ಆದಿಕಾಂಡ 32:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯಾಕೋಬನು ತನ್ನೊಳಗೆ, “ನನ್ನ ಮುಂದೆ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸುವೆನು. ಆಮೇಲೆ ಅವನನ್ನು ಸಂಧಿಸುವಾಗ, ಒಂದು ವೇಳೆ ನನ್ನನ್ನು ಪ್ರೀತಿಯಿಂದ ಸ್ವೀಕರಿಸುವನೇನೋ” ಎಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ‘ನಿಮ್ಮ ದಾಸ ಯಕೋಬನು ನಮ್ಮ ಹಿಂದೆ ಬರುತ್ತಿದ್ದಾರೆ,’ ಎನ್ನಿರಿ” ಎಂದು ಆಜ್ಞಾಪಿಸಿದನು. ಯಕೋಬನು ತನ್ನೊಳಗೆ, “ನನಗೆ ಮುಂಚಿತವಾಗಿ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸಿದ ಮೇಲೆ ನಾನು ಅವನನ್ನು ಭೇಟಿ ಆಗುತ್ತೇನೆ. ಆಗ ಒಂದು ವೇಳೆ ನನ್ನನ್ನು ಪ್ರೀತಿಯಿಂದ ಅಂಗೀಕರಿಸುವನು,” ಎಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಇದೇ ರೀತಿಯಾಗಿ ಮಾತಾಡಿ - ನಿಮ್ಮ ಸೇವಕನಾದ ಯಾಕೋಬನೇ ನಮ್ಮ ಹಿಂದೆ ಬರುತ್ತಾನೆ ಅನ್ನಿರಿ ಎಂದು ಅಪ್ಪಣೆಕೊಟ್ಟನು. ಯಾಕೋಬನು ತನ್ನೊಳಗೆ - ನನ್ನ ಮುಂದೆ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸಿದ ಮೇಲೆ ಅವನ ಸನ್ನಿಧಿಗೆ ಸೇರುವೆನು; ಒಂದು ವೇಳೆ ನನ್ನನ್ನು ಪ್ರೀತಿಯಿಂದ ಅಂಗೀಕರಿಸುವನು ಅಂದುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನೀವು ಅವನಿಗೆ, ‘ಇದು ನಿನಗೆ ಕಳುಹಿಸಿರುವ ಉಡುಗೊರೆ. ಅಲ್ಲದೆ ನಿನ್ನ ಸೇವಕನಾದ ಯಾಕೋಬನು ನಮ್ಮ ಹಿಂದೆ ಬರುತ್ತಿದ್ದಾನೆ’ ಎಂದು ಹೇಳಬೇಕು” ಎಂದು ತಿಳಿಸಿದನು. “ನಾನು ಈ ಜನರನ್ನು ಉಡುಗೊರೆಗಳೊಡನೆ ಮುಂದೆ ಕಳುಹಿಸಿದರೆ, ಒಂದುವೇಳೆ ಏಸಾವನು ನನ್ನನ್ನು ಕ್ಷಮಿಸಿ ನನ್ನನ್ನು ಸ್ವೀಕರಿಸಿಕೊಳ್ಳಬಹುದು” ಎಂಬುದು ಯಾಕೋಬನ ಆಲೋಚನೆಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಇದಲ್ಲದೆ, ‘ನಿನ್ನ ದಾಸ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು,’ ” ಎಂದು ಆಜ್ಞಾಪಿಸಿದನು. ಏಕೆಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ಕಾಣುವೆನು. ಅವನು ನನ್ನನ್ನು ಅಂಗೀಕರಿಸುವನೇನೋ ಎಂದುಕೊಂಡನು. ಅಧ್ಯಾಯವನ್ನು ನೋಡಿ |