ಆದಿಕಾಂಡ 32:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇದಲ್ಲದೆ ಯಾಕೋಬನು ದೇವರನ್ನು ಪ್ರಾರ್ಥಿಸಿ, “ಯೆಹೋವನೇ, ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ‘ನಿನ್ನ ಸ್ವದೇಶಕ್ಕೂ, ಬಂಧುಗಳ ಬಳಿಗೂ ತಿರುಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೆಯದನ್ನು ಮಾಡುವೆನೆಂದು’ ನನಗೆ ವಾಗ್ದಾನ ಮಾಡಿದ ಯೆಹೋವನೇ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇದಲ್ಲದೆ ಯಕೋಬನು ದೇವರನ್ನು ಹೀಗೆಂದು ಪ್ರಾರ್ಥಿಸಿದನು: “ಸ್ವಾಮಿ ಸರ್ವೇಶ್ವರಾ, ನನ್ನ ತಂದೆ ತಾತಂದಿರಾದ ಇಸಾಕ, ಅಬ್ರಹಾಮರ ದೇವರೇ, ಸ್ವಂತ ನಾಡಿಗೆ, ಬಂಧುಬಳಗದವರ ಬಳಿಗೆ ಹಿಂದಿರುಗಬೇಕೆಂದು ನನಗೆ ನೀವೇ ಆಜ್ಞಾಪಿಸಿದಿರಿ: 'ನಿನಗೆ ಒಳ್ಳೆಯದನ್ನೇ ಮಾಡುತ್ತೇನೆ' ಎಂದು ವಾಗ್ದಾನ ಮಾಡಿದವರು ನೀವೇ ಅಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇದಲ್ಲದೆ ಅವನು ದೇವರನ್ನು ಪ್ರಾರ್ಥಿಸಿ - ಯೆಹೋವನೇ, ನನ್ನ ತಂದೆತಾತಂದಿರಾದ ಇಸಾಕ ಅಬ್ರಹಾಮರ ದೇವರೇ, ಸ್ವದೇಶಕ್ಕೆ ಬಂಧುಗಳ ಬಳಿಗೆ ತಿರಿಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೇದನ್ನು ಮಾಡುವೆನೆಂದು ನನಗೆ ವಾಗ್ದಾನ ಮಾಡಿದವನು ನೀನೇ ಅಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯಾಕೋಬನು, “ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರಾಗಿರುವ ಯೆಹೋವನೇ, ನನ್ನ ದೇಶಕ್ಕೆ ಮತ್ತು ನನ್ನ ಕುಟುಂಬಕ್ಕೆ ಹಿಂತಿರುಗಿ ಬರುವಂತೆ ನೀನು ಹೇಳಿದೆ. ನೀನು ನನಗೆ ಒಳ್ಳೆಯದನ್ನು ಮಾಡುವುದಾಗಿ ಹೇಳಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇದಲ್ಲದೆ ಯಾಕೋಬನು, “ನನ್ನ ತಂದೆ ಅಬ್ರಹಾಮನ ದೇವರೇ, ನನ್ನ ತಂದೆ ಇಸಾಕನ ದೇವರೇ, ನಿಮ್ಮ ದೇಶಕ್ಕೂ, ನಿನ್ನ ಬಂಧುಗಳ ಬಳಿಗೂ ಹಿಂದಿರುಗಿ ಹೋಗು. ಆಗ ನಾನು ನಿನಗೆ ಒಳ್ಳೆಯದನ್ನು ಮಾಡುವೆನು ಎಂದು ನನಗೆ ಹೇಳಿದ ಯೆಹೋವ ದೇವರೇ, ಅಧ್ಯಾಯವನ್ನು ನೋಡಿ |