ಆದಿಕಾಂಡ 32:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಈಗ ಅವನಿಗೆ ಎತ್ತು, ಕತ್ತೆ ಮುಂತಾದ ಪಶುಗಳ ಹಿಂಡುಗಳೂ ದಾಸದಾಸಿಯರು ಇದ್ದಾರೆ. ಅವನು ತಮ್ಮ ದಯೆ ಆತನ ಮೇಲೆ ಇರಬೇಕೆಂದು ತಿಳಿಸುವುದಕ್ಕೆ ನಿಮ್ಮನ್ನು ಕಳುಹಿಸಿದ್ದಾನೆ’” ಎಂದು ಹೇಳಿರಿ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನನಗೆ ಎತ್ತು - ಕತ್ತೆ, ಆಡು - ಕುರಿ, ದಾಸ - ದಾಸಿಯರು ಇದ್ದಾರೆ. ನನ್ನೊಡೆಯರಾದ ನೀವು ನನ್ನ ಬಗ್ಗೆ ದಯದಾಕ್ಷಿಣ್ಯವುಳ್ಳವರಾಗಿರಬೇಕೆಂಬ ಕೋರಿಕೆಯಿಂದ ನಮ್ಮನ್ನು ನಿಮ್ಮ ಬಳಿಗೆ ಕಳಿಸಿದ್ದಾರೆ' ಎಂದು ತಿಳಿಸಿರಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವನಿಗೆ ಎತ್ತು, ಕತ್ತೆ ಮುಂತಾದ ಪಶುಗಳ ಹಿಂಡುಗಳೂ ದಾಸದಾಸೀಜನವೂ ಉಂಟಾದವು; ತಮ್ಮ ದಯವಿರಬೇಕೆಂದು ಪ್ರಭುಗಳಿಗೆ ತಿಳಿಸುವದಕ್ಕೆ ನಮ್ಮನ್ನು ಕಳುಹಿಸಿದ್ದಾನೆಂದು ಹೇಳಿರಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನನಗೆ ಅನೇಕ ದನಗಳೂ, ಕತ್ತೆಗಳೂ, ಆಡುಕುರಿಗಳೂ ಮತ್ತು ಸೇವಕಸೇವಕಿಯರೂ ಇದ್ದಾರೆ. ಸ್ವಾಮೀ, ನೀವು ನಮ್ಮನ್ನು ಸ್ವೀಕರಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತಿದ್ದೇನೆ.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಈಗ ನನಗೆ ಎತ್ತು, ಕತ್ತೆ, ಕುರಿಗಳು, ದಾಸದಾಸಿಯರು ಇದ್ದಾರೆ. ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದುವಂತೆ ನಾನು ಈ ಸಂದೇಶವನ್ನು ನನ್ನ ಯಜಮಾನನಾದ ನಿಮಗೆ ತಿಳಿಸುವುದಕ್ಕಾಗಿ ಕಳುಹಿಸಿದ್ದೇನೆ,’ ಎಂದು ಹೇಳಿರಿ,” ಎಂದನು. ಅಧ್ಯಾಯವನ್ನು ನೋಡಿ |