲ, ಜೇನು, ಸುಗಂಧದ್ರವ್ಯ, ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಗೋಡಂಬಿ, ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.


ಕಾಣಿಕೆಯು ಅನುಕೂಲತೆಗೂ, ಶ್ರೀಮಂತರ ಸಾನ್ನಿಧ್ಯ ಪ್ರವೇಶಕ್ಕೂ ಸಾಧನ.


ಗುಪ್ತ ಬಹುಮಾನವು ಕೋಪವನ್ನಾರಿಸುವುದು, ಮಡಲಲ್ಲಿಟ್ಟ ಲಂಚವು ಕ್ರೋಧವನ್ನು ಅಣಗಿಸುವುದು.


ಉದಾರಿಯ ಕಟಾಕ್ಷವನ್ನು ಅನೇಕರು ಕೋರುವರು, ದಾನಶೂರನಿಗೆ ಪ್ರತಿಯೊಬ್ಬನೂ ಸ್ನೇಹಿತನಲ್ಲವೇ.


ಕೊಡುವವನ ದೃಷ್ಟಿಗೆ ಲಂಚವು ಚಿಂತಾಮಣಿಯಾಗಿದೆ, ಎಲ್ಲಿ ಹೋದರೂ ಅವನಿಗೆ ಅನುಕೂಲವೇ.


ಯೋಸೇಫನು ಮನೆಗೆ ಬಂದಾಗ, ಅವರು ತಮ್ಮ ಕೈಯಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಂದು, ಅವನಿಗೆ ಕೊಟ್ಟು, ಅವನ ಮುಂದೆ ಅಡ್ಡಬಿದ್ದರು.


ನಿನ್ನ ದಾಸಿಯು ತಂದ ಈ ಕಾಣಿಕೆಯನ್ನು ಸ್ವಾಮಿಯು ತಮ್ಮ ಸೇವಕರಿಗೆ ಸಲ್ಲಿಸಲಿ.


ನಿನ್ನ ಆಳುಗಳನ್ನು ಕೇಳು, ಅವರೇ ಹೇಳುವರು. ಹೀಗಿರುವುದರಿಂದ ಶುಭಕಾಲದಲ್ಲಿ ನಿನ್ನ ಬಳಿಗೆ ಬಂದಿರುವ ನನ್ನ ಸೇವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಕೃಪೆಮಾಡಿ ನಿನ್ನ ಸೇವಕರಿಗೂ ಮಗನಾದ ದಾವೀದನಿಗೂ ನಿನಗಿರುವುದರಲ್ಲಿ ಕೊಡು’ ಎಂದು ಹೇಳಿರಿ” ಎಂದು ಅವರನ್ನು ಕಳುಹಿಸಿದನು.


ಐಗುಪ್ತ ದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರುವವನು ಯೋಸೇಫನೇ ಆಗಿದ್ದನು. ಹೀಗಿರುವುದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.


ಯಾಕೋಬನು, “ಹಾಗಲ್ಲ, ನಿನಗೆ ನನ್ನ ಮೇಲೆ ದಯೆಯಿದ್ದರೆ, ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಬೇಕು. ನಿನ್ನನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು, ನನ್ನನ್ನು ಪ್ರೀತಿಯಿಂದ ಅಂಗೀಕರಿಸಿದ್ದೇ ವಿಶೇಷ ಸಂಗತಿಯಾಗಿದೆ.


ಹೇಗೆಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನೆದುರಿನಲ್ಲಿ ಮೂವರು ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವುದಕ್ಕೆ ಅವನು ಗುಡಾರದ ಬಾಗಿಲಿನಿಂದ ಓಡಿ ಹೋಗಿ ತಲೆಬಾಗಿ ನಮಸ್ಕರಿಸಿ.


ಇನ್ನೂರು ಆಡುಕುರಿ, ಇಪ್ಪತ್ತು ಹೋತ, ಇಪ್ಪತ್ತು ಟಗರು, ಮರಿಯೊಡನೆ ಹಾಲು ಕರೆಯುವ


ಏಸಾವನು, “ನಾನು ದಾರಿಯಲ್ಲಿ ಕಂಡ ಆ ಪಶುಗಳು ಯಾತಕ್ಕೆ?” ಎಂದು ಕೇಳಲು ಯಾಕೋಬನು, “ಸ್ವಾಮಿಯವರ ದಯೆ ನನಗೆ ದೊರಕಬೇಕೆಂದು ನಾನು ತಮಗೆ ಅವುಗಳನ್ನು ಕಳುಹಿಸಿಕೊಟ್ಟೆನು” ಎಂದನು.


ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂಮಿಯಲ್ಲಿರುವ ಧೂಳನ್ನು ಲೆಕ್ಕಮಾಡುವುದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಬಹುದು.


“ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವುದು ನಿನ್ನಿಂದಾದರೆ ಲೆಕ್ಕಿಸು.” ನಂತರ ಯೆಹೋವನು ಅಬ್ರಾಮನಿಗೆ, “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂದು ಹೇಳಿದನು.


ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು.


ಆಗ ನಾನು ಜನರಿಗೆ ಕತ್ತಿ, ಬಿಲ್ಲು, ಬರ್ಜಿಗಳನ್ನು ಹಿಡಿದುಕೊಂಡು ಗೋಡೆಯ ಹಿಂದಣ ತಗ್ಗಾದ ಬಯಲುಗಳಲ್ಲಿ ಗೋತ್ರಗೋತ್ರಗಳಾಗಿ ನಿಲ್ಲಬೇಕೆಂದು ಆಜ್ಞಾಪಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು