ಆದಿಕಾಂಡ 32:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇವುಗಳಲ್ಲಿ ಪ್ರತಿಯೊಂದು ಹಿಂಡನ್ನು ತನ್ನ ಸೇವಕನಿಗೆ ಒಪ್ಪಿಸಿ, “ನೀವು ನನಗಿಂತ ಮುಂಚಿತವಾಗಿ ನದಿಯನ್ನು ದಾಟಿ ಹೋಗಿರಿ ಮತ್ತು ಪ್ರತಿ ಹಿಂಡು ಹಿಂಡಿಗೂ ಮಧ್ಯದಲ್ಲಿ ಅಂತರವಿರಲಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇವುಗಳನ್ನು ಹಿಂಡುಹಿಂಡಾಗಿ ವಿಂಗಡಿಸಿ ತನ್ನ ಆಳುಗಳ ವಶಕ್ಕೆ ಒಪ್ಪಿಸಿದನು. “ನೀವು ನನಗಿಂತ ಮುಂಚಿತವಾಗಿ ಹೋಗಿರಿ; ಹಿಂಡು ಹಿಂಡಿಗೂ ಮಧ್ಯೆ ಸ್ಥಳವಿರಲಿ,” ಎಂದು ಆ ಆಳುಗಳಿಗೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇವುಗಳ ಪ್ರತಿಯೊಂದು ಹಿಂಡನ್ನು ತನ್ನ ಸೇವಕರ ವಶಕ್ಕೆ ಒಪ್ಪಿಸಿ - ನೀವು ನನಗಿಂತ ಮುಂಚಿತವಾಗಿ ನದಿಯನ್ನು ದಾಟಿಹೋಗಿರಿ, ಮತ್ತು ಹಿಂಡು ಹಿಂಡಿಗೆ ಬಿಡುವು ಇರಲಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯಾಕೋಬನು ಪಶುಗಳ ಪ್ರತಿಯೊಂದು ಮಂದೆಯನ್ನೂ ತನ್ನ ಸೇವಕರ ವಶಕ್ಕೆ ಕೊಟ್ಟನು. ಆಮೇಲೆ ಯಾಕೋಬನು ಸೇವಕರಿಗೆ, “ಪಶುಗಳ ಪ್ರತಿಯೊಂದು ಗುಂಪನ್ನು ವಿಂಗಡಿಸಿ ನನ್ನ ಮುಂದೆ ಹೋಗಿರಿ; ಅಲ್ಲದೆ ಪ್ರತಿಯೊಂದು ಮಂದೆಯ ನಡುವೆಯೂ ಸ್ವಲ್ಪ ಅಂತರವಿರಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇವುಗಳಲ್ಲಿ ಪ್ರತಿಯೊಂದು ಮಂದೆಯನ್ನೂ, ಪ್ರತ್ಯೇಕವಾಗಿ ಅವನು ತನ್ನ ಸೇವಕರಿಗೆ ಒಪ್ಪಿಸಿ, ಅವರಿಗೆ, “ನನ್ನ ಮುಂದೆ ನಡೆದು ಮಂದೆ ಮಂದೆಗೂ ಮಧ್ಯದಲ್ಲಿ ಸ್ಥಳ ಬಿಡಿರಿ,” ಎಂದನು. ಅಧ್ಯಾಯವನ್ನು ನೋಡಿ |